ವಿಶ್ವ ಪ್ರಜಾಪ್ರಭುತ್ವ ದಿನಾಚರಣೆ:ಚಾಮರಾಜನಗರದಲ್ಲಿ ಜಗತ್ತಿನ ಅತಿದೊಡ್ಡ ಮಾನವ ಸರಪಳಿ

Date:

ವಿಶ್ವ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಜಗತ್ತಿನ ಅತಿದೊಡ್ಡ ಮಾನವ ಸರಪಳಿಗೆ ಚಾಮರಾಜನಗರ ಕೂಡ ಬೆಸೆದುಕೊಂಡಿತು. ಚಾಮರಾಜನಗರ ಮತ್ತು ಮೈಸೂರು ಗಡಿಭಾಗವಾದ ಮೂಗುರು ಕ್ರಾಸ್‌ನಲ್ಲಿ ಆರಂಭಗೊಂಡ ಮಾನವ ಸರಪಳಿ ನಗರದ ರಾಮಸಮುದ್ರದ ಅಂಬೇಡ್ಕರ್ ಪ್ರತಿಮೆ ಬಳಿ ಕೊನೆಗೊಂಡಿತು.

- Advertisement -

ಶಾಲಾ-ಕಾಲೇಜಿನ ವಿದ್ಯಾರ್ಥಿಗಳು ಮಾನವ ಸರಪಳಿ ಹಾದು ಹೋಗಿದ್ದ ಮಾರ್ಗದಲ್ಲಿ ಭಾರತದ ವಿವಿಧ ರಾಜ್ಯದ ಉಡುಪು ಧರಿಸಿ ವಿವಿಧೆತೆಯಲ್ಲಿ ಏಕತೆಯ ಸಂಸ್ಕೃತಿ ಪ್ರತಿಬಿಂಬಿಸಿದರು. ಕರ್ನಾಟಕ, ತಮಿಳುನಾಡು, ತೆಲಂಗಾಣ, ಆಂದ್ರಪ್ರದೇಶ, ಮಹಾರಾಷ್ಟ್ರ, ಜಾರ್ಖಂಡ್ ಹೀಗೆ ವಿವಿಧ ರಾಜ್ಯಗಳ ಸಾಂಪ್ರದಾಯಿಕ ಉಡುಪು ಧರಿಸಿ ಆಯಾ ರಾಜ್ಯದ ಭೂಪಟ ಹಿಡಿದು ನಾವೆಲ್ಲ ಒಂದು ಎನ್ನುವ ಸಂಕೇತವನ್ನು ಸೂಚಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಮಾನವ ಸರಪಳಿಯ ಪ್ರಮುಖ ವೃತ್ತಗಳಲ್ಲಿ ಜಾನಪದ ನೃತ್ಯ ಪ್ರಸ್ತುತ ಪಡಿಸಲಾಯಿತು. ಸೋಲಿಗರ ಗೊರುಕನ, ಜೇನುಕುರುಬರ ನೃತ್ಯ, ಗೊರವರ ಕುಣಿತ, ಹುಲಿ ವೇಷ, ವೀರಗಾಸೆ ಸೇರಿದಂತೆ ವಿವಿಧ ಜಾನಪದ ಕಲಾತಂಡಗಳು ಗಮನ ಸೆಳೆದವು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ: ಆಶಯವೋ, ಅಣಕವೋ?

ಪ್ರಜಾಪ್ರಭುತ್ವದ ಸಂಭ್ರಮಾಚರಣೆ ಹಿನ್ನೆಲೆ ಸರ್ಕಾರಿ ನೌಕರರು, ಕಾಲೇಜಿನ ಉಪನ್ಯಾಸಕರು, ಸಾರ್ವಜನಿಕರು, ರೈತರು, ಕನ್ನಡ ಪರ ಹೋರಾಟಗಾರರು ಪ್ರತಿನಿಧಿಸಿದರು. ಮಹಿಳೆಯರು ಹಸಿರು ಸೀರೆ, ಪುರುಷರು ಬಿಳಿ ಪಂಚೆ, ಶರ್ಟ್, ಶಲ್ಯ ಧರಿಸಿ ಮಿಂಚಿದರು. ರೈತರು ಹಸಿರು ಟವೆಲ್, ಕನ್ನಡಪರ ಹೋರಾಟಗಾರರು ನಾಡ ಧ್ವಜ, ಹೋರಾಟಗಾರರು ನೀಲಿ ಶಲ್ಯ ಹೊದ್ದಿದ್ದರು. ಇನ್ನು ರಾಮಸಮುದ್ರದಲ್ಲಿ 1 ಕಿಲೋ ಮೀಟರ್ ಉದ್ದದ ಭಾರತ ಧ್ವಜ ಹಿಡಿದು ರಾಷ್ಟ್ರಗೀತೆ ಹಾಡಿದ್ದು ಗಮನ ಸೆಳೆಯಿತು.

ಗಡಿಜಿಲ್ಲೆ ಚಾಮರಾಜನಗರಲ್ಲಿ 25 ಕಿಲೋ ಮೀಟರ್‌ ಉದ್ದದ ಮಾನವ ಸರಪಳಿ ಕಾರ್ಯಕ್ರಮದಲ್ಲಿ ಸಾವಿರಾರು ಮಂದಿ ಸೇರಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕರ್ನಾಟಕ SIR | ಮತ ಹಕ್ಕಿಗೇ ಕನ್ನ: ಪರಿಶೋಧನಾ ವರದಿ ಬಿಚ್ಚಿಟ್ಟ ಮತದಾರರ ಕಣ್ಣೀರ ಕಥನ

ಪ್ರಜಾಪ್ರಭುತ್ವದ ಅಡಿಪಾಯವೇ ಮತದಾರ ಮತ್ತು ಮತದಾನ. ಆದರೆ, ಈ ಅಡಿಪಾಯವನ್ನೇ ಕೆಡವುವ...

ರಾಜ್ಯಕ್ಕೆ ₹3,705.30 ಕೋಟಿ ಬರ ಪರಿಹಾರ ನೀಡಿ: ಕೇಂದ್ರ ತಂಡಕ್ಕೆ ಸಿಎಂ ಡಿಕೆಶಿ ಮನವಿ

ಕರ್ನಾಟಕ ತೀವ್ರ ಬರ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರು ಹಾಗೂ ಜನಸಾಮಾನ್ಯರು ಸಂಕಷ್ಟಕ್ಕೆ...

ಹವಾಮಾನ ವರದಿ: ರಾಜ್ಯದ 8 ಜಿಲ್ಲೆಗಳಲ್ಲಿ ಮುಂದಿನ 10 ದಿನ ಭಾರೀ ಮಳೆ

ರಾಜ್ಯದ ಕರಾವಳಿ ಮತ್ತು ಮಲೆನಾಡು ಭಾಗದ 8ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮುಂದಿನ...