ಕುಸ್ತಿಪಟುಗಳ ಪ್ರತಿಭಟನೆ | ಸರ್ಕಾರದ ನಡೆ ಖಂಡನೀಯ: ರಾಮಚಂದ್ರ ಗುಹಾ

Date:

ದೆಹಲಿಯಲ್ಲಿ ಕುಸ್ತಿಪಟುಗಳು ನಡೆಸುತ್ತಿರುವ ಪ್ರತಿಭಟನೆಯನ್ನು ಬೆಂಬಲಿಸಿ ಬೆಂಗಳೂರಿನಲ್ಲಿ ಸಮಾನ ಮನಸ್ಕರು ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಇತಿಹಾಸಕಾರ ರಾಮಚಂದ್ರ ಗುಹಾ, ಅಥ್ಲೀಟ್ ರೀತ್ ಅಬ್ರಹಾಂ, ಈಜುಪಟು ನಿಶಾ ಮಿಲೆಟ್ ಮೊದಲಾದವರು ಭಾಗವಹಿಸಿದ್ದಾರೆ.

- Advertisement -

ಈ ಸಂದರ್ಭದಲ್ಲಿ ಮಾತನಾಡಿದ ರಾಮಚಂದ್ರ ಗುಹಾ ಅವರು, ʻʻಸಮಾಜ ಮತ್ತು ಕ್ರೀಡಾ ಕ್ಷೇತ್ರದಲ್ಲಿರುವ ಅಸಮಾನತೆ, ಭ್ರಷ್ಟಾಚಾರ ಮತ್ತು ಪುರುಷಾಧಿಪತ್ಯದ ವಿರುದ್ಧ ನಮ್ಮ ಕುಸ್ತಿಪಟುಗಳು ಹೋರಾಟ ನಡೆಸುತ್ತಿದ್ದಾರೆ. ಅಂತಾರಾಷ್ಟ್ರೀಯ ಮಟ್ಟದಲ್ಲಿ ದೇಶಕ್ಕೆ ಕೀರ್ತಿ ತಂದುಕೊಟ್ಟಂತಹ ಕ್ರೀಡಾಪಟುಗಳು ನ್ಯಾಯಕ್ಕಾಗಿ ಬೀದಿಗಿಳಿದು ಹೋರಾಡುತ್ತಿದ್ದಾರೆ. ಆದರೆ, ಸರ್ಕಾರ ಮಾತ್ರ ಕಣ್ಣು ಕಿವಿ ಇಲ್ಲದಂತೆ ವರ್ತಿಸುತ್ತಿರುವುದು ಅವಮಾನಕರʼʼ ಎಂದು ಬೇಸರ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ʻʻಕುಸ್ತಿ, ಸೈಕ್ಲಿಂಗ್‌, ಬ್ಯಾಡ್ಮಿಂಟನ್‌, ಅಥ್ಲೆಟಿಕ್ಸ್‌ ಸೇರಿ ಇವೆಲ್ಲವೂ ವಿಶ್ವ ಮಟ್ಟದ ಕ್ರೀಡೆಗಳು. ಈ ಕ್ಷೇತ್ರದಲ್ಲಿ ಸಾಧನೆ ಮಾಡುವುದೆಂದರೆ ಕಠಿಣ ಪರಿಶ್ರಮ ಅಗತ್ಯ. ಇಂತಹ ಕುಸ್ತಿಪಟುಗಳು ಕಳೆದ ಒಂದು ತಿಂಗಳಿಗೂ ಹೆಚ್ಚು ಸಮಯದಿಂದ ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದಾರೆ. ಅವರ ಸಮಸ್ಯೆ ಆಲಿಸದ ಸರ್ಕಾರ ಕುಸ್ತಿಪಟುಗಳೊಂದಿಗೆ ನಡೆದುಕೊಳ್ಳುತ್ತಿರುವ ರೀತಿ ಖಂಡನೀಯʼʼ ಎಂದು ಅವರು ಹೇಳಿದರು.

ಕ್ರೀಡಾಪಟು ರೀತ್‌ ಅಬ್ರಹಾಂ ಅವರೂ ರಾಷ್ಟ್ರಮಟ್ಟದಲ್ಲಿ ದೇಶಕ್ಕೆ ಹೆಮ್ಮೆ ತಂದಿರುವ ಕ್ರೀಡಾಪಟುಗಳನ್ನು ನಡೆಸಿಕೊಳ್ಳುತ್ತಿರುವ ರೀತಿಯನ್ನು ಖಂಡಿಸಿದ್ದಾರೆ. ʻʻಅಂತಾರಾಷ್ಟ್ರೀಯ ಮಟ್ಟದಲ್ಲಿ ಪದಕ ಗಳಿಸಿರುವ ಕುಸ್ತಿಪಟುಗಳು ಇಂದು ಬೀದಿಗಿಳಿದಿದ್ದಾರೆ ಎಂದರೆ, ಉಳಿದ ಅಥ್ಲೀಟ್‌ಗಳ ಪರಿಸ್ಥಿತಿ ಹೇಗಿರಬಹುದು ನೀವೇ ಯೋಚಿಸಿ. ಕಳೆದ ನಲವತ್ತು ವರ್ಷಗಳ ಕ್ರೀಡಾ ಕ್ಷೇತ್ರದ ಅನುಭವದಲ್ಲಿ ಹೇಳುವುದಾದರೆ, ಅಂದಿನಿಂದ ಇಂದಿನವರೆಗೂ ಈ ಕ್ಷೇತ್ರದಲ್ಲಿ ಇದ್ದ ಪರಿಸ್ಥಿತಿ ಈಗಲೂ ಹಾಗೆಯೇ ಇದೆ. ಪ್ರಸ್ತುತ ಮೂಲಭೂತ ಸೌಲಭ್ಯಗಳು ಹೆಚ್ಚಾಗಿವೆ. ಕ್ರೀಡಾಪಟುಗಳು ಪ್ರಶ್ನಿಸುವುದನ್ನು ಕಲಿತಿದ್ದಾರೆʼʼ ಎಂದರು.

ʻʻಭಾರತದ ಕುಸ್ತಿ ಒಕ್ಕೂಟದ ಅಧ್ಯಕ್ಷರಾಗಿರುವ ಬೃಜ್‌ ಭೂಷಣ್‌ ಸಿಂಗ್‌ ಅವರಿಗೆ, ರಾಜಕೀಯ ಬೆಂಬಲವಿದೆ ಎನ್ನುವ ಕಾರಣಕ್ಕೆ ಈವರೆಗೂ ಅವರ ಮೇಲೆ ಯಾವುದೇ ಕ್ರಮ ಕೈಗೊಂಡಿಲ್ಲ. ಇತರ ಕ್ರೀಡಾ ಒಕ್ಕೂಟಗಳಲ್ಲಿಯೂ ರಾಜಕೀಯ ವ್ಯಕ್ತಿಗಳೇ ಇದ್ದಾರೆ. ಕ್ರೀಡಾ ಕ್ಷೇತ್ರದ ಪ್ರಮುಖ ಸ್ಥಾನಗಳಲ್ಲಿ ರಾಜಕಾರಣಿಗಳಿಗೆ ಅವಕಾಶ ನೀಡಬಾರದುʼʼ ಎಂದು ಅವರು ಆಗ್ರಹಿಸಿದರು.

ಈ ಸುದ್ದಿ ಓದಿದ್ದೀರಾ?: ‘ಈ ದಿನ’ ಸಂಪಾದಕೀಯ | ಒಡಿಶಾ ಎದುರಿಸುತ್ತಿರುವ ಮಾಸಾಶನ ಸಮಸ್ಯೆ ಕರ್ನಾಟಕವನ್ನು ಕಾಡದಿರಲಿ

ಕುಸ್ತಿಪಟುಗಳು ನ್ಯಾಯಕ್ಕಾಗಿ ಆಗ್ರಹಿಸಿ ಮಳೆ, ಚಳಿಯನ್ನು ಲೆಕ್ಕಿಸದೇ ಬೀದಿಗಿಳಿದು ಪ್ರತಿಭಟಿಸುತ್ತಿದ್ದಾರೆ. ಮುಂಬರುವ ಪೀಳಿಗೆಯ ಅಥ್ಲೀಟ್‌ಗಳಿಗಾಗಿ ನಾವು ಕ್ರೀಡಾಕ್ಷೇತ್ರದಲ್ಲಿನ ಅನ್ಯಾಯಗಳ ವಿರುದ್ಧ ಧ್ವನಿಯೆತ್ತಬೇಕಿದೆ. ಆಡಳಿತ ವ್ಯವಸ್ಥೆಯಿಂದ ಉತ್ತಮ ವ್ಯವಸ್ಥೆ ಪಡೆಯಬೇಕಿದ್ದ ಕ್ರೀಡಾಪಟುಗಳು ಉತ್ತಮ ವ್ಯವಸ್ಥೆಗಾಗಿ ಆಗ್ರಹಿಸಿ ಬೀದಿಗಿಳಿದಿರುವುದು ಬೇಸರದ ಸಂಗತಿ ಎಂದು ಈಜುಪಟು ನಿಶಾ ಮಿಲ್ಲೆಟ್‌ ಬೇಸರ ವ್ಯಕ್ತಪಡಿಸಿದರು.

ಬೇಟಿ ಬಚಾವೋ, ಬೇಟಿ ಪಡಾವೋ ಎನ್ನುವ ಮೋದಿಯವರು ಕುಸ್ತಿಪಟುಗಳ ಪರವಾಗಿ ನಿಲ್ಲುತ್ತಿಲ್ಲವೇಕೆ? ನಮ್ಮ ದೇಶಕ್ಕೆ ಗೌರವ ತಂದುಕೊಟ್ಟ ಕುಸ್ತಿಪಟುಗಳಿಗೆ ನ್ಯಾಯ ಸಿಗಲೇಬೇಕು. ಬೃಜ್‌ ಭೂಷಣ್‌ ಸಿಂಗ್‌ನನ್ನು ಈ ಕೂಡಲೇ ಬಂಧಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ಮಾಜಿ ಗ್ರಾ. ಪಂ ಸದಸ್ಯನ ಬರ್ಬರ ಹತ್ಯೆ

ಲಕ್ಕುಂಡಿ ಗ್ರಾಮದ ಹೊರವಲಯದಲ್ಲಿ ಗ್ರಾಮ ಪಂಚಾಯಿತಿ ಮಾಜಿ ಸದಸ್ಯರೊಬ್ಬರನ್ನು ಬರ್ಬರವಾಗಿ ಹತ್ಯೆ...

ಹಾವೇರಿ‌ | ಬಾಲಕರ ವಸತಿ ನಿಲಯಕ್ಕೆ ಜಿಲ್ಲಾಧಿಕಾರಿ ಭೇಟಿ ನೀಡಿ ಪರಿಶೀಲನೆ

ಚುನಾವಣಾ ಸಂಬಂಧಿತ ಕಾರ್ಯಗಳ ಪರಿಶೀಲನೆಯ ಜೊತೆಗೆ, ಹಾವೇರಿ ಜಿಲ್ಲೆಯ ಹಾನಗಲ್ಲ ತಾಲೂಕಿನ...

ಗದಗ | ಮಾನವ ದಿನಗಳ ಸೃಜನೆ ಮಾಡದಿದ್ದರೇ ಶಿಸ್ತು ಕ್ರಮ : ಜಿಪಂ ಸಿಇಓ ಮುಕುಲ್ ಜೈನ್

ರೋಣ ತಾಲೂಕಿನಲ್ಲಿ ಮಾನವ ದಿನಗಳ ಸೃಜನೆ ತುಂಬಾ ಕಡಿಮೆ ಇದೆ. ಮಾನವ...

ಮಹಿಷಮಂಡಲದ ಇತಿಹಾಸಕ್ಕೆ ಮರುಜೀವ: ಮೈಸೂರಿನಲ್ಲಿ ಮಹಿಷಮಂಡಲೋತ್ಸವ-2026

ರಾಜ್ಯದ ಪ್ರಗತಿಪರ ಚಿಂತಕರು, ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ದಲಿತ ಸಂಘಟನೆಗಳು,...