ಕುತಂತ್ರದಿಂದ ಯತ್ನಾಳಗೆ ವಿಪಕ್ಷ ನಾಯಕ ಸ್ಥಾನ ತಪ್ಪಿದೆ : ಜಯ ಮೃತ್ಯುಂಜಯ ಸ್ವಾಮೀಜಿ

Date:

  • ‘ಯತ್ನಾಳ ವಿರೋಧ ಪಕ್ಷದ ನಾಯಕ ಆಗುತ್ತಾರೆ ಎಂಬ ಅಪೇಕ್ಷೆ ಪಟ್ಟಿದ್ದರು’
  • ‘ಒಳಸಂಚಿನಿಂದಾಗಿ ಅವರಿಗೆ ಕೊನೇ ಗಳಿಗೆಯಲ್ಲಿ ಅನ್ಯಾಯವಾಗಿದೆ’

ರಾಜ್ಯದ ಬಹುತೇಕ ಜನರು ಬಸನಗೌಡ ಪಾಟೀಲ ಯತ್ನಾಳ ವಿರೋಧ ಪಕ್ಷದ ನಾಯಕ ಆಗುತ್ತಾರೆ ಎಂಬ ಅಪೇಕ್ಷೆ ಪಟ್ಟಿದ್ದರು. ಆದರೆ, ಪಂಚಮಸಾಲಿ ಮೀಸಲಾತಿ ಹೋರಾಟಕ್ಕೆ ಅಸಹಕಾರ ತೋರಿದ ಮನಸ್ಸುಗಳ ಒಳಸಂಚು ಮತ್ತು ಕುತಂತ್ರದಿಂದ ಅವರಿಗೆ ವಿಪಕ್ಷ ನಾಯಕನ ಸ್ಥಾನ ಕೈತಪ್ಪಿದೆ ಎಂದು ಕೂಡಲಸಂಗಮ ಲಿಂಗಾಯತ ಪಂಚಮಸಾಲಿ ಪೀಠದ ಬಸವಜಯ ಮೃತ್ಯುಂಜಯ ಸ್ವಾಮೀಜಿ ಆರೋಪಿಸಿದರು.

ವಿಜಯಪುರದಲ್ಲಿ ಶನಿವಾರ ಸುದ್ದಿಗೋಷ್ಠಿ ಕರೆದು ಮಾತನಾಡಿದ ಅವರು, “ಯತ್ನಾಳ ಅವರಿಗೆ ವಿರೋಧ ಪಕ್ಷದ ನಾಯಕ ಸ್ಥಾನ ನೀಡಬೇಕು ಎಂದು ಸಮಾಜ ಕೇಳಿರಲಿಲ್ಲ. ಆದರೆ, ಒಳಸಂಚಿನಿಂದಾಗಿ ಅವರಿಗೆ ಕೊನೇ ಗಳಿಗೆಯಲ್ಲಿ ಅನ್ಯಾಯವಾಗಿದೆ” ಎಂದು ಹೇಳಿದರು.

“ಬಿಜೆಪಿಯಲ್ಲಿ ಯತ್ನಾಳ ಅವರಷ್ಟು ಜನಪ್ರಿಯ ನಾಯಕ ಸದ್ಯ ಯಾರೂ ಇರಲಿಲ್ಲ. ನಮ್ಮ ಸಮಾಜದವರು ಸೇರಿದಂತೆ ಉತ್ತರ ಕರ್ನಾಟಕದವರು ಈ ಬಗ್ಗೆ ವಿರೋಧ ವ್ಯಕ್ತಪಡಿಸುತ್ತೇವೆ. ಯತ್ನಾಳ ಅವರಿಗೆ ಅನ್ಯಾಯ ಆಗಿರುವುದರಿಂದ ಸಮಾಜದಲ್ಲಿ ದೊಡ್ಡ ಅಸಮಾಧಾನ ಉಂಟಾಗಿದೆ” ಎಂದರು.

“ಉತ್ತರ ಕರ್ನಾಟಕ ಭಾಗದ ಲಿಂಗಾಯತ ನಾಯಕರನ್ನು ಅದರಲ್ಲೂ ವಿಶೇಷವಾಗಿ ಪಂಚಮಸಾಲಿ ಮೀಸಲಾತಿ ಹೋರಾಟದ ಮುಂಚೂಣಿಯಲ್ಲಿ ಇದ್ದವನ್ನು ಬಿಜೆಪಿ ಮತ್ತು ಕಾಂಗ್ರೆಸ್‌ ಪಕ್ಷಗಳು ಕಡೆಗಣಿಸುತ್ತಾ ಬಂದಿವೆ” ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಈ ಸುದ್ದಿ ಓದಿದ್ದೀರಾ? ಸುಗ್ರೀವಾಜ್ಞೆ ಮೂಲಕ ಒಳಮೀಸಲಾತಿ ಜಾರಿಗೊಳಿಸಿ: ಪ್ರಧಾನಿ ಮೋದಿಗೆ ಖರ್ಗೆ ಒತ್ತಾಯ

ಮೀಸಲಾತಿ ವಿಚಾರವಾಗಿ ಪ್ರತಿಕ್ರಿಯಿಸಿದ ಸ್ವಾಮೀಜಿ, “ರಾಜ್ಯ ಸರ್ಕಾರ ಪಂಚಮಸಾಲಿ ಮೀಸಲಾತಿ ಹೋರಾಟಗಾರರು, ನಾಯಕರ ಜೊತೆ ಮಾತುಕತೆ ನಡೆಸಿ, ಇರುವಂತ ಕಾನೂನು ಅಡೆತಡೆಯನ್ನು ನಿವಾರಿಸಿ, ನ್ಯಾಯ ಕೊಡಿಸುವ ಭರವಸೆ ನೀಡಬೇಕು. ಈ ಕೆಲಸ ಬೆಳಗಾವಿಯಲ್ಲಿ ಡಿಸೆಂಬರ್‌ನಲ್ಲಿ ನಡೆಯಲಿರುವ ವಿಧಾನಸಭಾ ಅಧಿವೇಶನಕ್ಕೂ ಮೊದಲು ನಡೆಯಬೇಕು” ಎಂದು ಗಡುವು ನೀಡಿದರು.

”ಲೋಕಸಭಾ ಚುನಾವಣೆ ಒಳಗಾಗಿ ಪಂಚಮಸಾಲಿ ಸಮಾಜಕ್ಕೆ ರಾಜ್ಯ ಸರ್ಕಾರ 2 ‘ಎ’ ಮೀಸಲಾತಿ ಕಲ್ಪಿಸಬೇಕು. ಎಲ್ಲ ಲಿಂಗಾಯತರನ್ನು ಕೇಂದ್ರದ ಒಬಿಸಿ ಮೀಸಲಾತಿ ಪಟ್ಟಿಗೆ ಸೇರಿಸಲು ಶಿಫಾರಸು ಮಾಡಬೇಕು. ಸರ್ಕಾರ ಯಾವುದೇ ಸ್ಪಂದನೆ ನೀಡದೇ ಇದ್ದರೇ ವಿಧಾನಸೌಧದ ಆವರಣದಲ್ಲಿ ಇಷ್ಟಲಿಂಗ ಪೂಜೆ ಸಲ್ಲಿಸುವ ಮೂಲಕ ಪ್ರತಿಭಟನೆ ನಡೆಸಲಾಗುವುದು” ಎಂದು ಎಚ್ಚರಿಸಿದರು.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚೀನಾದಲ್ಲಿ ಹೊಸ ಮಾದರಿಯ ಸೋಂಕು ಪತ್ತೆ : ಕರ್ನಾಟಕ ಸೇರಿ 5 ರಾಜ್ಯಗಳಿಗೆ ಎಚ್ಚರಿಕೆ

ಈಗಷ್ಟೇ, ಕೊರೊನಾ ಸೋಂಕಿನ ಅಬ್ಬರದಿಂದ ನಿರಾಳರಾಗಿರುವ ಜನತೆಗೆ ಇದೀಗ ಮತ್ತೊಂದು ಸಂಕಷ್ಟ...

ತನಿಖೆ ಆಗುವವರೆಗೂ ಸದನಕ್ಕೆ ಹೋಗಲ್ಲ; ತಮ್ಮದೇ ಸರ್ಕಾರದ ವಿರುದ್ಧ ಬಿ.ಆರ್ ಪಾಟೀಲ್ ಕಿಡಿ

ಕಳೆದ ಸದನದಲ್ಲಿ ನನ್ನ ಪ್ರಶ್ನೆಗೆ ಉತ್ತರಿಸಿದ್ದ ಕಂದಾಯ ಸಚಿವ ಕೃಷ್ಣ ಬೈರೇಗೌಡ...

ಕಲಬುರಗಿ | ಸಕಾಲ ಅರ್ಜಿ ವಿಲೇವಾರಿ : ಕಲಬುರಗಿಗೆ ರಾಜ್ಯದಲ್ಲೇ ನಂಬರ್‌ 1 ಸ್ಥಾನ

ಕಾಲಮಿತಿಯಲ್ಲಿ ಸರ್ಕಾರಿ ಸೇವೆ ನೀಡುವ ಸಕಾಲ ಯೋಜನೆಯಡಿ ನವೆಂಬರ್ ತಿಂಗಳ ಅರ್ಜಿ...