ಕರ್ನಾಟಕದಲ್ಲಿ ₹1,245 ಕೋಟಿ ಹೂಡಿಕೆ ಮಾಡಲು ವೈಜಿ-1 ಕಂಪನಿ ಘೋಷಣೆ

Date:

ಅತ್ಯಾಧುನಿಕ ಕಟಿಂಗ್‌ ಟೂಲ್ಸ್‌ ತಯಾರಿಸುವ ದಕ್ಷಿಣ ಕೊರಿಯಾದ ವೈಜಿ-1 ಕಂಪನಿ ಕರ್ನಾಟಕದಲ್ಲಿ ₹1,245 ಕೋಟಿ ಬಂಡವಾಳ ಹೂಡಿಕೆ ಮಾಡುವುದಾಗಿ ಪ್ರಕಟಿಸಿದೆ.

- Advertisement -

ಬಂಡವಾಳ ಹೂಡಿಕೆ ಆಕರ್ಷಿಸಲು ದಕ್ಷಿಣ ಕೊರಿಯಾಕ್ಕೆ 5 ದಿನಗಳ ಭೇಟಿ ನೀಡಿರುವ ಬೃಹತ್‌ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ. ಬಿ. ಪಾಟೀಲ ನೇತೃತ್ವದಲ್ಲಿನ ರಾಜ್ಯದ ಉನ್ನತ ಮಟ್ಟದ ನಿಯೋಗದ ಜೊತೆಗೆ ಬುಧವಾರ ನಡೆದ ಸಮಾಲೋಚನೆ ಸಂದರ್ಭದಲ್ಲಿ ಕಂಪನಿಯು ಈ ಘೋಷಣೆ ಮಾಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

“ಕರ್ನಾಟಕದಲ್ಲಿ ಕೊರಿಯಾ ಭಾಷೆ ಕಲಿಸುವ ಮತ್ತು ತರಬೇತಿ ನೀಡುವ ಕೇಂದ್ರ, ಇಂಧನ ಆವಿಷ್ಕಾರ ಮತ್ತು ತಂತ್ರಜ್ಞಾನ ಪ್ರಗತಿ ಕ್ಷೇತ್ರಗಳಲ್ಲಿ ಅತ್ಯಾಧುನಿಕ ಸಂಶೋಧನೆ ಹಾಗೂ ಅಭಿವೃದ್ಧಿ ಕೇಂದ್ರ (ಆರ್‌ ಅಂಡ್‌ ಡಿ) ಸ್ಥಾಪಿಸಲಾಗುವುದು” ಎಂದು ಕಂಪನಿಯ ಚೇರ್ಮನ್‌ ಹೊ ಕ್ಯೂನ್‌ ಸಾಂಗ್‌ ತಿಳಿಸಿದ್ದಾರೆ.

“ಐಟಿ, ಎಲೆಕ್ಟ್ರಾನಿಕ್‌ ಸಿಸ್ಟಮ್ಸ್‌, ವೈಮಾಂತರಿಕ್ಷ ಹಾಗೂ ರಕ್ಷಣೆಗೆ ಸಂಬಂಧಿಸಿದ ಉದ್ದಿಮೆಗಳಲ್ಲಿ ಕರ್ನಾಟಕವು ಭಾರತದಲ್ಲಿ ಮೊದಲ ಸ್ಥಾನದಲ್ಲಿ ಇರುವುದನ್ನು ಸಚಿವ ಪಾಟೀಲ ಅವರು ಕೊರಿಯಾದ ಕಂಪನಿಗಳಿಗೆ ಮನವರಿಕೆ ಮಾಡಿಕೊಟ್ಟರು. ಸೌರಶಕ್ತಿಯೂ ಸೇರಿದಂತೆ ರಾಜ್ಯವು ದೊಡ್ಡ ಪ್ರಮಾಣದಲ್ಲಿ ನೈಸರ್ಗಿಕ ಸಂಪನ್ಮೂಲ ಹೊಂದಿದೆ. ವಿದ್ಯುತ್‌ ಚಾಲಿತ ವಾಹನ, ಎಲೆಕ್ಟ್ರಾನಿಕ್ಸ್‌ ಮತ್ತು ಸ್ಮಾರ್ಟ್‌ಫೋನ್‌ ತಯಾರಿಕೆಗೆ ರಾಜ್ಯ ಸರ್ಕಾರವು ಗರಿಷ್ಠ ಪ್ರಮಾಣದಲ್ಲಿ ಉತ್ತೇಜನ ನೀಡುತ್ತಿದೆ” ಎಂದು ಹೇಳಿದರು.

ರಾಜ್ಯದಲ್ಲಿ ವಿದ್ಯುತ್‌ ಚಾಲಿತ ದ್ವಿಚಕ್ರ ವಾಹನಗಳ ಮಾರುಕಟ್ಟೆಯು ಗಮನಾರ್ಹವಾಗಿ ವಿಸ್ತರಣೆಗೊಳ್ಳುತ್ತಿರುವುದನ್ನು ಕೊರಿಯಾದ ಕಂಪನಿಗಳ ಗಮನಕ್ಕೆ ತರಲಾಯಿತು. ಈಗಾಗಲೇ ಭಾರತದ ವಿವಿಧ ನವೋದ್ಯಮಗಳಲ್ಲಿ ₹1,162 ಕೋಟಿ ಹೂಡಿಕೆ ಮಾಡಿರುವ ಜಾಗತಿಕ ಗೇಮಿಂಗ್‌ ಕಂಪನಿ ಕ್ರಾಫ್ಟನ್‌ ಇಂಕ್‌, ಮುಂದಿನ 2 ರಿಂದ 3 ವರ್ಷಗಳಲ್ಲಿ ಗೇಮಿಂಗ್‌ ಮತ್ತು ತಂತ್ರಜ್ಞಾನ ಕ್ಷೇತ್ರಗಳಲ್ಲಿ ₹1,245 ಕೋಟಿ ಹೂಡಿಕೆ ಮಾಡುವುದಾಗಿ ನಿಯೋಗದ ಜೊತೆಗಿನ ಸಭೆಯಲ್ಲಿ ಬದ್ಧತೆ ತೋರಿದೆ. ಭಾರತದಲ್ಲಿನ ಗೇಮಿಂಗ್‌ ಎಂಜಿನಿಯರ್‌ಗಳನ್ನು ಹೆಚ್ಚಿನ ಸಂಖ್ಯೆಯಲ್ಲಿ ನೇಮಕ ಮಾಡಿಕೊಳ್ಳುವ ಬಗ್ಗೆ ಕ್ರಾಫ್ಟನ್‌ ಕಂಪನಿಯು ಇಂಗಿತ ವ್ಯಕ್ತಪಡಿಸಿದೆ.

ಕೈಗಾರಿಕಾ ಇಲಾಖೆ ಪ್ರಧಾನ ಕಾರ್ಯದರ್ಶಿ ಸೆಲ್ವಕುಮಾರ್, ಆಯುಕ್ತೆ ಗುಂಜನ್ ಕೃಷ್ಣ, ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ ಸೇರಿದಂತೆ ಇತರರು ಈ ಸಂದರ್ಭದಲ್ಲಿ ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಾರ್ವಜನಿಕ ಸಭ್ಯತೆ ಮತ್ತು ಹೆಣ್ಣುಮಕ್ಕಳು ಮಾಡಿಕೊಳ್ಳುವ ಲೆಕ್ಕಾಚಾರಗಳು

ಫೀಲ್ಡ್‌ಗೆ ಇಳಿದು ಕೆಲಸ ಮಾಡುವಾಗ ಮಹಿಳಾ ಪತ್ರಕರ್ತೆಯರು ಎದುರಿಸುವ ರಿಸ್ಕ್ ಮತ್ತು...

ಎಸ್‌ಐಆರ್ ಕುರಿತು ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಕೆ: ಸಿಎಂ ಡಿ.ಕೆ. ಶಿವಕುಮಾರ್

ಎಸ್‌ಐಆರ್ (SIR) ದತ್ತಾಂಶಗಳ ವಿವಾದಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದ ವತಿಯಿಂದ ಸುಪ್ರೀಂ...

ರಾಜ್ಯದ 12 ಜಿಲ್ಲೆಗಳಲ್ಲಿ ಮುಂದಿನ 3 ದಿನ ಭಾರೀ ಮಳೆ: ಹವಾಮಾನ ಇಲಾಖೆ

ತೀವ್ರ ಮಳೆ ಕೊರತೆಯಿಂದ ಕೂಡಿದ್ದ ಮುಂಗಾರು ಹಂಗಾಮು ಕೊನೆಗೊಂಡಿದೆ. ಹಿಂಗಾರು ಆರಂಭವಾಗಿದೆ....

ಬರಗಾಲದ ದಸರಾದಲ್ಲಿ ಕಂಬಳದ ಹಠ: ಜನಾಭಿಪ್ರಾಯಕ್ಕೆ ಬೆಲೆಯಿಲ್ಲವೇ?

ನೀರಿನ ಅಭಾವ, ಪರಿಸರ ನಾಶ, ಸಾರ್ವಜನಿಕ ಹಣದ ವೆಚ್ಚದ ನಡುವೆ ಸರ್ಕಾರದ...