ಇಂದು ನಮ್ಮನ್ನು ಅಗಲಿದ ಖ್ಯಾತ ಸಾಹಿತಿ ಕೆ.ಟಿ.ಗಟ್ಟಿಯವರು ತನ್ನ ವೈಚಾರಿಕ ನಿಲುವು, ಬರಹಗಳ ಮೂಲಕ ಕನ್ನಡಿಗರ ಓದುವ ಅಭಿರುಚಿಯನ್ನು ಪೋಷಿಸಿದವರು. ಪತ್ರಿಕಾ ಧಾರಾವಾಹಿಗಳ ಮೂಲಕವೇ ಅವರು ಕನ್ನಡಿಗರನ್ನು ತಲುಪಿದ್ದು ಹೆಚ್ಚು.
ತುಳು,ಕನ್ನಡ, ಇಂಗ್ಲಿಷ್ ಭಾಷೆಗಳಲ್ಲಿ...
ಕಾದಂಬರಿಕಾರ, ಭಾಷಾತಜ್ಞ, ನಿವೃತ್ತ ಪ್ರಾಧ್ಯಾಪಕ ಕೆ.ಟಿ. ಗಟ್ಟಿ(86) ಇಂದು ನಿಧನರಾಗಿದ್ದಾರೆ. ಅನಾರೋಗ್ಯಕ್ಕೀಡಾಗಿದ್ದ ಅವರನ್ನು ಮಂಗಳೂರಿನ ಎ.ಜೆ. ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಕಾಸರಗೋಡು ಸಮೀಪದ ಕೂಡ್ಲೂವಿನಲ್ಲಿ 1938ರ ಜುಲೈ 22ರಂದು ಜನಿಸಿದ ಶ್ರೀಯುತರು, ಪ್ರಾಥಮಿಕ ಶಿಕ್ಷಣವನ್ನು ಕಾಸರಗೋಡಿನ...