ಬೌದ್ಧ, ಜೈನ, ಸೂಫಿ ಸಂತರು, ಶರಣರು, ತತ್ವಪದಕಾರರ ದಾರ್ಶನಿಕ ನೆಲೆಯಾದ ಕಲ್ಯಾಣ ಕರ್ನಾಟಕ ಭಾಗದಲ್ಲಿರುವ ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯವು ರಾಜ್ಯದ ಏಕೈಕ ಕೇಂದ್ರೀಯ ವಿಶ್ವವಿದ್ಯಾಲಯವಾಗಿದೆ. ಈ ವಿಶ್ವವಿದ್ಯಾಲಯವನ್ನು ಕೋಮು ದ್ವೇಷ ಬಿತ್ತುವ ಕೇಂದ್ರವಾಗಿಸಬಾರದು...
ಕಲಬುರಗಿಯ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಕೋಮುವಾದಿ, ಜಾತಿವಾದಿ ಆರ್‌ಎಸ್‌ಎಸ್ ಮತ್ತು ಎಬಿವಿಪಿ ಸಂಘಟನೆಗಳು ಸಮಾಜ ಮತ್ತು ದೇಶ ವಿರೋಧಿ ಚಟುವಟಿಕೆಗಳನ್ನು ನಡೆಸುತ್ತಿವೆ. ಎಲ್ಲ ವರ್ಗದ ವಿದ್ಯಾರ್ಥಿಗಳಿಗೆ ಸಮಾಜಮುಖಿ ಮೌಲ್ಯಗಳನ್ನು ಕಲಿಸುವ ಮೂಲಕ ಶಿಕ್ಷಣ ನೀಡುವ...