"ಬೆಂಗಳೂರಿನ ಜಯನಗರ ವಾಣಿಜ್ಯ ಸಂಕೀರ್ಣ ಹಾಗೂ ಸಂಕೀರ್ಣಕ್ಕೆ ಹೊಂದಿಕೊಂಡಂತಿರುವ ಸುತ್ತ-ಮುತ್ತಲಿನ ಪ್ರದೇಶದಲ್ಲಿ ವ್ಯಾಪಾರ ನಡೆಸುತ್ತಿರುವ ಮಳಿಗೆದಾರರು ಅನಧಿಕೃತವಾಗಿ ಪಾದಚಾರಿ ಮಾರ್ಗವನ್ನು ಒತ್ತುವರಿಪಡಿಸಿಕೊಂಡಿದ್ದಾರೆ. ಇದರಿಂದ ಸಾರ್ವಜನಿಕರಿಗೆ ತೊಂದರೆ ಉಂಟಾಗುತ್ತಿದೆ. ಹಾಗಾಗಿ, ಕೂಡಲೇ ಒತ್ತುವರಿಯನ್ನು ತೆರವುಗೊಳಿಸಿ"...