ಕೊಪ್ಪಳ ಜಿಲ್ಲೆಯ ಕೊಪ್ಪಳ ತಾಲೂಕಿನ ಬೂದುಗುಂಪಾ ಗ್ರಾಮದಲ್ಲಿ ನಡೆದ ಬೂದುಗುಂಪಾ ವಲಯ ಮಟ್ಟದ ಪ್ರೌಢಶಾಲಾ ಕಬಡ್ಡಿ ಪಂದ್ಯಾವಳಿಯಲ್ಲಿ ನಾಗೇಶನಹಳ್ಳಿ ಪ್ರೌಢಶಾಲೆಯ ವಿದ್ಯಾರ್ಥಿಗಳು ಅತ್ಯುತ್ತಮ ಪ್ರದರ್ಶನ ನೀಡಿ ಪ್ರಥಮ ಸ್ಥಾನ ಪಡೆದುಕೊಂಡಿದ್ದಾರೆ.
ವಿದ್ಯಾರ್ಥಿಗಳ ಈ ಸಾಧನೆಗೆ ಶಾಲೆಯ ಮುಖ್ಯೋಪಾಧ್ಯಾಯರಾದ ಸೈಯದ್ ಹಾಗೂ ಶಾಲೆಯ ಶಿಕ್ಷರಾದ ಕೊಟ್ರಮ್ಮ, ಹುಲಗಪ್ಪ M,H, ಮತ್ತು ನಾಗರಾಜ್ ಹಾಗೂ ತರಬೇತುದಾರರಾದ ಹುಸೇನಪ್ಪ ಈಡಿಗ ಅವರ ಮಾರ್ಗದರ್ಶನ ಮತ್ತು ತರಬೇತಿ ಪ್ರಮುಖ ಕಾರಣವಾಗಿದೆ.
ಈ ಸಂದರ್ಭದಲ್ಲಿ ಕರವೇ ಮುತ್ತಪ್ಪ ಉಪಸ್ಥಿತರಿದ್ದು, ವಿಜೇತ ವಿದ್ಯಾರ್ಥಿಗಳಿಗೆ ಅಭಿನಂದನೆ ಸಲ್ಲಿಸಿದರು. ಶಾಲೆಯ ವಿದ್ಯಾರ್ಥಿಗಳ ಕ್ರೀಡಾ ಸಾಧನೆಗೆ ಶಿಕ್ಷಕರು, ಪೋಷಕರು ಹಾಗೂ ಗ್ರಾಮಸ್ಥರು ಹರ್ಷ ವ್ಯಕ್ತಪಡಿಸಿ ಅಭಿನಂದಿಸಿದ್ದಾರೆ.