"ಜಿಲ್ಲೆಯಲ್ಲಿ ರೈತರಿಗೆ ಸಮರ್ಪಕವಾಗಿ ವಿದ್ಯುತ್ ಸರಬರಾಜು ಆಗುತ್ತಿಲ್ಲ. ಪ್ರಸ್ತುತ ಕೇವಲ 4 ರಿಂದ 5 ಗಂಟೆ ಮಾತ್ರ ವಿದ್ಯುತ್ ನೀಡಲಾಗುತ್ತಿದ್ದು, ಇದನ್ನು ಕೂಡಲೇ ಸರಿಪಡಿಸಿ ರೈತರಿಗೆ ನಿರಂತರವಾಗಿ 7 ಗಂಟೆಗಳ ಕಾಲ ವಿದ್ಯುತ್ ಸರಬರಾಜು ಮಾಡಲು ಕ್ರಮವಹಿಸಬೇಕು" ಎಂದು ಕಾಂಗ್ರೆಸ್ ಮುಖಂಡ, ದಾವಣಗೆರೆ ಜಿಲ್ಲಾ ಪಂಚ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷರಾದ ಶಾಮನೂರು ಬಸವರಾಜಪ್ಪ ಬೆಸ್ಕಾಂ ಅಧಿಕಾರಿಗಳಿಗೆ ಸೂಚನೆ ನೀಡಿದರು.
ದಾವಣಗೆರೆಯ ಜಿಲ್ಲಾ ಪಂಚಾಯಿತಿಯ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಜಿಲ್ಲಾ ಮಟ್ಟದ 'ಪಂಚ ಗ್ಯಾರಂಟಿ' ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿ "ರೈತರಿಗೆ ಸರದಿ ಸಾಲು ಪದ್ದತಿಯಡಿ ವಿದ್ಯುತ್ ಸರಬರಾಜು ಮಾಡಲಾಗುತ್ತಿದ್ದು, ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗದಂತೆ ನಿಗದಿತ ಅವಧಿಯವರೆಗೆ...
ಚಿಕ್ಕಬಳ್ಳಾಪುರ ಗೌರಿಬಿದನೂರು ತಾಲ್ಲೂಕಿನ ವಾಟದಹೊಸಹಳ್ಳಿ ಬಳಿ ಗುರುವಾರ ನಡುರಾತ್ರಿ ಸಂಭವಿಸಿದ ಅಪಘಾತದಲ್ಲಿ ಮೂವರು ಬೆಸ್ಕಾಂ ಸಿಬ್ಬಂದಿ ಮೃತಪಟ್ಟಿದ್ದಾರೆ.
ವಾಟದಹೊಸಹಳ್ಳಿ ಉಪವಿದ್ಯುತ್ ಕೇಂದ್ರದಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ವೇಣುಗೋಪಾಲ್, ಮಂಜುನಾಥ್, ಶ್ರೀಧರ್ ಮೃತರು. ಶಿವಕುಮಾರ್ ಗಾಯಗೊಂಡಿದ್ದು ಆಸ್ಪತ್ರೆಗೆ...
ತುಮಕೂರು ಸಮರ್ಪಕ ವಿದ್ಯುತ್ ಸರಬರಾಜು ಮಾಡುವಲ್ಲಿ ವಿಫಲಗೊಂಡ ಬೆಸ್ಕಾಂ ಸುಟ್ಟ ಟಿಸಿ ಬದಲಿಸುವಲ್ಲಿ ಸಂಪೂರ್ಣ ಬೇಜವಾಬ್ದಾರಿ ತೋರುತ್ತಿದೆ ಎಂದು ರೈತರು ಆಕ್ರೋಶ ವ್ಯಕ್ತ ಪಡಿಸುತ್ತಿದ್ದಾರೆ.
ಜೊತೆಗೆ ಸಿಬ್ಬಂದಿ ಕೊರತೆ ಕಾರಣ ನೀಡಿ ಗುಬ್ಬಿ ತಾಲೂಕಿನ...