ಹೆಣ್ಣು ಮಗು ಬೆಳೆದು ಮುತ್ತಿನಂತಾಗಬೇಕು ಎನ್ನುವ ಆಶಯ ಸಾಕಾರಗೊಳ್ಳಬೇಕಾದರೆ, ಬಾಲ್ಯದಿಂದಲೇ ಆಕೆಗೆ ವಿವಾಹದ ನೊಗ ಹೇರುವ ಬದಲು ಉನ್ನತ ಶಿಕ್ಷಣ ಕೊಡಿಸುವತ್ತ ಪೋಷಕರು ಹೆಚ್ಚಿನ ಗಮನ ಹರಿಸಬೇಕು ಹಾಗೂ ಉತ್ತಮ ಸಮಾಜ ನಿರ್ಮಿಸಲು ಚಿಂತಿಸಬೇಕು" ಎಂದು ದಾವಣಗೆರೆ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಶ್ರೀಮತಿ ವೇಲಾ ಡಿ.ಕೆ. ತಿಳಿಸಿದರು.
ದಾವಣಗೆರೆ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ವಿವಿಧ ಇಲಾಖೆಗಳ ಸಂಯುಕ್ತಾಶ್ರಯದಲ್ಲಿ ಹೊನ್ನೂರು ಗೊಲ್ಲರಹಟ್ಟಿಯಲ್ಲಿ " ಕಾನೂನು ಅರಿವು" ಕುರಿತ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು "ಹಳೆಯ...