ಧಾರವಾಡ ಜಿಲ್ಲೆಯ ಕಲಘಟಗಿ ತಾಲ್ಲೂಕಿನ ತಾವರಗೇರಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ಅರಳಿಹೊಂಡ ಗ್ರಾಮದಲ್ಲಿ ಪರಿಶಿಷ್ಟ ಜಾತಿಗೆ ಸೇರಿದ ಏಳೆಂಟು ಕುಟುಂಬಗಳು ಕಳೆದ ಹದಿನೈದು ವರ್ಷಗಳಿಂದ ಉಳ್ಳವರ ದೌರ್ಜನ್ಯಕ್ಕೆ ತುಳಿತಕ್ಕೊಳಗಾಗಿ ಬಲಹೀನರಾಗಿ ಬದುಕುತ್ತಿದ್ದು,...
ಕಳೆದ 4 ದಶಕದಿಂದ ಸೋಬಾನೆ ಪದಗಳನ್ನು ಹಾಡಿಕೊಂಡು ಬಂದಿರುವ ಸಿದ್ಧಗಂಗಮ್ಮ ಅವರು ಇಂದಿಗೂ ಸಂಕಷ್ಟದಲ್ಲೇ ಬದುಕು ಸಾಗಿಸುತ್ತಿದ್ದಾರೆ. ತಾವು ಹಾಡುವ ಜೊತೆಗೆ ಬೇರೆಯವರಿಗೂ ಕಲಿಸುವ ಮೂಲಕ ಜಾನಪದ ಸಂಸ್ಕೃತಿ ಉಳಿಸುವ ಕೆಲಸ ಮಾಡುತ್ತಿದ್ದಾರೆ
ಕಲ್ಪತರು ನಾಡು ತುಮಕೂರಿನಲ್ಲಿ ಈಗ ಹುಣಸೆ ಸುಗ್ಗಿ ಜೋರಾಗಿದೆ. ನಗರದ ಎಪಿಎಂಸಿ ಮಾರುಕಟ್ಟೆಯಲ್ಲಿ ಉತ್ತಮ ಗುಣಮಟ್ಟದ ಹುಣಸೆ ಹಣ್ಣು ಕ್ವಿಂಟಲ್ ಕನಿಷ್ಠ ₹13 ಸಾವಿರದಿಂದ ಗರಿಷ್ಠ ₹36 ಸಾವಿರದವರೆಗೂ ಮಾರಾಟವಾಗಿದ್ದು, ರೈತರಲ್ಲಿ ಮಂದಹಾಸ ಮೂಡಿಸಿದೆ. ತೊಗರಿ ಅಭಿವೃದ್ಧಿ ಮಂಡಳಿಯಂತೆ ತುಮಕೂರಿನಲ್ಲಿ ಹುಣಸೆ ಅಭಿವೃದ್ಧಿ ಮಂಡಳಿ ಸ್ಥಾಪಿಸಬೇಕು ಎಂದು ರೈತ ಮುಖಂಡರು ರಾಜ್ಯ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.
ಪತ್ರಿಕಾ ವಿತರಕರ ಸಮಸ್ಯೆಗಳನ್ನು ಬಗೆಹರಿಸುತ್ತಿರುವ ಕಾಂಗ್ರೆಸ್ ಸರ್ಕಾರಕ್ಕೆ ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟ ಶಿವಮೊಗ್ಗ ಜಿಲ್ಲಾ ಘಟಕ ಧನ್ಯವಾದ ತಿಳಿಸಿದೆ.
ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟವು ಕಳೆದ ಐದು ವರ್ಷಗಳಿಂದ ಅಸಂಘಟಿತ...
ಆರ್ಥಿಕವಾಗಿ ಹಿಂದುಳಿದ ಹೆಣ್ಣುಮಕ್ಕಳು, ದಲಿತರು, ಹಿಂದುಳಿದ ವರ್ಗಗಳ ಮಕ್ಕಳು, ಉನ್ನತ ಶಿಕ್ಷಣ ಪಡೆಯುವ ಉದ್ದೇಶದಿಂದ ಸ್ಥಾಪನೆಯಾದ ನೂತನ ಹಾವೇರಿ ವಿಶ್ವವಿದ್ಯಾಲಯವನ್ನು ರಾಜ್ಯ ಸರಕಾರ ಅನುದಾನದ ನೆಪವೊಡ್ಡಿ ಮುಚ್ಚಲು ಮುಂದಾಗಿದೆ. ಸರಕಾರದ ನಡೆಯು ಹಾವೇರಿ...