ಕಳೆದ 15 ವರ್ಷಗಳಿಂದ ವರ್ಷಗಳಿಂದ ಈ ಶಾಲೆಯಲ್ಲಿ ಗಣಿತ ಶಿಕ್ಷಕಿಯಾಗಿ ಕೆಲಸ ಮಾಡುತ್ತಿರುವ ರಶ್ಮಿ ಎಲ್ ಈ ‘ಗಣಿತ ಲೋಕ’ ರೂಪಿಸಿದವರು. ಆ ಮೂಲಕ ಮಕ್ಕಳು ಗಣಿತವನ್ನೂ ಪ್ರೀತಿಯಿಂದ ಕಲಿಯುವ ಅಗಣಿತ ಸಾಧ್ಯತೆಗಳನ್ನು ಅವರು ತೆರೆದಿಟ್ಟಿದ್ದಾರೆ.
ಕಳೆದ 4 ದಶಕದಿಂದ ಸೋಬಾನೆ ಪದಗಳನ್ನು ಹಾಡಿಕೊಂಡು ಬಂದಿರುವ ಸಿದ್ಧಗಂಗಮ್ಮ ಅವರು ಇಂದಿಗೂ ಸಂಕಷ್ಟದಲ್ಲೇ ಬದುಕು ಸಾಗಿಸುತ್ತಿದ್ದಾರೆ. ತಾವು ಹಾಡುವ ಜೊತೆಗೆ ಬೇರೆಯವರಿಗೂ ಕಲಿಸುವ ಮೂಲಕ ಜಾನಪದ ಸಂಸ್ಕೃತಿ ಉಳಿಸುವ ಕೆಲಸ ಮಾಡುತ್ತಿದ್ದಾರೆ
ಕಲ್ಪತರು ನಾಡು ತುಮಕೂರಿನಲ್ಲಿ ಈಗ ಹುಣಸೆ ಸುಗ್ಗಿ ಜೋರಾಗಿದೆ. ನಗರದ ಎಪಿಎಂಸಿ ಮಾರುಕಟ್ಟೆಯಲ್ಲಿ ಉತ್ತಮ ಗುಣಮಟ್ಟದ ಹುಣಸೆ ಹಣ್ಣು ಕ್ವಿಂಟಲ್ ಕನಿಷ್ಠ ₹13 ಸಾವಿರದಿಂದ ಗರಿಷ್ಠ ₹36 ಸಾವಿರದವರೆಗೂ ಮಾರಾಟವಾಗಿದ್ದು, ರೈತರಲ್ಲಿ ಮಂದಹಾಸ ಮೂಡಿಸಿದೆ. ತೊಗರಿ ಅಭಿವೃದ್ಧಿ ಮಂಡಳಿಯಂತೆ ತುಮಕೂರಿನಲ್ಲಿ ಹುಣಸೆ ಅಭಿವೃದ್ಧಿ ಮಂಡಳಿ ಸ್ಥಾಪಿಸಬೇಕು ಎಂದು ರೈತ ಮುಖಂಡರು ರಾಜ್ಯ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.
ಖಾಸಗಿ ಶಾಲಾ ವಾಹನಕ್ಕೆ ಡಿಕ್ಕಿಯಾದ ಪರಿಣಾಮ ಬೈಕ್ ಸವಾರ ಅಪ್ರಾಪ್ತ ಬಾಲಕ ಸ್ಥಳದಲ್ಲೇ ಮೃತಪಟ್ಟ ಘಟನೆ ತುಮಕೂರು ಜಿಲ್ಲೆಯ ಗುಬ್ಬಿ ಪಟ್ಟಣದ ವಿನಾಯಕ ನಗರದ ಎರಡನೇ ಕ್ರಾಸ್ ಬಳಿ ನಡೆದಿದೆ.
ಅಪಘಾತದಲ್ಲಿ ಸಾವನಪ್ಪಿದ ಅಪ್ರಾಪ್ತ...
ತುಮಕೂರು ಜಿಲ್ಲಾ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಿರಿಯ ಸಹಾಯಕ ನಿರ್ದೇಶಕಿ ಎಂ.ಆರ್.ಮಮತ (47) ಬೆಂಗಳೂರಿನಲ್ಲಿ ಶುಕ್ರವಾರ ಕೊನೆಯುಸಿರೆಳೆದರು.
ಕಳೆದ 19 ವರ್ಷಗಳಿಂದ ವಾರ್ತಾ ಇಲಾಖೆಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದರು. ತುಮಕೂರಿನಲ್ಲಿ ಸಹಾಯಕ ಹಿರಿಯ...