ರಾಯಚೂರಿನ ಯಲಗಟ್ಟಾ ಸರಕಾರಿ ಪ್ರೌಢಶಾಲೆಯ ಮುಖ್ಯೋಪಾಧ್ಯಾಯರ ಗೈರುಹಾಜರಿಯಿಂದಾಗಿ ಶಾಲಾ ವಿದ್ಯಾರ್ಥಿಗಳು ಹಲವು ಸಮಸ್ಯೆಗಳನ್ನ ಎದುರಿಸುತ್ತಿದ್ದು, ಇದೇ ಕಾರಣದಿಂದಾಗಿಯೇ ಹಲವು ವಿದ್ಯಾರ್ಥಿಗಳು ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲೂ ಅನುತ್ತೀರ್ಣಗೊಂಡಿದ್ದಾರೆ. ಇದರ ವಿರುದ್ದ ಈಗ ವಿದ್ಯಾರ್ಥಿಗಳೇ ಪ್ರತಿಭಟನೆಗೆ ಇಳಿದಿದ್ದಾರೆ.