ಚಂದ್ರಯಾನ -3 : ಯಶಸ್ವಿಯಾಗಿ ಚಂದ್ರನ ಕಕ್ಷೆ ಸೇರ್ಪಡೆ

Date:

ಚಂದ್ರಯಾನ- 3 ನೌಕೆಯು ಚಂದ್ರನ ಕಕ್ಷೆಗೆ ಯಶಸ್ವಿಯಾಗಿ ಸೇರ್ಪಡೆಯಾಗಿದೆ ಎಂದು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಶನಿವಾರ ಟ್ವೀಟ್ ಮೂಲಕ ತಿಳಿಸಿದೆ.

- Advertisement -

ಬೆಂಗಳೂರಿನ ಐಎಸ್‌ಟಿಆರ್‌ಎಸಿಯ ಮಿಷನ್ ಆಪರೇಷನ್ ಕಾಂಪ್ಲೆಕ್ಸ್‌ನಿಂದ (ಎಂಓಎಕ್ಸ್) ಚಂದ್ರನಿಗೆ ಅತಿ ಸಮೀಪದ ಕಕ್ಷೆಯ ಭಾಗವಾದ ಪೆರಿಲೂನ್‌ನಿಂದ ರೆಟ್ರೋ ಬರ್ನಿಂಗ್ (ರಾಕೆಟ್‌ಗಳನ್ನು ಉಡಾವಣೆ ಮಾಡಿದ ದಿಕ್ಕಿನ ವಿರುದ್ಧ ಭಾಗದಿಂದ ರಾಕೆಟ್‌ ಉರಿಸುವುದು) ಪ್ರಕ್ರಿಯೆಗೆ ಚಾಲನೆ ನೀಡಲಾಗಿದೆ ಎಂದು ಇಸ್ರೋ ಹೇಳಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಶಿಕ್ಷಣ ಮಾರಾಟ ಮಾಡಿದ ಶಾಲೆಗಳೇ ಈಗ ಮಾರಾಟಕ್ಕೆ!

ಕರ್ನಾಟಕದಲ್ಲಿ ಖಾಸಗಿ ಶಾಲೆಗಳು ಮುಚ್ಚುವ ಹಂತಕ್ಕೆ ತಲುಪಿದ್ದು, ಮಾರಾಟಕ್ಕೆ ಸಜ್ಜಾಗಿವೆ. ಕೋವಿಡ್-19 ಆಕ್ರಮಣದ ನಂತರದಲ್ಲಿ ಖಾಸಗಿ ಶಾಲೆಗಳಲ್ಲಿ ದಾಖಲಾತಿಯಲ್ಲಿ ಭಾರೀ ಕುಸಿತ, ಪ್ರತಿಷ್ಠಿತ ಶಾಲೆಗಳ ಜೊತೆಗೆ ಪೈಪೋಟಿ, ಮೂಲಭೂತ ಸೌಕರ್ಯಕ್ಕೆ ತಕ್ಕಂತೆ ಲಾಭದ...

ಬಿಗಿದ ತುಟಿಯ ದೃಶ್ಯಭಾಷೆ: ನಿರ್ಬಂಧಗಳ ನೆರಳಲ್ಲಿ ರೂಪಕಗಳ ಪ್ರತಿರೋಧ

ಸಿನೆಮಾವನ್ನು ನಿಯಂತ್ರಿಸಲು ಅಧಿಕಾರಶಾಹಿ ಸದಾ ಹೊಸ ಕಟ್ಟುಪಾಡುಗಳನ್ನು ಸೃಷ್ಟಿಸುತ್ತಲೇ ಇರುತ್ತದೆ; ಆದರೆ ಕಲೆಗೆ ಇರುವ ಶಕ್ತಿಯೆಂದರೆ, ಅದು ನಿರ್ಬಂಧಗಳ ಗೋಡೆಗಳನ್ನೇ ಹೊಸ ನೋಟದ ಕಿಟಕಿಗಳನ್ನಾಗಿಸಿಕೊಳ್ಳುತ್ತದೆ. ನೇರ ಮಾತನ್ನು ಕಸಿದುಕೊಂಡಷ್ಟೂ ರೂಪಕಗಳ ನಡಿಗೆ ಬಿಗಿಯಾಗುತ್ತದೆ,...

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಲೂನಾರ್ ಆರ್ಬಿಟ್ ಇನ್ಸರ್ಷನ್ (ಎಲ್‌ಒಐ) ಅಥವಾ ಚಂದ್ರನ ಕಕ್ಷೆ ಸೇರ್ಪಡೆ ಯೋಜನೆಯು ಯಶಸ್ವಿಯಾಗಿ ಪೂರ್ಣಗೊಂಡಿದೆ. ಚಂದ್ರಯಾನದ ಎಲ್ಲ ವ್ಯವಸ್ಥೆಗಳು ಉತ್ತಮವಾಗಿವೆ ಎಂಬ ಸುದ್ದಿಯನ್ನು ಇಸ್ರೋ ಹಂಚಿಕೊಂಡಿದೆ.

ಈ ಸುದ್ದಿ ಓದಿದ್ದೀರಾ? ಭಾರತದ ಐತಿಹಾಸಿಕ ‘ಚಂದ್ರಯಾನ 3’ ಯಶಸ್ವಿ ಉಡಾವಣೆ; 20 ವರ್ಷದ ಹಿಂದೆ ಆರಂಭವಾದ ಯೋಜನೆ ಸಾಗಿದ್ದು ಹೇಗೆ?

ಮುಂದಿನ ಕಾರ್ಯಾಚರಣೆಯಾದ ಕಕ್ಷೆಯ ಸಂಕೋಚನ ಪ್ರಕ್ರಿಯೆಯನ್ನು ಆಗಸ್ಟ್ 6ರ ಭಾನುವಾರ ರಾತ್ರಿ 11 ಗಂಟೆಗೆ ನಿಗದಿಪಡಿಸಲಾಗಿದೆ ಎಂದು ಬಾಹ್ಯಾಕಾಶ ಸಂಸ್ಥೆ ಮಾಹಿತಿ ನೀಡಿದೆ.

ಆಗಸ್ಟ್ ಮೊದಲ ವಾರದಲ್ಲಿ ನೌಕೆಯು ಚಂದ್ರನ ಸುತ್ತ 5- 6 ಕಕ್ಷೆಯ ಪಥವನ್ನು ಪೂರ್ಣಗೊಳಿಸಲು ತಯಾರಿ ನಡೆಸಿದೆ. ಕ್ರಮೇಣ ಅದು 100 ಕಿಮೀ ಕಕ್ಷೆಯ ವರ್ತುಲಕ್ಕೆ ಪರಿವರ್ತನೆಯಾಗಲಿದೆ.

ಮುಂದಿನ ಹತ್ತು ದಿನಗಳಲ್ಲಿ ಚಂದ್ರನ ದಕ್ಷಿಣ ಧ್ರುವದ ಪ್ರದೇಶದ ಒಳಗೆ ಇಳಿಯಲು ಸೂಕ್ತವಾದ ಜಾಗವನ್ನು ನಿರ್ಧರಿಸಲಾಗುತ್ತದೆ. ಆಗಸ್ಟ್ 23ರ ಸಂಜೆ 5.47ರ ಸುಮಾರಿಗೆ ಚಂದ್ರಯಾನ ನೌಕೆಯ ಲ್ಯಾಂಡರ್ ಕಕ್ಷೆಯಿಂದ ಹೊರಬರುತ್ತದೆ ಮತ್ತು ಸುಗಮ ಲ್ಯಾಂಡಿಂಗ್‌ಗೆ ಪ್ರಯತ್ನ ಆರಂಭಿಸುತ್ತದೆ.

40 ದಿನಗಳ ಪಯಣದ ಬಳಿಕ ಬಾಹ್ಯಾಕಾಶ ನೌಕೆ ಚಂದ್ರನ ದಕ್ಷಿಣ ಧ್ರುವದಲ್ಲಿ ಇಳಿಯುವ ನಿರೀಕ್ಷೆ ಇದೆ. ಇದು ಯಶಸ್ವಿಯಾದಲ್ಲಿ ಚಂದ್ರನ ಮೇಲ್ಮೈ ಮೇಲೆ ಇಳಿಯುವ ನಾಲ್ಕನೇ ದೇಶವಾಗಿ ಭಾರತ ದಾಖಲೆಗೆ ಸೇರಲಿದೆ ಹಾಗೂ ಚಂದ್ರನ ದಕ್ಷಿಣ ಧ್ರುವದಲ್ಲಿ ಇಳಿಯುವ ಮೊಟ್ಟಮೊದಲ ದೇಶವಾಗಲಿದೆ.

ಚಂದ್ರನ ಮೇಲೆ ಸೂರ್ಯ ಕಿರಣಗಳು ಬೀಳುವಂತಹ ಅಂಶಗಳನ್ನು ಗಮನದಲ್ಲಿ ಇರಿಸಿಕೊಂಡು ಚಂದ್ರನ ಲ್ಯಾಂಡಿಂಗ್ ಸಮಯದ ಮೇಲೆ ಇಸ್ರೋ ಗಮನ ಹರಿಸಿದೆ. ಅಗತ್ಯವಿದ್ದರೆ ಲ್ಯಾಂಡಿಂಗ್ ಅನ್ನು ಸೆಪ್ಟೆಂಬರ್‌ಗೆ ಮುಂದೂಡುವ ಸಾಧ್ಯತೆಯಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಹ್ಯಾಕಾಶದಲ್ಲಿ ಆಯುಧಗಳನ್ನು ಇರಿಸಿದ್ದನ್ನು ಒಪ್ಪಿಕೊಂಡ ಅಮೆರಿಕ

ಉಪಗ್ರಹವನ್ನು ಸ್ಫೋಟಿಸದಿದ್ದರೂ ಬಾಹ್ಯಾಕಾಶದಲ್ಲಿ ಜಾಮರ್‌ಗಳು ಸಹ ಅತ್ಯಂತ ಮಾರಕವಾಗಿ ಪರಿಣಮಿಸಬಹುದು. ಇಂದಿನ...

ಒರಾಕಲ್‌ಗೆ ಎಐ ಹೊಡೆತ: ಕೆಲಸ‌ ಕಳೆದುಕೊಂಡ ಸಾವಿರಾರು ಉದ್ಯೋಗಿಗಳು

ಜಾಗತಿಕ ತಂತ್ರಜ್ಞಾನ ಮತ್ತು ಸಾಫ್ಟ್‌ವೇರ್ ದೈತ್ಯ 'ಒರಾಕಲ್' ಸಂಸ್ಥೆಯು ತನ್ನ ಜಾಗತಿಕ...

ಎಐ ಸ್ಮಾರ್ಟ್ ಗ್ಲಾಸ್‌ಗಳ ರಹಸ್ಯ ಚಿತ್ರೀಕರಣಕ್ಕೆ ತಡೆ: ಡಿಜಿಟಲ್ ಲೋಕದಲ್ಲಿ ಸದ್ದು ಮಾಡುತ್ತಿದೆ ಹೊಸ ಆ್ಯಪ್

ತಂತ್ರಜ್ಞಾನ ಬೆಳೆದಂತೆ ಖಾಸಗಿತನಕ್ಕೆ ಧಕ್ಕೆಯಾಗುತ್ತಿರುವ ಆತಂಕದ ನಡುವೆಯೇ, ರಹಸ್ಯವಾಗಿ ವಿಡಿಯೊ ಅಥವಾ...

ಎಐ ವೇಗಕ್ಕೆ ತಡೆ ನೀಡಲು ಜಾಗತಿಕ ಕೂಗು: ಭುಗಿಲೆದ್ದ ಅಮೆರಿಕ–ಚೀನಾ ತಾಂತ್ರಿಕ ಜಟಾಪಟಿ

ಕೃತಕ ಬುದ್ಧಿಮತ್ತೆ (ಎಐ) ತಂತ್ರಜ್ಞಾನದ ಅತಿವೇಗದ ಓಟಕ್ಕೆ ಕಡಿವಾಣ ಹಾಕಿ, ಸುರಕ್ಷತೆಗೆ...