ಪೆಹಲ್ಗಾಮ್‌ ಹತ್ಯಾಕಾಂಡದ ಆರೋಪಿಗಳಿಗೆ ಹಣ ವರ್ಗಾವಣೆ ಎಂದು ಸುಳ್ಳು ಆರೋಪ; ವ್ಯಕ್ತಿಗೆ ₹1.31 ಕೋಟಿ ವಂಚನೆ

Date:

ಪೆಹಲ್ಗಾಮ್ ಹತ್ಯಾಕಾಂಡದ ಆರೋಪಿಗಳಿಗೆ ಹಣ ವರ್ಗಾವಣೆ ಮಾಡಿರುವುದಾಗಿ ಸುಳ್ಳು ಆರೋಪ ಹೊರಿಸಿ, ಡಿಜಿಟಲ್ ಅರೆಸ್ಟ್ ಹೆಸರಿನಲ್ಲಿ ದಕ್ಷಿಣ ಕನ್ನಡದ ಪುತ್ತೂರು ತಾಲೂಕಿನ ವ್ಯಕ್ತಿಯೊಬ್ಬರಿಂದ ಸೈಬರ್ ವಂಚಕರು ಬರೋಬ್ಬರಿ ₹1,31,50,000 ಹಣ ವಂಚಿಸಿರುವ ಘಟನೆ ಬೆಳಕಿಗೆ ಬಂದಿದೆ. ಮುಂಬೈ ಪೊಲೀಸ್ ಹಾಗೂ ಭಯೋತ್ಪಾದನಾ ನಿಗ್ರಹ ದಳದ (ATS) ಅಧಿಕಾರಿಗಳೆಂದು ನಂಬಿಸಿ, ಬಂಧನದ ಭೀತಿ ಹುಟ್ಟಿಸುವ ಮೂಲಕ ಆರೋಪಿಗಳು ಹಂತ ಹಂತವಾಗಿ ಹಣ ವರ್ಗಾವಣೆ ಮಾಡಿಸಿಕೊಂಡಿದ್ದಾರೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಪ್ರಕಟಣೆ ತಿಳಿಸಿದೆ.

- Advertisement -

ಅಪರಿಚಿತ ವ್ಯಕ್ತಿಗಳು ದೂರುದಾರರನ್ನು ಸಂಪರ್ಕಿಸಿ, ತಾವು ಮುಂಬೈ ಪೊಲೀಸ್ ಮತ್ತು ಎಟಿಎಸ್ ಅಧಿಕಾರಿಗಳೆಂದು ಪರಿಚಯಿಸಿಕೊಂಡಿದ್ದಾರೆ. ದೂರುದಾರರ ಬ್ಯಾಂಕ್ ಖಾತೆಯಿಂದ ಪೆಹಲ್ಗಾಮ್ ಹತ್ಯಾಕಾಂಡದ ಆರೋಪಿಗಳಿಗೆ ಹಣ ವರ್ಗಾವಣೆಯಾಗಿದೆ ಎಂದು ಸುಳ್ಳು ಆರೋಪ ಮಾಡಿದ್ದು, ತಕ್ಷಣ ಬಂಧಿಸುವುದಾಗಿ ಬೆದರಿಕೆ ಹಾಕಿದ್ದಾರೆ. ಬಳಿಕ ವಾಟ್ಸಾಪ್ ವಿಡಿಯೋ ಕರೆಗಳ ಮೂಲಕ ನಿರಂತರವಾಗಿ ಸಂಪರ್ಕಿಸಿ, ತನಿಖೆಯ ಹೆಸರಿನಲ್ಲಿ ಮಾನಸಿಕ ಒತ್ತಡ ಹೇರಿದ್ದಾರೆ. ಬ್ಯಾಂಕ್ ಖಾತೆಗಳ ಪರಿಶೀಲನೆ ನಡೆಸಬೇಕಿದ್ದು, ಖಾತೆಯಲ್ಲಿರುವ ಹಣವನ್ನು ದೃಢೀಕರಿಸುವ ಅಗತ್ಯವಿದೆ ಎಂದು ನಂಬಿಸಿದ್ದಾರೆ. ತನಿಖೆ ಮತ್ತು ಬಂಧನದ ಭೀತಿಗೆ ಒಳಗಾದ ದೂರುದಾರರಿಗೆ, ತಮ್ಮ ಖಾತೆಯಲ್ಲಿರುವ ಹಣವನ್ನು ಪರಿಶೀಲನೆಗಾಗಿ ಆರೋಪಿಗಳು ಸೂಚಿಸಿದ ವಿವಿಧ ಬ್ಯಾಂಕ್ ಖಾತೆಗಳಿಗೆ RTGS ಮೂಲಕ ವರ್ಗಾಯಿಸುವಂತೆ ನಿರ್ದೇಶಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪ್ರಜಾಪ್ರಭುತ್ವದ ಪ್ರತಿಭಟನೆ ಮತ್ತು ಪೊಲೀಸ್ ವ್ಯವಸ್ಥೆ

ಭಾರತದಲ್ಲಿ ಪ್ರತಿಭಟನೆಗಳಿಗೆ ಶತಮಾನಗಳ ಸಂಪ್ರದಾಯವಿದೆ. ಬ್ಯಾರಿಕೇಡ್‌ಗಳನ್ನು ಹಾರುವುದು, ಮಾನವ ಸರಪಳಿ ರಚಿಸುವುದು ಅಥವಾ ಬಂಧನವನ್ನು ವಿರೋಧಿಸಿ ನೆಲದ ಮೇಲೆ ಮಲಗುವುದು ಪ್ರಜಾಪ್ರಭುತ್ವದ ಸಹಜ ಆಂದೋಲನದ ಭಾಗವೇ ಹೊರತು ಖಂಡಿಸಬೇಕಾದ ಅಪರಾಧಗಳಲ್ಲ. ಅಕ್ಟೋಬರ್ 10ರಂದು ದೆಹಲಿಯಲ್ಲಿ...

ಬೋಟ್ ಕ್ಲಬ್‌ನಿಂದ ಜಂತರ್ ಮಂತರ್‌ವರೆಗೆ; ದೆಹಲಿಯ ಪ್ರತಿಭಟನಾ ತಾಣ...

ಸ್ವಾತಂತ್ರ್ಯಾನಂತರ ಹಲವು ದಶಕಗಳವರೆಗೆ ದೆಹಲಿಯ ಇಂಡಿಯಾ ಗೇಟ್ ಸಮೀಪದ ರಾಜಪಥದಲ್ಲಿರುವ ಬೋಟ್ ಕ್ಲಬ್ ಮೈದಾನವು ದೇಶದ ಪ್ರಮುಖ ರಾಜಕೀಯ ಪ್ರತಿಭಟನೆಗಳು, ರೈತ ಸಮಾವೇಶಗಳು ಮತ್ತು ಸಾರ್ವಜನಿಕ ಚಳವಳಿಗಳಿಗೆ ವೇದಿಕೆಯಾಗಿತ್ತು. ದೆಹಲಿಯ ಜಂತರ್ ಮಂತರ್ ಪ್ರತಿಭಟನಾ...

2026ರ ಅರ್ಥಶಾಸ್ತ್ರ ನೊಬೆಲ್ ಪ್ರಶಸ್ತಿಯ ಹಿಂದಿನ ತಿರುಳು

ಅಮೆರಿಕದ ಇಬ್ಬರು ವಿದ್ವಾಂಸರಾದ ರಾಬರ್ಟ್ ಇ. ಹಾಲ್ ಮತ್ತು ಮೈಕಲ್ ವುಡ್‌ಫೋರ್ಡ್ ರೂಪಿಸಿದ 'ನವ-ಕೇನ್ಸಿಯನ್ ಮಾದರಿ'ಗಳು ಇಂದು ಜಗತ್ತಿನ ಬಹುತೇಕ ಕೇಂದ್ರ ಬ್ಯಾಂಕುಗಳ ಮತ್ತು ಹಣಕಾಸು ಇಲಾಖೆಗಳ ದೈನಂದಿನ ದಿಕ್ಸೂಚಿಯಾಗಿವೆ. ಆ ಕಾರಣಕ್ಕೆ...

ವಂಚಕರ ಮಾತು ನಂಬಿದ ದೂರುದಾರರು, 2026ರ ಸೆಪ್ಟೆಂಬರ್ 2ರಿಂದ ಅಕ್ಟೋಬರ್ 6ರವರೆಗೆ ಹಂತ ಹಂತವಾಗಿ ಒಟ್ಟು ₹1.31 ಕೋಟಿ ಹಣವನ್ನು ವಿವಿಧ ಬ್ಯಾಂಕ್ ಖಾತೆಗಳಿಗೆ ವರ್ಗಾಯಿಸಿದ್ದಾರೆ. ಬಳಿಕ ತಾವು ಡಿಜಿಟಲ್ ಅರೆಸ್ಟ್ ಹೆಸರಿನ ಸೈಬರ್ ವಂಚನೆಗೆ ಒಳಗಾಗಿರುವುದನ್ನು ಅರಿತು, ತಕ್ಷಣವೇ ರಾಷ್ಟ್ರೀಯ ಸೈಬರ್ ಅಪರಾಧ ಸಹಾಯವಾಣಿ 1930ಕ್ಕೆ ಕರೆ ಮಾಡಿ ಮಾಹಿತಿ ನೀಡಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಘಟನೆಗೆ ಸಂಬಂಧಿಸಿದಂತೆ ದಕ್ಷಿಣ ಕನ್ನಡ ಜಿಲ್ಲಾ ಸೈಬರ್ ಅಪರಾಧ ಪೊಲೀಸ್ ಠಾಣೆಯಲ್ಲಿ (CCPS DK) ಅಪರಾಧ ಸಂಖ್ಯೆ 42/2026ರ ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಮಾಹಿತಿ ತಂತ್ರಜ್ಞಾನ ಕಾಯ್ದೆಯ ಕಲಂ 66(C), 66(D) ಹಾಗೂ ಭಾರತೀಯ ನ್ಯಾಯ ಸಂಹಿತೆಯ (BNS) ಕಲಂ 126(2), 204, 308(6), 318(4), 319(2), 351 ಮತ್ತು 3(5)ರ ಅನ್ವಯ ಪ್ರಕರಣ ದಾಖಲಿಸಿಕೊಂಡು ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

ಪೊಲೀಸ್, ಸಿಬಿಐ, ಜಾರಿ ನಿರ್ದೇಶನಾಲಯ (ED), ಆದಾಯ ತೆರಿಗೆ ಇಲಾಖೆ ಅಥವಾ ಎಟಿಎಸ್ ಅಧಿಕಾರಿಗಳೆಂದು ಹೇಳಿಕೊಂಡು ವಿಡಿಯೋ ಕರೆ ಮೂಲಕ ಬಂಧನದ ಬೆದರಿಕೆ ಹಾಕುವುದು ಸೈಬರ್ ವಂಚಕರು ಅನುಸರಿಸುತ್ತಿರುವ ಪ್ರಮುಖ ತಂತ್ರವಾಗಿದೆ. ಆದರೆ, ಭಾರತೀಯ ಕಾನೂನಿನಲ್ಲಿ ‘ಡಿಜಿಟಲ್ ಅರೆಸ್ಟ್’ ಎಂಬ ಅಧಿಕೃತ ಬಂಧನ ಪ್ರಕ್ರಿಯೆ ಇಲ್ಲ ಎಂದು ಪೊಲೀಸರು ಸಾರ್ವಜನಿಕರಿಗೆ ಎಚ್ಚರಿಕೆ ನೀಡಿದ್ದಾರೆ.

ತನಿಖೆ, ಬ್ಯಾಂಕ್ ಖಾತೆ ಪರಿಶೀಲನೆ ಅಥವಾ ಹಣದ ದೃಢೀಕರಣದ ನೆಪದಲ್ಲಿ ಅಪರಿಚಿತರು ಹಣ ವರ್ಗಾಯಿಸುವಂತೆ ಸೂಚಿಸಿದರೆ ಸಾರ್ವಜನಿಕರು ಯಾವುದೇ ಕಾರಣಕ್ಕೂ ಆತಂಕಕ್ಕೆ ಒಳಗಾಗಬಾರದು. ಇಂತಹ ಕರೆಗಳನ್ನು ನಂಬಿ ಹಣ ವರ್ಗಾಯಿಸದೆ, ಸಂಬಂಧಪಟ್ಟ ಪೊಲೀಸ್ ಠಾಣೆಯನ್ನು ಸಂಪರ್ಕಿಸಬೇಕು ಎಂದು ಸಲಹೆ ನೀಡಿದ್ದಾರೆ.

ಇದನ್ನೂ ಓದಿ: ಬೆಂಗಳೂರು | ಸಂಚಾರ ಪೊಲೀಸರ ಹೆಸರಲ್ಲಿ ಸೈಬರ್‌ ವಂಚನೆ; ₹2.32 ಲಕ್ಷ ಕಳೆದುಕೊಂಡ ಟೆಕ್ಕಿ

ಸಾರ್ವಜನಿಕರು ಪಾಲಿಸಬೇಕಾದ ಮುನ್ನೆಚ್ಚರಿಕೆಗಳು:

  • ಯಾವುದೇ ಕಾನೂನು ಜಾರಿ ಸಂಸ್ಥೆ ವಿಡಿಯೋ ಕರೆ ಮೂಲಕ ವ್ಯಕ್ತಿಯನ್ನು ಬಂಧಿಸುವುದಿಲ್ಲ.
  • ಪೊಲೀಸ್ ಅಥವಾ ಇತರ ತನಿಖಾ ಸಂಸ್ಥೆಗಳ ಹೆಸರಿನಲ್ಲಿ ಬೆದರಿಕೆ ಬಂದರೆ ಕರೆ ಕಡಿತಗೊಳಿಸಿ, ಅಧಿಕೃತ ಮಾರ್ಗಗಳ ಮೂಲಕ ಪರಿಶೀಲಿಸಿ.
  • ಬ್ಯಾಂಕ್ ಖಾತೆಯಲ್ಲಿರುವ ಹಣವನ್ನು ಪರಿಶೀಲಿಸುವ ನೆಪದಲ್ಲಿ ಯಾವುದೇ ಖಾಸಗಿ ಖಾತೆಗೆ ಹಣ ವರ್ಗಾಯಿಸುವಂತೆ ಅಧಿಕೃತ ಅಧಿಕಾರಿಗಳು ಕೇಳುವುದಿಲ್ಲ.
  • ಸೈಬರ್ ವಂಚನೆಗೆ ಒಳಗಾದರೆ ಕೂಡಲೇ 1930 ಸಹಾಯವಾಣಿಗೆ ಕರೆ ಮಾಡಿ ಅಥವಾ cybercrime.gov.in ವೆಬ್‌ಸೈಟ್‌ನಲ್ಲಿ ದೂರು ದಾಖಲಿಸಿ.

ಸೈಬರ್ ವಂಚನೆ ನಡೆದ ತಕ್ಷಣ ದೂರು ದಾಖಲಿಸುವುದರಿಂದ ಹಣದ ವರ್ಗಾವಣೆಯನ್ನು ತಡೆಹಿಡಿಯುವ ಅಥವಾ ಹಣವನ್ನು ಮರಳಿ ಪಡೆಯುವ ಸಾಧ್ಯತೆ ಹೆಚ್ಚಬಹುದು. ಹೀಗಾಗಿ ಸಾರ್ವಜನಿಕರು ಅಪರಿಚಿತ ಕರೆಗಳು, ವಿಡಿಯೋ ಕರೆಗಳು ಹಾಗೂ ಹಣ ವರ್ಗಾವಣೆಗೆ ಸಂಬಂಧಿಸಿದ ಸೂಚನೆಗಳ ಬಗ್ಗೆ ಎಚ್ಚರಿಕೆಯಿಂದ ಇರಬೇಕು ಎಂದು ಪೊಲೀಸರು ಮನವಿ ಮಾಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್ | ಅಲಿಯಂಬರ್‌ ಬಳಿ ಸೇತುವೆ ಕುಸಿತ: ಸಂಚಾರ ಸ್ಥಗಿತ

ಬೀದರ್ ತಾಲೂಕಿನ ಅಲಿಯಂಬರ್ ಮಾರ್ಗವಾಗಿ ಚಂದಾಪೂರ, ನಿಟ್ಟೂರು(ಬಿ) ಇತರೆ ಗ್ರಾಮಗಳಿಗೆ ಸಂಪರ್ಕಿಸುವ...

6 ರಾಜ್ಯಗಳಿಗೆ ನೂತನ ರಾಜ್ಯಪಾಲರ ನೇಮಕ: ಕರ್ನಾಟಕದ ರಾಜ್ಯಪಾಲರಾಗಿ ಡಾ. ಸುಧಾ ಯಾದವ್

ರಾಷ್ಟ್ರಪತಿ ಭವನವು ಸೋಮವಾರ ಹೊರಡಿಸಿದ ಅಧಿಕೃತ ಪ್ರಕಟಣೆಯ ಪ್ರಕಾರ, ರಾಷ್ಟ್ರಪತಿಯವರು ಕರ್ನಾಟಕ...

ಹಿರಿಯ ನಾಗರಿಕರಿಗೆ ಮಾನಸಿಕ ಕಿರುಕುಳ ನೀಡಿದರೆ 3 ವರ್ಷ ಜೈಲು: ಕೇರಳಂನಲ್ಲಿ ಹೊಸ ಕಾನೂನು

ವಯೋವೃದ್ಧರ ರಕ್ಷಣೆಗೆ ಮುಂದಾಗಿರುವ ಕೇರಳಂ ಸರ್ಕಾರವು ಮಹತ್ವದ ಹೆಜ್ಜೆಯೊಂದನ್ನು ಇಟ್ಟಿದ್ದು,...

ಬೀದರ್‌ | ಉದ್ಯೋಗಾರ್ಹತೆ ಹೆಚ್ಚಿಸಲು ಐಸಿಟಿ ಅಕಾಡೆಮಿ ತರಬೇತಿ ಸಹಕಾರಿ

ವಿದ್ಯಾರ್ಥಿಗಳ ಶೈಕ್ಷಣಿಕ ಮತ್ತು ವೃತ್ತಿಪರ ಬೆಳವಣಿಗೆಗೆ ಇಂತಹ ಉದ್ಯೋಗ ಕೌಶಲ್ಯ ತರಬೇತಿ...