9 ತಿಂಗಳ ಬಳಿಕ ಅಂತರಿಕ್ಷದಿಂದ ಭೂಮಿಗೆ ಮರಳಿದ ಸುನಿತಾ ವಿಲಿಯಮ್ಸ್, ಬುಚ್‌ ವಿಲ್ಮೋರ್‌

Date:

Advertisements

ಭಾರತೀಯ ಮೂಲದ ಅಮೆರಿಕದ ಗಗನಯಾತ್ರಿ ಸುನಿತಾ ವಿಲಿಯಮ್ಸ್ ಅವರು 286 ದಿನಗಳ ಬಳಿಕ ಇಂದು ಅಂತರಿಕ್ಷದಿಂದ ಭೂಮಿಗೆ ಯಶಸ್ವಿಯಾಗಿ ಮರಳಿದರು. ತಾಂತ್ರಿಕ ದೋಷದಿಂದ ಅಂತಾರಾಷ್ಟ್ರೀಯ ಬಾಹ್ಯಾಕಾಶ ಕೇಂದ್ರದಲ್ಲಿ ಸಿಲುಕಿದ್ದ ಸುನಿತಾ ವಿಲಿಯಮ್ಸ್‌ ಮತ್ತು ನಾಸಾದ ಬಾಹ್ಯಾಕಾಶ ಯಾನಿ ಬುಚ್‌ ವಿಲ್ಮೋರ್‌ ಅವರಿದ್ದ ಸ್ಪೇಸ್‌ ಎಕ್ಸ್‌ ಡ್ರ್ಯಾಗನ್‌ ನೌಕೆ ಬುಧವಾರ ಬೆಳಗ್ಗೆ ಅಮೆರಿಕಾದ ಫ್ಲೋರಿಡಾದ ಕರಾವಳಿಯ ಸಮುದ್ರದಲ್ಲಿ ಬಂದಿಳಿತು.

ಸುನಿತಾ, ಬುಚ್‌ ಜೊತೆಗೆ ರಷ್ಯಾದ ಅಲೆಕ್ಸಾಂಡರ್‌ ಗೋರ್ಬುನೋವ್‌ ಮತ್ತು ಅಮೆರಿಕದ ನಿಕ್‌ ಹೇಗ್‌ ಅವರನ್ನು ಎಲಾನ್‌ ಮಸ್ಕ್‌ ಒಡೆತನದ ಸ್ಪೇಸ್‌ಎಕ್ಸ್‌ ಕಂಪನಿಯ ಕ್ರ್ಯೂ ಡ್ರ್ಯಾಗನ್‌ ಕ್ಯಾಪ್ಸೂಲ್‌ ಭೂಮಿಗೆ ಕರೆತಂದಿದೆ.

ಭಾರತೀಯ ಕಾಲಮಾನ ಮಂಗಳವಾರ ಬೆಳಗ್ಗೆ ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಿಂದ ನಿರ್ಗಮಿಸಿದ ನೌಕೆ ನಿಗದಿಯಂತೆ ಅಮೆರಿಕದ ಕಾಲಮಾನದ ಪ್ರಕಾರ ಮಂಗಳವಾರ ಸಂಜೆ 5.57ಕ್ಕೆ (ಭಾರತೀಯ ಕಾಲಮಾನ ಬುಧವಾರ ಮುಂಜಾನೆ 3.27ಕ್ಕೆ) ಭೂಮಿಯನ್ನು ತಲುಪಿದೆ.

Advertisements

ಈ ಸುದ್ದಿ ಓದಿದ್ದೀರಾ? ಬಾಹ್ಯಾಕಾಶದಲ್ಲಿ ಸಿಲುಕಿರುವ ದಿಟ್ಟ ಸುನಿತಾ ವಿಲಿಯಮ್ಸ್ ಭೂಮಿಗೆ ಬರುವುದು ಯಾವಾಗ?

ಕ್ರ್ಯೂ ಡ್ರ್ಯಾಗನ್‌ ಕ್ಯಾಪ್ಸೂಲ್‌ ಫ್ಲೋರಿಡಾದ ಸಮುದ್ರದ ಮೇಲೆ ಬಂದಿಳಿತು. ಆಕಾಶದಿಂದ ವೇಗವಾಗಿ ಬರುವ ಕ್ಯಾಪ್ಸೂಲ್‌ ನಿಧಾನವಾಗಿ ಲ್ಯಾಂಡ್‌ ಆಯಿತು. ಭೂಮಿ ಪ್ರವೇಶದ ಬಳಿಕ ಕ್ಯಾಪ್ಸೂಲ್‌ನಲ್ಲಿರುವ 4 ಪ್ಯಾರಾಚೂಟ್‌ಗಳು ತೆರೆದುಕೊಂಡಿತ್ತು. ಈ ಪ್ಯಾರಾಚೂಟ್‌ಗಳು ಕ್ಯಾಪ್ಸೂಲ್‌ ವೇಗವನ್ನು ತಗ್ಗಿಸಿತ್ತು. ವೇಗ ತಗ್ಗಿದಂತೆ ಕ್ಯಾಪ್ಸೂಲ್‌ ನಿಧನವಾಗಿ ಸಮುದ್ರಕ್ಕೆ ಬಂದಿಳಿತು.

ನಂತರ ವಿಶೇಷ ದೋಣಿಯಲ್ಲಿ ಸ್ಪೇಸ್‌ ಎಕ್ಸ್‌ ಸಿಬ್ಬಂದಿ ನೌಕೆಯನ್ನು ರೋಪ್‌ ಬಳಸಿ ಹತ್ತಿರದಲ್ಲೇ ಇದ್ದ ದೊಡ್ಡ ದೋಣಿ ಬಳಿ ಕರೆತಂದರು. ಈ ನೌಕೆಯನ್ನು ಕ್ರೇನ್‌ ಬಳಸಿ ದೋಣಿಯ ಒಳಗಡೆ ಇಡಲಾಯಿತು. ದೋಣಿ ಒಳಗಡೆ ಇಟ್ಟ ನಂತರ ಕ್ಯಾಪ್ಸೂಲ್‌ ಸುರಕ್ಷಿತವಾಗಿದೆಯೇ ಎಂದು ಪರಿಶೀಲಿಸಿದ ಬಳಿಕ ಕೆಳಗಡೆ ಇರುವ ಬಾಗಿಲು ತೆರೆಯಲಾಯಿತು. ಈ ಬಾಗಿಲಿನ ಮೂಲಕ ಯಾನಿಗಳನ್ನು ಸ್ಪೇಸ್‌ ಎಕ್ಸ್‌ ಸಿಬ್ಬಂದಿ ಹೊರಗೆ ನಿಧಾನವಾಗಿ ಎಳೆದು ವಿಶೇಷವಾಗಿ ವಿನ್ಯಾಸ ಪಡಿಸಲಾಗಿರುವ ವೀಲ್‌ ಚೇರ್‌ನಲ್ಲಿ ಕೂರಿಸಲಾಯಿತು.

2024ರ ಜೂನ್ 6ರಂದು ಸುನಿತಾ ಮತ್ತು ವಿಲ್ಮೋರ್ ಎಂಟು ದಿನಗಳ ಕಾರ್ಯಾಚರಣೆಗಾಗಿ ಬೋಯಿಂಗ್ ಸ್ಟಾರ್ ಲೈನರ್ ಕ್ಯಾಪ್ಸುಲ್‌ನಲ್ಲಿ ಬಾಹ್ಯಾಕಾಶಕ್ಕೆ ತೆರಳಿದ್ದರು. ಬಾಹ್ಯಾಕಾಶ ನೌಕೆಯ ಸಮಸ್ಯೆ ಹಾಗೂ ತಾಂತ್ರಿಕ ದೋಷಗಳಿಂದಾಗಿ ಹಿಂದಿರುಗಲು ಸಾಧ್ಯವಾಗಿರಲಿಲ್ಲ. ಈ ಮುಂಚೆ 2025ರ ಫೆಬ್ರವರಿ ತಿಂಗಳಲ್ಲಿ ಭೂಮಿಗೆ ಮರಳಲಿದ್ದಾರೆ ಎಂದು ನಾಸಾ ತಿಳಿಸಿತ್ತು. ಆದರೆ ಇದೀಗ ಮಾರ್ಚ್‌ಗೆ ಮುಂದೂಡಿಕೆ ಆಗಿತ್ತು.

https://twitter.com/NASA/status/1902099027199480089?ref_src=twsrc%5Etfw%7Ctwcamp%5Etweetembed%7Ctwterm%5E1902099027199480089%7Ctwgr%5E8514cbd4475856e72fe9f0b12091243493d86967%7Ctwcon%5Es1_&ref_url=https%3A%2F%2Fwww.deccanherald.com%2F%2Fworld%2Fnasa-astronauts-butch-and-suni-return-to-earth-after-drawn-out-mission-in-space-3452375

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷ ಚಂದ್ರಶೇಖರನಾಥ ಸ್ವಾಮೀಜಿ ನಿಧನ

ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಕುಮಾರ ಚಂದ್ರಶೇಖರನಾಥ ಸ್ವಾಮೀಜಿ ಅವರು...

BREAKING NEWS | ಬೆಂಗಳೂರಿನಲ್ಲಿ ಸ್ಫೋಟ: ಬಾಲಕ ಸಾವು; 10ಕ್ಕೂ ಅಧಿಕ ಮನೆಗೆ ಹಾನಿ

ಬೆಂಗಳೂರು ನಗರದ ವಿಲ್ಸನ್‌ ಗಾರ್ಡನ್‌ನ ಚಿನ್ನಯ್ಯನ ಪಾಳ್ಯದಲ್ಲಿ ಸ್ಫೋಟ ಸಂಭವಿಸಿದ್ದು, ಓರ್ವ...

ಕಲಬುರಗಿ ಶರಣಬಸವೇಶ್ವರ ಸಂಸ್ಥಾನ‌ದ 8ನೇ ಪೀಠಾಧಿಪತಿ ಶರಣಬಸಪ್ಪ ಅಪ್ಪ ವಿಧಿವಶ

ಕಲಬುರಗಿಯ ಶರಣಬಸವೇಶ್ವರ ಸಂಸ್ಥಾನ ಮಠದ 8ನೇ ಪೀಠಾಧಿಪತಿ ಡಾ.ಶರಣಬಸಪ್ಪ ಅಪ್ಪ (90)...

Download Eedina App Android / iOS

X