- ಸುಳ್ಳು ಮಾಹಿತಿ ಪತ್ತೆಗೆ ಮಾಹಿತಿ ತಂತ್ರಜ್ಞಾನ ಕಾಯಿದೆಗೆ ತಿದ್ದುಪಡಿ ಸೂಚನೆ
- ಫೆಬ್ರವರಿಯಲ್ಲಿ ಸಭೆ ನಡೆಸಿದ್ದ ಐಟಿ, ಸಾಮಾಜಿಕ ಮಾಧ್ಯಮ ಪ್ರತಿನಿಧಿಗಳು
ತಮ್ಮಲ್ಲಿ ಹಂಚಿಕೆಯಾಗುವ ಸಂಶಯಾಸ್ಪದ ಮಾಹಿತಿಗಳ ಸತ್ಯಾಸತ್ಯತೆಯನ್ನು ಪರಿಶೀಲಿಸಿ ಸುಳ್ಳು ಮಾಹಿತಿ ಪತ್ತೆಗೆ ಪ್ರಮಾಣೀಕರಣ ಸಂಸ್ಥೆ ರಚನೆ ಸಂಬಂಧ ಮೆಟಾ ಮತ್ತು ಗೂಗಲ್ ಸೇರಿದಂತೆ ಪ್ರಮುಖ ಸಾಮಾಜಿಕ ಮಾಧ್ಯಮ ವೇದಿಕೆಯ ಕಂಪನಿಗಳು ಕೇಂದ್ರಕ್ಕೆ ಪ್ರಸ್ತಾವನೆ ಸಲ್ಲಿಸಿವೆ.
ಸಾಮಾಜಿಕ ಮಾಧ್ಯಮಗಳಲ್ಲಿ ಪೋಸ್ಟ್ ಆಗುವ ಸುಳ್ಳು ಮಾಹಿತಿ ಪತ್ತೆ ಹಚ್ಚಲು ಈ ಸಂಸ್ಥೆ ಕಾರ್ಯನಿರ್ವಹಿಸುತ್ತದೆ. ಪ್ರಮುಖ ಸಾಮಾಜಿಕ ಮಾಧ್ಯಮ ಕಂಪನಿಗಳು ಕೇಂದ್ರದ ಎಲೆಕ್ಟ್ರಾನಿಕ್ಸ್ ಮತ್ತು ಐಟಿ ಸಚಿವಾಲಯಕ್ಕೆ ಐದು ಪುಟಗಳ ಪ್ರಸ್ತಾವನೆ ಸಲ್ಲಿಸಿವೆ.
ಇದು ಸುಳ್ಳು ಮಾಹಿತಿ ಪತ್ತೆ ಮಾಡಲು ವಿಶ್ವಾಸಾರ್ಹ ಸಂಸ್ಥೆಯಾಗಿ ಕಾರ್ಯನಿರ್ವಹಿಸಲಿದೆ ಎಂದು ಸರ್ಕಾರ ಹೇಳಿಕೊಂಡಿದೆ. 2021ರ ಮಾಹಿತಿ ತಂತ್ರಜ್ಞಾನ ನಿಯಮಗಳು ಕಾಯಿದೆಗೆ ಐಟಿ ಸಚಿವಾಲಯ ಗುರುವಾರ ಹೊಸ ತಿದ್ದುಪಡಿಗಳನ್ನು ಸೂಚಿಸಿದೆ. ಇದರಂತೆ ಸರ್ಕಾರಕ್ಕೆ ಸಂಬಂಧಿಸಿದ ಸುಳ್ಳು ಮಾಹಿತಿ ಮೇಲೆ ಕಾರ್ಯನಿರ್ವಹಿಸಲು ಸತ್ಯ ಪರಿಶೀಲನೆಯ ಸಂಸ್ಥೆ ಸ್ಥಾಪಿಸುತ್ತದೆ. ಸದ್ಯ ಪ್ರೆಸ್ ಇನ್‌ಫಾರ್ಮೇಶನ್ ಬ್ಯೂರೋಗೆ (ಪಿಐಬಿ) ಸರ್ಕಾರ ತೆಗೆದುಕೊಂಡಿರುವ ಈ ನಿರ್ಧಾರವನ್ನು ಕಾರ್ಯರೂಪಕ್ಕೆ ತರುವ ಈ ಹೊಣೆಗಾರಿಕೆ ನೀಡಲಾಗಿದೆ.
“ಕೇಂದ್ರ ಸರ್ಕಾರಕ್ಕೆ ಸಂಬಂಧಿಸಿದ ಮಾಹಿತಿಯ ಸತ್ಯಾಸತ್ಯತೆಯ ಪರಿಶೀಲನೆಗೆ ಸ್ವಯಂ ನಿಯಂತ್ರಣ ಪ್ರಮಾಣೀಕರಣ ಸಂಸ್ಥೆ ರಚನೆ ಸಂಬಂಧ ಸಾಮಾಜಿಕ ಮಾಧ್ಯಮ ಸಂಸ್ಥೆಗಳು ಪ್ರಸ್ತಾವನೆ ಸಲ್ಲಿಸಿವೆ” ಎಂದು ಸರ್ಕಾರದ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಈ ಸುದ್ದಿ ಓದಿದ್ದೀರಾ? ಪ್ರಜಾಪ್ರಭುತ್ವದ ಮಾತು, ಸರ್ವಾಧಿಕಾರದ ನಡೆ ; ಕೇಂದ್ರದ ಬಗ್ಗೆ ಖರ್ಗೆ ಆಕ್ರೋಶ
ಕಳೆದ ಫೆಬ್ರವರಿಯಲ್ಲಿ ಐಟಿ ಸಚಿವಾಲಯದ ಅಧಿಕಾರಿಗಳು ಮತ್ತು ಪ್ರಮುಖ ಸಾಮಾಜಿಕ ಮಾಧ್ಯಮ ಕಂಪನಿಗಳ ಪ್ರತಿನಿಧಿಗಳ ನಡುವೆ ಸಭೆ ನಡೆದಿತ್ತು. ಈ ವೇಳೆ ಪ್ರಮಾಣೀಕರಣ ಸಂಸ್ಥೆ ರಚನೆ ಕುರಿತು ಚರ್ಚಿಸಲಾಗಿದೆ ಎಂದು ಅಧಿಕಾರಿಯೊಬ್ಬರು ಹೇಳಿದರು.
ಸಾಮಾಜಿಕ ಮಾಧ್ಯಮ ಸಂಸ್ಥೆಗಳು ಈಗಾಗಲೇ ಹಲವಾರು ಸತ್ಯ ಪರೀಕ್ಷಕ ಸಂಸ್ಥೆಗಳನ್ನು ಅವಲಂಬಿಸಿವೆ.
ಮೆಟಾ ಸಂಸ್ಥೆಯು ಇಂಟರ್ನ್ಯಾಷನಲ್ ಫ್ಯಾಕ್ಟ್ ಚೆಕಿಂಗ್ ನೆಟ್‌ವರ್ಕ್ (ಐಎಫ್‌ಸಿಎನ್) ಜತೆ ಕಾರ್ಯನಿರ್ವಹಿಸುತ್ತಿದೆ. ಇದನ್ನು 2015 ರಲ್ಲಿ ಅಮೆರಿಕ ಮೂಲದ ಪಾಯ್ನ್‌ಟರ್ ಸಂಸ್ಥೆಯಲ್ಲಿ ಸ್ಥಾಪಿಸಲಾಯಿತು.