ಆರೋಗ್ಯ ಇಲಾಖೆಯ 30 ಕೋಟಿ ವೆಚ್ಚದ ಸೌಲಭ್ಯಗಳಿಗೆ ಇಂದು ದಿನೇಶ್ ಗುಂಡೂರಾವ್ ಲೋಕಾರ್ಪಣೆ

Date:

ಕೋಲಾರ: ಕೋಲಾರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಆರೋಗ್ಯ ಇಲಾಖೆಯಿಂದ 30 ಕೋಟಿ ವೆಚ್ಚದ ಆರೋಗ್ಯ ಸೌಲಭ್ಯಗಳಿಗೆ ಇಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮತ್ತು ಉಸ್ತುವಾರಿ ಸಚಿವ ಬೈರತಿ ಸುರೇಶ್ ಹಾಗೂ ಜಿಲ್ಲೆಯ ಜನಪ್ರತಿನಿಧಿಗಳು ಲೋಕಾರ್ಪಣೆ ಮಾಡಲಿದ್ದಾರೆ ಎಂದು ಶಾಸಕ ಕೊತ್ತೂರು ಮಂಜುನಾಥ್ ತಿಳಿಸಿದರು.

- Advertisement -

ಸೋಮವಾರ ವಿಧಾನ ಪರಿಷತ್ ಸದಸ್ಯ ಎಂ.ಎಲ್ ಅನಿಲ್ ಕುಮಾರ್ ಅವರೊಂದಿಗೆ ನರಸಾಪುರ ಸಮುದಾಯ ಆರೋಗ್ಯ ಕೇಂದ್ರದ 12.39 ಕೋಟಿ, ನಗರದ ಜಿಲ್ಲಾ ಆಸ್ಪತ್ರೆಯ ಆವರಣದಲ್ಲಿರುವ ತೀವ್ರ ನಿಗಾ ಘಟಕ 16 ಕೋಟಿ, ಡಯಾಲಿಸಿಸ್ ಘಟಕ 1.25 ಕೋಟಿ ಸೇರಿದಂತೆ ಒಟ್ಟು 29.64 ಕೋಟಿ ವೆಚ್ಚದ ಆರೋಗ್ಯ ಸೌಲಭ್ಯಗಳ ನೂತನ ಕಟ್ಟಡಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿ ಮಾತನಾಡಿದ ಅವರು, ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಆರೋಗ್ಯ ಸಿಗಬೇಕಾಗಿದೆ. ಅದೇ ಉದ್ದೇಶದಿಂದ ರಾಜ್ಯದಲ್ಲೇ ಮಾದರಿ ಸೇವೆ ನೀಡುವುದು ನಮ್ಮ ಗುರಿಯಾಗಿದೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಅಂಬಾರಿಯ ಮುಂದೆ ಪೊಲೀಸರು ಸೆಲ್ಫಿ ತೆಗೆದುಕೊಂಡರೆ ಭದ್ರತೆಗೆ ಹೇಗೆ...

ಚಿನ್ನದ ಅಂಬಾರಿಯನ್ನು ಜಂಬೂಸವಾರಿಯ ದಿನ ಬಳಸಿಕೊಳ್ಳಲು ಸರ್ಕಾರ ಅರಸು ಮನೆತನದವರಿಂದ ಪಡೆಯುತ್ತದೆ. ಉಚಿತವಾಗಿ ಅಲ್ಲ; ನಿಗದಿಪಡಿಸಿರುವ ಹಣವನ್ನು ಸಂದಾಯ ಮಾಡಿ. ಅಂಬಾರಿಯ ಭದ್ರತೆಯ ಹೊಣೆ ಸರ್ಕಾರದ ಮೇಲೂ ಇರುತ್ತದೆ. ಪೊಲೀಸರು ಸೆಲ್ಫಿ ತೆಗೆದುಕೊಂಡರೆ...

ಜನತಂತ್ರಕ್ಕೆ ಕುತ್ತು: ‘ಖಾಸಗಿತನ’ದ ನೆಪದಲ್ಲಿ ಪತ್ರಿಕಾ ಸ್ವಾತಂತ್ರ್ಯ ಹತ್ತಿಕ್ಕಲು...

ಮೋದಿ ಸರ್ಕಾರವು ಈ ಕಾಯ್ದೆಯನ್ನು ಏಕಾಏಕಿ ಜಾರಿಗೊಳಿಸದೆ, ಹಂತ ಹಂತವಾಗಿ ಜಾರಿಗೊಳಿಸುತ್ತಾ ಪ್ರಜಾಪ್ರಭುತ್ವದ ಕತ್ತು ಹಿಸುಕುತ್ತಿದೆ. ಆರ್‌ಟಿಐ ಕಾಯ್ದೆಯನ್ನು ದುರ್ಬಲಗೊಳಿಸುವ ತಿದ್ದುಪಡಿಯು ಈಗಾಗಲೇ ನವೆಂಬರ್ 2025ರಿಂದಲೇ ಜಾರಿಯಲ್ಲಿದ್ದರೆ, ಡೇಟಾ ಬಳಕೆಯ ಕಠಿಣ ನಿಯಮಗಳು...

ಬೆಂಗಳೂರು ಶಿಕ್ಷಕರ ಕ್ಷೇತ್ರದ ಸೋಲು: ಕಾಂಗ್ರೆಸ್ ಸರ್ಕಾರಕ್ಕೆ ಎಚ್ಚರಿಕೆಯ...

ಉಳಿದ ಮೂರು ವಿಧಾನ ಪರಿಷತ್‌ ಕ್ಷೇತ್ರಗಳಿಗಿಂತ ಬೆಂಗಳೂರು ಶಿಕ್ಷಕರ ಕ್ಷೇತ್ರದ ಫಲಿತಾಂಶ ರಾಜಕೀಯವಾಗಿ ಪರಿಣಾಮ ಬೀರಬಲ್ಲದು. ಡಿ.ಕೆ. ಶಿವಕುಮಾರ್‌ ಅವರ ನಾಯಕತ್ವವನ್ನು ಓರೆಗೆ ಹಚ್ಚಬಲ್ಲದು. ಒಕ್ಕಲಿಗ ಪ್ರಾಬಲ್ಯದ ಪ್ರದೇಶಗಳ ಒಲವು-ನಿಲುವುಗಳನ್ನು ತಿಳಿಸಬಲ್ಲದು. ಆದರೆ,...

ಜಿಲ್ಲೆಯ ಜನ ಹೊರಗಡೆ ಚಿಕಿತ್ಸೆಗಾಗಿ ಹೋಗಬಾರದು ಎನ್ನುವ ಉದ್ದೇಶದಿಂದ ಅತ್ಯಾಧುನಿಕ ಸೌಲಭ್ಯಗಳನ್ನು ಒದಗಿಸಲು ಲೋಕಾರ್ಪಣೆ ಗೊಳಿಸಲಾಗುತ್ತಿದೆ. ಜೊತೆಗೆ ಆಸ್ಪತ್ರೆ ಉಳಿದ ಜಾಗದಲ್ಲಿ ಪ್ರತ್ಯೇಕವಾದ ಪಾರ್ಕಿಂಗ್ ಮತ್ತು ರೋಗಿಗಳ ಸಂಬಂಧಿಕರಿಗೆ ವಿಶ್ರಾಂತಿ ಮತ್ತು ಊಟ ಮಾಡಲು ಉದ್ಯಾನವನ ನಿರ್ಮಿಸಲು ಮುಂದಿನ ದಿನಗಳಲ್ಲಿ ಕ್ರಮ ವಹಿಸಲಾಗುತ್ತದೆ ಎಂದರು.

ಇದೇ ಸಂದರ್ಭದಲ್ಲಿ ಆಸ್ಪತ್ರೆಯ ರೋಗಿಗಳನ್ನು ಭೇಟಿ ಮಾಡಿ ಸಮಸ್ಯೆಗಳನ್ನು ಆಲಿಸಿದರು. ಆಸ್ಪತ್ರೆಗೆ ಸಂಬಂಧಿಸಿದ ಸಮಸ್ಯೆಗಳು ಮತ್ತು ಬೇಡಿಕೆಗಳ ಪಟ್ಟಿಯನ್ನು ತಯಾರಿಸಿ ಕೊಡಿ ಆರೋಗ್ಯ ಸಚಿವರೊಂದಿಗೆ ಚರ್ಚಿಸಿ ಸಮಸ್ಯೆಗೆ ಪರಿಹಾರ ನೀಡುವ ಭರವಸೆ ನೀಡಿದರು.

ಇದನ್ನು ಓದಿದ್ದೀರಾ..? ಹಾಸ್ಟೆಲ್ ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಪರೀಕ್ಷೆಗಳ ಮೂಲಕ ಭವಿಷ್ಯವನ್ನು ರೂಪಿಸಿಕೊಳ್ಳುವ ಅವಕಾಶ

ಈ ಸಂದರ್ಭದಲ್ಲಿ ಜಿಲ್ಲಾ ಆರೋಗ್ಯಾಧಿಕಾರಿ‌‌ಡಾ. ಶ್ರೀನಿವಾಸ್, ಎಸ್.ಎನ್.ಆರ್ ಜಿಲ್ಲಾ ಆಸ್ಪತ್ರೆಯ ಶಸ್ತ್ರಚಿಕಿತ್ಸಕ ಡಾ. ಜಗದೀಶ್, ಸಿಂಡಿಕೇಟ್ ಸದಸ್ಯ ಸೀಸಂದ್ರ ಗೋಪಾಲಗೌಡ, ಗ್ರಾಮಾಂತರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮೈಲಾಂಡಹಳ್ಳಿ ಮುರಳಿ, ಕಾರ್ಯದರ್ಶಿ ವೀರೇಂದ್ರ ಪಾಟೀಲ್, ಮುಖಂಡರಾದ ಅಂಕತಟ್ಟಿ ಬಾಬು, ಷಂಷೀರ್, ಬೆಳ್ಳೂರು ಅಶ್ವಥ್, ಕನಕರಾಜು, ನರಸಾಪುರ ನವೀನ್, ಜಾನು ಬಾನು, ನದೀಂ, ಸೇರಿದಂತೆ ಕಾಂಗ್ರೆಸ್ ಮುಖಂಡರು ಆರೋಗ್ಯ ಇಲಾಖೆಯ ಅಧಿಕಾರಿಗಳು ಇದ್ದರು.

eedina
ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಂಗಳೂರು | ಕಾಂತಪುರಂ ಶೇಖ್ ಅಬೂಬಕರ್ ಅಹ್ಮದ್ ಅವರಿಗೆ ಯೆನೆಪೋಯ ವಿಶ್ವವಿದ್ಯಾಲಯದಿಂದ ಗೌರವ ಡಾಕ್ಟರೇಟ್

ಪ್ರಸಿದ್ದ ಮುಸ್ಲಿಂ ಧಾರ್ಮಿಕ ಪಂಡಿತ, ಕಲ್ಲಿಕೋಟೆಯ ಮರ್ಕಝ್ ಸಂಸ್ಥೆಗಳ ರೂವಾರಿ ಮುಸ್ಲಿಂ...

ಬಾಗಲಕೋಟೆ | ಪೋಲಿಯೋ ಮುಕ್ತ ಸಮಾಜದ ಸಂಕಲ್ಪ: ಬಾಗಲಕೋಟೆಯಿಂದ ವಿಜಯಪುರದವರೆಗೆ 190 ಕಿ.ಮೀ ಜಾಗೃತಿ ರ್ಯಾಲಿ

ಪೋಲಿಯೋ ಮುಕ್ತ ಸಮಾಜ ನಿರ್ಮಾಣದ ಸಂಕಲ್ಪದೊಂದಿಗೆ ರೋಟರಿ ಕ್ಲಬ್ ಬಾಗಲಕೋಟೆ ವತಿಯಿಂದ...

ಉಡುಪಿ | ಅಗ್ರಿಗೋಲ್ಡ್ ಹಗರಣ: ದಾಖಲೆ ಪರಿಶೀಲನಾ ಕೇಂದ್ರದಲ್ಲಿ ಸಂತ್ರಸ್ತರ ಪರದಾಟ

ಬಹುಕೋಟಿ ರೂ.ಗಳ ಅಗ್ರಿಗೋಲ್ಡ್ ಹಗರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತರ ದಾಖಲೆ ಪರಿಶೀಲನೆ ಕಾರ್ಯ...