ಉಡುಪಿ ಜಿಲ್ಲೆಯ ಪಂಚಾಯತ್ ಮೀಸಲಾತಿ ಪಟ್ಟಿಯಲ್ಲಿ ಎಸ್‌ಸಿ, ಎಸ್‌ಟಿ ಪುರುಷರಿಗೆ ಅವಕಾಶವಿಲ್ಲವೇ? ಮರುಪರಿಶೀಲನೆಗೆ ಆಗ್ರಹ

Date:

ರಾಜ್ಯದಲ್ಲಿ ಜಿಲ್ಲಾ ಪಂಚಾಯತ್‌, ತಾಲೂಕು ಪಂಚಾಯತ್‌ ಹಾಗೂ ಗ್ರಾಮ ಪಂಚಾಯತ್‌ ಚುನಾವಣೆಗಳು ನಡೆದು ಬಹಳ ಸಮಯ ಕಳೆದಿದ್ದರೂ ಚುನಾವಣೆಗಳು ಇನ್ನೂ ನಡೆಯದಿರುವುದು ಸಾರ್ವಜನಿಕರ ಅಸಮಾಧಾನಕ್ಕೆ ಕಾರಣವಾಗಿದೆ. ಈ ನಡುವೆ ಪ್ರಕಟವಾಗಿರುವ ಪಂಚಾಯತ್‌ ಕ್ಷೇತ್ರಗಳ ಕರಡು ಮೀಸಲಾತಿ ಪಟ್ಟಿಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಪುರುಷ ಅಭ್ಯರ್ಥಿಗಳಿಗೆ ಸ್ಪರ್ಧಿಸಲು ಅವಕಾಶ ಸಿಗದಿರುವ ವಿಚಾರವನ್ನು ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್‌ವಾದ) ಉಡುಪಿ ಜಿಲ್ಲಾ ಘಟಕವು ಪ್ರಶ್ನಿಸಿದ್ದು, ಮೀಸಲಾತಿ ಪಟ್ಟಿಯನ್ನು ಮರುಪರಿಶೀಲಿಸುವಂತೆ ಆಗ್ರಹಿಸಿದೆ.

- Advertisement -

ಈ ಕುರಿತು ಈದಿನ.ಕಾಮ್‌ ಜೊತೆ ಮಾತನಾಡಿದ ಸಮಿತಿಯ ಉಡುಪಿ ಜಿಲ್ಲಾ ಪ್ರಧಾನ ಸಂಚಾಲಕ ಮಂಜುನಾಥ ಗಿಳಿಯಾರು, ಉಡುಪಿ ಜಿಲ್ಲೆಯ ತಾಲೂಕು ಪಂಚಾಯತ್‌ ಕ್ಷೇತ್ರಗಳ ಕರಡು ಮೀಸಲಾತಿ ಪಟ್ಟಿಯನ್ನು ಪರಿಶೀಲಿಸಿದಾಗ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಪುರುಷ ಅಭ್ಯರ್ಥಿಗಳಿಗೆ ಸ್ಪರ್ಧಿಸಲು ಅವಕಾಶವಿಲ್ಲದಿರುವುದು ಗಮನಕ್ಕೆ ಬಂದಿದೆ ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ಜಿಲ್ಲೆಯ ಪ್ರತಿ ತಾಲೂಕು ಪಂಚಾಯತ್‌ನಲ್ಲಿ ಸುಮಾರು 15ರಿಂದ 16 ಕ್ಷೇತ್ರಗಳಿರುವ ಸಾಧ್ಯತೆಯಿದೆ. ಇಷ್ಟೊಂದು ಕ್ಷೇತ್ರಗಳಿದ್ದರೂ ಜಿಲ್ಲೆಯ ಸಮಗ್ರ ಚಿತ್ರಣವನ್ನು ಗಮನದಲ್ಲಿಟ್ಟುಕೊಂಡು ಕನಿಷ್ಠ ಎರಡು ಅಥವಾ ಮೂರು ಕ್ಷೇತ್ರಗಳಲ್ಲಾದರೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಪುರುಷ ಅಭ್ಯರ್ಥಿಗಳಿಗೆ ಸ್ಪರ್ಧಿಸಲು ಅವಕಾಶ ಕಲ್ಪಿಸಬೇಕಿತ್ತು. ಆದರೆ, ಪ್ರಸ್ತುತ ಮೀಸಲಾತಿ ಪಟ್ಟಿಯಲ್ಲಿ ಅಂತಹ ಅವಕಾಶ ಕಂಡುಬರದಿರುವುದು ಸಾಮಾಜಿಕ ನ್ಯಾಯದ ದೃಷ್ಟಿಯಿಂದ ಮರುಪರಿಶೀಲನೆಗೆ ಒಳಪಡಬೇಕಾದ ವಿಚಾರವಾಗಿದೆ ಎಂದು ಅವರು ಅಭಿಪ್ರಾಯಪಟ್ಟರು.

ಮಹಿಳಾ ಮೀಸಲಾತಿಗೆ ವಿರೋಧವಿಲ್ಲ, ಪುರುಷ ಕಾರ್ಯಕರ್ತರಿಗೂ ಅವಕಾಶ ಬೇಕು

ಪಂಚಾಯತ್‌ ರಾಜ್‌ ವ್ಯವಸ್ಥೆಯಲ್ಲಿ ಮಹಿಳೆಯರಿಗೆ ಮೀಸಲಾತಿ ನೀಡುವುದನ್ನು ತಮ್ಮ ಸಂಘಟನೆ ವಿರೋಧಿಸುವುದಿಲ್ಲ ಎಂದು ಸ್ಪಷ್ಟಪಡಿಸಿದ ಮಂಜುನಾಥ ಗಿಳಿಯಾರು, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಮಹಿಳೆಯರಿಗೂ ರಾಜಕೀಯದಲ್ಲಿ ಅವಕಾಶ ದೊರೆಯಬೇಕು. ಅವರು ಸಮರ್ಥವಾಗಿ ಜನಪ್ರತಿನಿಧಿಗಳಾಗಿ ಕಾರ್ಯನಿರ್ವಹಿಸಬಲ್ಲರು ಎಂಬ ವಿಶ್ವಾಸ ನಮಗಿದೆ ಎಂದು ಹೇಳಿದರು.

ಆದರೆ, ಸಾಮಾಜಿಕ ಹೋರಾಟಗಳಲ್ಲಿ ತೊಡಗಿಸಿಕೊಂಡಿರುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಪುರುಷ ಕಾರ್ಯಕರ್ತರಿಗೂ ರಾಜಕೀಯ ನಾಯಕತ್ವದಲ್ಲಿ ಭಾಗವಹಿಸುವ ಅವಕಾಶ ದೊರೆಯಬೇಕು. ಹಲವು ವರ್ಷಗಳಿಂದ ಸಮಾಜದ ವಿವಿಧ ಸಮಸ್ಯೆಗಳ ವಿರುದ್ಧ ಹೋರಾಡುತ್ತಿರುವ ಇಂತಹ ಕಾರ್ಯಕರ್ತರು ರಾಜಕೀಯ ಕ್ಷೇತ್ರದಲ್ಲಿಯೂ ಗುರುತಿಸಿಕೊಳ್ಳುವ ಆಕಾಂಕ್ಷೆ ಹೊಂದಿದ್ದಾರೆ. ವಿವಿಧ ರಾಜಕೀಯ ಪಕ್ಷಗಳ ವೇದಿಕೆಗಳಲ್ಲಿ ಸಕ್ರಿಯರಾಗಿರುವ ಅವರಿಗೆ ಸ್ಥಳೀಯ ಆಡಳಿತ ವ್ಯವಸ್ಥೆಯಲ್ಲಿ ಸ್ಪರ್ಧಿಸಲು ಅವಕಾಶ ದೊರೆಯುವುದು ಅಗತ್ಯವಾಗಿದೆ ಎಂದು ಅವರು ಒತ್ತಾಯಿಸಿದರು.

ಆಕ್ಷೇಪಣೆ ಸಲ್ಲಿಕೆಗೆ ಮುನ್ನ ಮರುಪರಿಶೀಲನೆಗೆ ಒತ್ತಾಯ

ತಾಲೂಕು ಪಂಚಾಯತ್‌ ಕ್ಷೇತ್ರಗಳ ಮೀಸಲಾತಿ ಪಟ್ಟಿ ಇನ್ನೂ ಕರಡು ಹಂತದಲ್ಲಿರುವುದರಿಂದ ಆಕ್ಷೇಪಣೆ ಸಲ್ಲಿಸಲು ಅವಕಾಶವಿದೆ. ಈ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಹಾಗೂ ಚುನಾವಣಾ ಆಯೋಗವು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಪುರುಷ ಅಭ್ಯರ್ಥಿಗಳಿಗೆ ಸ್ಪರ್ಧಿಸಲು ಅವಕಾಶ ಕಲ್ಪಿಸುವ ಸಾಧ್ಯತೆಗಳನ್ನು ಪರಿಶೀಲಿಸಬೇಕು. ಜಿಲ್ಲೆಯ ಕನಿಷ್ಠ ಎರಡು ಅಥವಾ ಮೂರು ಕ್ಷೇತ್ರಗಳಲ್ಲಾದರೂ ಸೂಕ್ತ ಅವಕಾಶ ದೊರೆಯುವಂತೆ ಮೀಸಲಾತಿ ಪಟ್ಟಿಯನ್ನು ಮರುಪರಿಶೀಲಿಸಬೇಕು ಎಂದು ಮಂಜುನಾಥ ಗಿಳಿಯಾರು ಆಗ್ರಹಿಸಿದರು.

ಈ ವಿಚಾರವಾಗಿ ಅನೇಕ ಕಾರ್ಯಕರ್ತರು ತಮ್ಮ ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ. ನಮ್ಮ ಬೇಡಿಕೆಯನ್ನು ಪರಿಗಣಿಸದಿದ್ದರೆ ನಿಯಮಾನುಸಾರ ಲಿಖಿತ ಆಕ್ಷೇಪಣೆ ಸಲ್ಲಿಸಲಾಗುವುದು. ಅಲ್ಲದೆ, ಈ ನೀತಿಯ ವಿರುದ್ಧ ದೊಡ್ಡ ಮಟ್ಟದ ಪ್ರತಿಭಟನಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗುವುದು ಎಂದು ಅವರು ಎಚ್ಚರಿಕೆ ನೀಡಿದರು.

Sharuk
+ posts

ಮೂಲತಃ ತೀರ್ಥಹಳ್ಳಿಯವರಾದ ಇವರು ಪ್ರಸ್ತುತ ಈದಿನ. ಕಾಮ್ ಉಡುಪಿ ಜಿಲ್ಲಾ ವರದಿಗಾರರಾಗಿ ಮತ್ತು ಕರಾವಳಿ ಮಲೆನಾಡು ಭಾಗದ ವಲಯ ಸಂಯೋಜಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. 2017 ರಿಂದ ಪತ್ರಿಕೋದ್ಯಮದಲ್ಲಿ ತೊಡಗಿಸಿಕೊಂಡ ಇವರು ದಿನ ಪತ್ರಿಕೆ, ವಾರ ಪತ್ರಿಕೆ, ನ್ಯೂಸ್ ವೆಬ್ ಪೋರ್ಟಲ್ ನಲ್ಲಿ ಕಾರ್ಯನಿರ್ವಹಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

Sharuk
Sharuk
ಮೂಲತಃ ತೀರ್ಥಹಳ್ಳಿಯವರಾದ ಇವರು ಪ್ರಸ್ತುತ ಈದಿನ. ಕಾಮ್ ಉಡುಪಿ ಜಿಲ್ಲಾ ವರದಿಗಾರರಾಗಿ ಮತ್ತು ಕರಾವಳಿ ಮಲೆನಾಡು ಭಾಗದ ವಲಯ ಸಂಯೋಜಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. 2017 ರಿಂದ ಪತ್ರಿಕೋದ್ಯಮದಲ್ಲಿ ತೊಡಗಿಸಿಕೊಂಡ ಇವರು ದಿನ ಪತ್ರಿಕೆ, ವಾರ ಪತ್ರಿಕೆ, ನ್ಯೂಸ್ ವೆಬ್ ಪೋರ್ಟಲ್ ನಲ್ಲಿ ಕಾರ್ಯನಿರ್ವಹಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಎಸ್‌ಐಆರ್ ರದ್ದತಿಗೆ ಅ.2ರಂದು ಬೃಹತ್ ಧರಣಿ; ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ರದ್ದುಗೊಳಿಸುವುದು, ಪಟ್ಟಿಯಿಂದ...

ಚಿಕ್ಕಮಗಳೂರು | ಚೇತನ್ ಗೊಡ್ಲುಮನೆ ಅವರಿಗೆ ಪಿಎಚ್‌ಡಿ ಪದವಿ ಪ್ರದಾನ 

ಗೊಡ್ಲುಮನೆ ಹೆಚ್.ಹೆಚ್. ರಮೇಶ್ ಗೌಡ ಹಾಗೂ ಹೆಚ್.ಆರ್. ಜಯಲಕ್ಷ್ಮಿ ದಂಪತಿಯ ಹಿರಿಯ...

ಬೇಲೂರು | ಡಾ. ಬಿ. ಆರ್ ಅಂಬೇಡ್ಕರ್ ಪ್ರತಿಮೆಗೆ ಪ್ರಕಾಶ್ ರಾಜ್ ಮಾಲಾರ್ಪಣೆ 

SIR ವಿರೋಧಿ ಒಕ್ಕೂಟದಿಂದ ರಾಜ್ಯ ಪ್ರವಾಸದ ಹಿನ್ನೆಲೆಯಲ್ಲಿ ಹಾಸನ ಜಿಲ್ಲೆ ಬೇಲೂರು...

ಉಡುಪಿ | ಶಾರ್ಜಾದಲ್ಲಿ ಹತ್ಯೆಗೀಡಾದ ಅಲ್ವಿನ್ ಪ್ರಕಾಶ್ ಕುಂದರ್‌ಗೆ ಹುಟ್ಟೂರಿನಲ್ಲಿ ಅಂತಿಮ ನಮನ

ಶಾರ್ಜಾದಲ್ಲಿ ಕಳೆದ ಜುಲೈನಲ್ಲಿ ನಿಗೂಢವಾಗಿ ಹತ್ಯೆಗೀಡಾದ ಕುಂದಾಪುರ ಪುರಸಭೆ ವ್ಯಾಪ್ತಿಯ ಹೊನ್ನನಕೇರಿ...