ಚಿಂತಾಮಣಿ | ಗೌನಪಲ್ಲಿ ಪಟ್ಟಣ ಪಂಚಾಯಿತಿ ಕನಸು : ಸರ್ಕಾರದ ಗಮನ ಸೆಳೆಯಲು ಬೆಳಗಾವಿವರೆಗೆ ಕಾಲ್ನಡಿಗೆ ಹೊರಟ ಅಮ್ಜದ್ ಪಾಷಾ

Date:

ರಾಜ್ಯದ ಗಡಿಭಾಗದಲ್ಲಿರುವ ದೊಡ್ಡ ಜನಸಂಖ್ಯೆ ಹಾಗೂ ಭಾರಿ ವಿಸ್ತೀರ್ಣ ಹೊಂದಿರುವ ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಗೌನಪಲ್ಲಿ ಗ್ರಾಮ ಪಂಚಾಯಿತಿಯನ್ನು ಕೂಡಲೇ ಪಟ್ಟಣ ಪಂಚಾಯಿತಿ’ಯಾಗಿ ಮೇಲ್ದರ್ಜೆಗೇರಿಸಬೇಕೆಂದು ಒತ್ತಾಯಿಸಿ ಸದರಿ ಗ್ರಾಮದ ಗ್ರಾಮಸ್ಥ ಅಮ್ಜದ್ ಪಾಷಾ ಬೆಳಗಾವಿಗೆ ಕಾಲ್ನಡಿಗೆಯಲ್ಲಿ ಒಬ್ಬಂಟಿಯಾಗಿ ಪಾದಯಾತ್ರೆ ಹಮ್ಮಿಕೊಂಡಿದ್ದಾರೆ.

- Advertisement -

ಇಂದು ಅವರು ಚಿಂತಾಮಣಿಗೆ ಆಗಮಿಸಿದ್ದು ಇಲ್ಲಿನ ಸ್ಥಳೀಯರು ಅವರಿಗೆ ಬೆಂಬಲಿಸಿ ಅವರ ಪಾದಯಾತ್ರೆ ಯಶಸ್ವಿಯಾಗಲಿ ಎಂದು ಶುಭ ಹಾರೈಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮಹಿಳೆ ಮಾಡುತ್ತಿರುವ ಬಿಟ್ಟಿ ಚಾಕರಿಗಳೇನೇನು? ಇದನ್ನೇಕೆ ಅರಿಯಲು ಮುಂದಾಗಿದೆ...

2047ರ ವೇಳೆಗೆ ಭಾರತವನ್ನು ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನಾಗಿ ಮಾಡುವ ಸರ್ಕಾರದ ಗುರಿಗೆ ಒಂದು ದೊಡ್ಡ ಅಡ್ಡಿ ಎದುರಾಗಿದೆ. ಅದೇನೆಂದರೆ; ಸಾಕಷ್ಟು ಸಂಖ್ಯೆಯ ಮಹಿಳೆಯರನ್ನು ಉದ್ಯೋಗ ಕ್ಷೇತ್ರಕ್ಕೆ ತರುವುದು. ವಿಶ್ವಬ್ಯಾಂಕ್ ಪ್ರಕಾರ, 2047ರ ವೇಳೆಗೆ...

ಭದ್ರತೆಯ ಹೆಸರಿನಲ್ಲಿ ಮಾಂಸದಂಗಡಿಗಳಿಗೆ ಬೀಗ: ಸರ್ಕಾರದ ಈ ನಿರ್ಧಾರದ...

ಈ ಬೆಳವಣಿಗೆ ಕಾಂಗ್ರೆಸ್ ಸರ್ಕಾರದ ಆಡಳಿತಾತ್ಮಕ ಹೊಣೆಗಾರಿಕೆಯನ್ನೂ ಮುನ್ನೆಲೆಗೆ ತಂದಿದೆ. ಪ್ರಧಾನಿಯ ಭೇಟಿಯ ಹಿನ್ನೆಲೆಯಲ್ಲಿ ಹೆಲಿಕಾಪ್ಟರ್‌ಗಳ ಆಗಮನ ಮತ್ತು ನಿರ್ಗಮನದ ಭದ್ರತೆಯನ್ನು ನಿರ್ಬಂಧಕ್ಕೆ ಕಾರಣವೆಂದು ಸಮರ್ಥಿಸಲಾಗುತ್ತಿದ್ದರೆ, ಅದಕ್ಕೂ ಸಮಗ್ರ ವಿವರಣೆ ಬೇಕಾಗುತ್ತದೆ. ಪ್ರಧಾನಿ...

ನಿಜಕ್ಕೂ ಭಾರತದ ಬಡತನ 16%ಗೆ ಇಳಿದಿದೆಯೇ? ವಾಸ್ತವ ಹೇಳುವುದೇನು?

ವಿಶ್ವಬ್ಯಾಂಕ್ ವರದಿ ಪ್ರಕಾರ, ಭಾರತದಲ್ಲಿ ಬಡತನ 16.1%ಗೆ ಮತ್ತು ತೀವ್ರ ಬಡತನ 2.6%ಗೆ ಇಳಿದಿದೆ. ಇದೇ ಅಂಕಿಅಂಶವನ್ನು ಬಳಸಿಕೊಂಡು ತಮ್ಮ ಸಾಧನೆ ಎಂಬಂತೆ ಕೇಂದ್ರ ಸರ್ಕಾರ ಸಂಭ್ರಮಿಸುತ್ತಿದೆ. ಆದರೆ, ದೇಶದ ಸುಮಾರು 80...

ಅಮ್ಜದ್ ಖಾನ್ ಮಾಧ್ಯಮದವರೊಂದಿಗೆ ಮಾತನಾಡಿ ಗೌನಪಲ್ಲಿ ಗ್ರಾಮ ಪಂಚಾಯಿತಿ ಅತ್ಯಂತ ಹೆಚ್ಚಿನ ಜನಸಂಖ್ಯೆಯನ್ನು ಹೊಂದಿದ್ದರೂ ಸಹ ಅದಕ್ಕೆ ತಕ್ಕ ಅನುದಾನ ಸಿಗುತ್ತಿಲ್ಲ ಎಂದಿದ್ದಾರೆ.ಇದರಿಂದಾಗಿ ಗ್ರಾಮದಲ್ಲಿ ಮೂಲಭೂತ ಸೌಕರ್ಯಗಳನ್ನು ಕಲ್ಪಿಸುವುದು ಕಷ್ಟವಾಗುತ್ತಿದ್ದು, ಸಾರ್ವಜನಿಕರು ಹಲವು ವರ್ಷಗಳಿಂದ ತೀವ್ರ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ ಎಂದು ಅಳಲು ತೋಡಿಕೊಂಡಿದ್ದಾರೆ.

​ಪಂಚಾಯಿತಿಯನ್ನು ಪಟ್ಟಣ ಪಂಚಾಯಿತಿಯನ್ನಾಗಿ ಪರಿವರ್ತಿಸಲು ವಿವಿಧ ಕಾರಣಗಳಿಂದ ಹಿನ್ನಡೆಯಾಗುತ್ತಿದ್ದು, ರಾಜ್ಯದ ಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ್ ಹಾಗೂ ರಾಜ್ಯ ಸರ್ಕಾರದ ಅವಧಿಯಲ್ಲಾದರೂ ಈ ಸಮಸ್ಯೆಗೆ ಪರಿಹಾರ ಸಿಗಬೇಕು ಎಂಬುದು ಗ್ರಾಮಸ್ಥರ ಬಹುದಿನಗಳ ಕನಸಾಗಿದೆ.ಸರ್ಕಾರದ ಗಮನ ಸೆಳೆಯಲು ಮತ್ತು ಸರ್ಕಾರದ ಕರುಣೆ ಹಾಗೂ ಸ್ಪಂದನೆಗಾಗಿ ಈ ಪಾದಯಾತ್ರೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಇದನ್ನು ಓದಿದ್ದೀರಾ..?ಕೋಲಾರ | ಕಾಂಗ್ರೆಸ್ಸಿಗರನ್ನು ತುಂಡು ಮಾಡಿ ಅರಬ್ಬಿ ಸಮುದ್ರಕ್ಕೆ ಎಸೆಯುವ ಹೇಳಿಕೆ: ನಗರ ಪೊಲೀಸ್ ಠಾಣೆಯಲ್ಲಿ 3 ದೂರು ಸಲ್ಲಿಕೆ

​ಚಿಂತಾಮಣಿ ಪಟ್ಟಣಕ್ಕೆ ಪಾದಯಾತ್ರೆ ತಲುಪಿದ ಸಂದರ್ಭದಲ್ಲಿ,ಸ್ಥಳೀಯ ಮುಖಂಡರಾದ ಮಾಜಿ ನಗರಸಭಾ ಸದಸ್ಯ ಅಗ್ರಹಾರ ಮುರಳಿ ಮತ್ತು ಯುವ ವಕೀಲ ಅಯೂಬ್ ಖಾನ್ ಸೇರಿದಂತೆ ಚಿಂತಾಮಣಿಯ ಯುವಕರು ಹಾಗೂ ಸ್ಥಳೀಯರು ಈ ಹೋರಾಟಕ್ಕೆ ತಮ್ಮ ಸಂಪೂರ್ಣ ಬೆಂಬಲವನ್ನು ಸೂಚಿಸಿದ್ದಾರೆ.ಗ್ರಾಮಸ್ಥರ ಈ ನ್ಯಾಯಯುತ ಹೋರಾಟಕ್ಕೆ ಭಗವಂತ ಯಶಸ್ಸು ನೀಡಲಿ ಹಾಗೂ ಸರ್ಕಾರವು ಕೂಡಲೇ ಸ್ಪಂದಿಸಿ ಗೌನಪಲ್ಲಿಯನ್ನು ಪಟ್ಟಣ ಪಂಚಾಯಿತಿಯನ್ನಾಗಿ ಘೋಷಿಸಲಿ ಎಂದು ಕಳಕಳಿಯ ಮನವಿ ಮಾಡಿದ್ದಾರೆ.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾವೇರಿ | ಕಬ್ಬಿನ ದರಕ್ಕಾಗಿ ಸಾಮೂಹಿಕ ನಾಯಕತ್ವದಲ್ಲಿ ಹೋರಾಟ; ನ.18ರಂದು ಸಚಿವ ರುದ್ರಪ್ಪ ಲಮಾಣಿ ಮನೆ ಮುತ್ತಿಗೆ

"ಕಬ್ಬಿನ ದರಕ್ಕಾಗಿ ಎಲ್ಲ ರೈತ ಸಂಘಟನೆಗಳು ಹೋರಾಟ ಮಾಡುತ್ತಿದ್ದವು. ಆದರೆ ವೇದಿಕೆ...

ಉಡುಪಿ | ಗ್ಯಾರಂಟಿಗಳ ಹೆಸರಿನಲ್ಲಿ ಜನರ ಬದುಕು ಸಂಕಷ್ಟಕ್ಕೆ: ಕಾಂಗ್ರೆಸ್ ವಿರುದ್ಧ ಎಚ್‌ಡಿಕೆ ಕಿಡಿ

ಐದು ಗ್ಯಾರಂಟಿಗಳ ಹೆಸರಿನಲ್ಲಿ ರಾಜ್ಯದ ಕಾಂಗ್ರೆಸ್ ಸರಕಾರ ಅಭಿವೃದ್ಧಿ ಕಾರ್ಯಗಳನ್ನು ಸ್ಥಗಿತಗೊಳಿಸಿ...

ಉಡುಪಿ | ಕಂಪೆಟ್ಟು–ಕನ್ಯಾಲು ಸೇತುವೆ ನಿರ್ಮಾಣಕ್ಕೆ ಅರಣ್ಯ ಹಕ್ಕು ಕಾಯ್ದೆ -2006ರ ಸೆಕ್ಷನ್ 3(2)ರಡಿ ಅನುಮತಿ ನೀಡಲು ಮನವಿ

ನೂರಾಳ್ ಬೆಟ್ಟು ಗ್ರಾಮದ ಕನ್ಯಾಲು ಹಾಡಿಗೆ ಸಂಪರ್ಕ ಕಲ್ಪಿಸುವ ಕಂಪೆಟ್ಟು–ಕನ್ಯಾಲು ಸೇತುವೆ...

ಉಡುಪಿ | ಕಟ್ಟಡ ಕಾರ್ಮಿಕರ ಬೃಹತ್ ಪ್ರತಿಭಟನೆ: ಮರಳುಗಾರಿಕೆ ಆರಂಭಕ್ಕೆ ನ.25ರ ಗಡುವು; ನ.26ರಿಂದ ಅನಿರ್ದಿಷ್ಟಾವಧಿ ಮುಷ್ಕರದ ಎಚ್ಚರಿಕೆ

ನಾಲ್ಕು ಕಾರ್ಮಿಕ ಸಂಹಿತೆಗಳನ್ನು ರದ್ದುಗೊಳಿಸುವುದು, ಕಟ್ಟಡ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿನ ಕಿಟ್...