ಚಿಕ್ಕಬಳ್ಳಾಪುರ | ರಾಷ್ಟ್ರೀಯ ಹೆದ್ದಾರಿ-44 ರ ದೊಡ್ಡಪೈಲಗುರ್ಕಿ ಬಳಿ ಭೀಕರ ರಸ್ತೆ ಅಪಘಾತ

Date:

\ಚಿಕ್ಕಬಳ್ಳಾಪುರ: ಬೆಂಗಳೂರು – ಹೈದರಾಬಾದ್ ರಾಷ್ಟ್ರೀಯ ಹೆದ್ದಾರಿ-44 ರ ಚಿಕ್ಕಬಳ್ಳಾಪುರ ತಾಲೂಕಿನ ದೊಡ್ಡಪೈಲಗುರ್ಕಿ ಬಳಿ ಮುಂಜಾನೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಪ್ರಯಾಣಿಕನ ಮೃತದೇಹವನ್ನ ಬಸ್‌ನ ಕಿಟಕಿ ಮೂಲಕ ಪೊಲೀಸರು ಹೊರತೆಗೆದ ದೃಶ್ಯ ಮನಕಲಕುವಂತಿತ್ತು. ಅಪಘಾತದ ಮಾಹಿತಿ ತಿಳಿಯುತ್ತಿದ್ದಂತೆ ಪೇರೆಸಂದ್ರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಅಪಘಾತಕ್ಕೀಡಾಗಿದ್ದ ಬಸ್ ಹಾಗೂ ಲಾರಿಯನ್ನ ತೆರವುಗೊಳಿಸಿ ವಾಹನಗಳ ಸಂಚಾರಕ್ಕೆ ಅನುವು ಮಾಡಿಕೊಟ್ಟಿದ್ದಾರೆ.

ಕರ್ನೂಲಿನಿಂದ ಬೆಂಗಳೂರಿಗೆ ಬರುತ್ತಿದ್ದ ಬಸ್ ಮುಂದೆ ಸಾಗುತ್ತಿದ್ದ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಆಂಧ್ರಪ್ರದೇಶ ರಸ್ತೆ ಸಾರಿಗೆ ಸಂಸ್ಥೆಯ ಬಸ್ ಚಾಲಕ ಲಕ್ಷ್ಮಣ್ (52) ಹಾಗೂ ಪ್ರಯಾಣಿಕ ಬೆಂಗಳೂರಿನ ಕಲ್ಯಾಣ ನಗರದ ನಿವಾಸಿ ಉಮಾಕಾಂತ್ ರಾವ್ (77) ಪ್ರಯಾಣಿಕ ಸೇರಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಇದನ್ನು ಓದಿದ್ದೀರಾ..? ಚಿಕ್ಕಬಳ್ಳಾಪುರ | ಸತ್ಯ ಸಾಯಿ ಗ್ರಾಮದಲ್ಲಿ ಸಂಭ್ರಮ: ವಾರ್ಷಿಕ ಕ್ರೀಡಾ ಸಾಂಸ್ಕೃತಿಕ ಉತ್ಸವ – ಈ ದಿನ.ಕಾಮ್

ಹಲವರು ಗಾಯಗೊಂಡಿದ್ದು ಗಾಯಾಳುಗಳಿಗೆ ಚಿಕ್ಕಬಳ್ಳಾಪುರ ಜಿಲ್ಲಾ ಆಸ್ಪತ್ರೆ ಸೇರಿದಂತೆ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಡಿಕ್ಕಿಯ ರಭಸಕ್ಕೆ ಬಸ್‌ನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಚಾಲಕ ಸೀಟಿನಲ್ಲೇ ಸಿಲುಕಿಕೊಂಡಿದ್ದರು. ಸ್ಥಳಕ್ಕಾಗಮಿಸಿದ ಪೊಲೀಸರು ಹಾಗೂ ರಕ್ಷಣಾ ಸಿಬ್ಬಂದಿ ಕ್ರೇನ್ ಸಹಾಯದಿಂದ ಬಸ್ ಮುಂಭಾಗವನ್ನ ಎಳೆದು ಚಾಲಕನ ಮೃತದೇಹವನ್ನ ಹೊರತೆಗೆದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಶಾರ್ಜಾದಲ್ಲಿ ಹತ್ಯೆಗೀಡಾದ ಅಲ್ವಿನ್ ಪ್ರಕಾಶ್ ಕುಂದರ್‌ಗೆ ಹುಟ್ಟೂರಿನಲ್ಲಿ ಅಂತಿಮ ನಮನ

ಶಾರ್ಜಾದಲ್ಲಿ ಕಳೆದ ಜುಲೈನಲ್ಲಿ ನಿಗೂಢವಾಗಿ ಹತ್ಯೆಗೀಡಾದ ಕುಂದಾಪುರ ಪುರಸಭೆ ವ್ಯಾಪ್ತಿಯ ಹೊನ್ನನಕೇರಿ...

ಹಾಸನ |‘ನಾಸ್ತಿಕತೆ ಎಂದರೆ ಧರ್ಮವಿರೋಧವಲ್ಲ’; ಸಿಪಿಐಎಂ ಧರ್ಮೇಶ್ 

ಹಾಸನ ಜಿಲ್ಲೆಯ ಪತ್ರಿಕಾಗೋಷ್ಠಿಯಲ್ಲಿ ಪತ್ರಕರ್ತರೊಬ್ಬರು ‘ಆಸ್ತಿಕತೆ ಮತ್ತು ನಾಸ್ತಿಕತೆ ವೈಯಕ್ತಿಕ ವಿಚಾರವೇ...

ಚಿಕ್ಕಮಗಳೂರು | ಕಸ್ತೂರಿರಂಗನ್ ವರದಿ: ವಿರೋಧಿಸಿ ಬೃಹತ್ ಪಾದಯಾತ್ರೆ 

ಮಲೆನಾಡಿನ ಜನರ ಪಾಲಿಗೆ 'ಮರಣಶಾಸನ'ವಾಗಿ ಪರಿಣಮಿಸಿರುವ ಅರಣ್ಯ ಕಾಯ್ದೆಗಳಲ್ಲೊಂದಾದ ಕಸ್ತೂರಿ ರಂಗನ್...

ಬಾಗಲಕೋಟೆ | ಸವಿತಾ ಸಮಾಜ ಅಭಿವೃದ್ಧಿ ನಿಗಮದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ

ಬಾಗಲಕೋಟೆಯ ಸವಿತಾ ಸಮಾಜ ಹಾಗೂ ಅದರ ಉಪಜಾತಿಗಳಿಗೆ ಸೇರಿದ ನಿರುದ್ಯೋಗಿಗಳು ಮತ್ತು...