ಜಮ್ಮು ಕಾಶ್ಮೀರದಲ್ಲಿ ಭಯೋತ್ಪಾದಕರ ದಾಳಿ – 3 ಸಿಆರ್‌ಫಿಎಫ್‌ ಯೋಧರಿಗೆ ಗಾಯ

Date:

ಭಯೋತ್ಪಾದಕರ ದಾಳಿಗೆ ಮೂರು ಸಿಆರ್‌ಫಿಎಫ್‌ ಯೋಧರು ಗಾಯಗೊಂಡಿರುವ ಘಟನೆ ಜಮ್ಮು ಕಾಶ್ಮೀರದ ಕುಲ್ಗಾಮ್‌ ಜಿಲ್ಲೆಯಲ್ಲಿ ನಡೆದಿದೆ.

- Advertisement -


ಬುಧವಾರ ಮಧ್ಯಾಹ್ನ 2.15 ಕ್ಕೆ ಜಿಲ್ಲೆಯ ಭದ್ರತಾ ತಪಾಸಣೆ ಕೇಂದ್ರದಲ್ಲಿ ಭದ್ರತಾ ಸಿಬ್ಬಂದಿಗಳು ಕರ್ತವ್ಯ ನಿರ್ವಹಿಸುತ್ತಿದ್ದ ಸಮಯದಲ್ಲಿ ಸ್ಥಳಕ್ಕೆ ಮೋಟಾರ್‌ ಬೈಕ್‌ನಲ್ಲಿ ಬಂದ ಇಬ್ಬರು ಭಯೋತ್ಪಾದಕರು ಗುಂಡಿನ ದಾಳಿ ನಡೆಸಿ ಪರಾರಿಯಾದರು ಎನ್ನಲಾಗಿದೆ. ಘಟನೆಯಲ್ಲಿ ಸಿಆರ್‌ಫಿಎಫ್‌ನ 46ನೇ ಬೆಟಾಲಿಯನ್‌ಗೆ ಸೇರಿದ ಇಬ್ಬರು ಭದ್ರತಾ ಸಿಬ್ಬಂದಿ ಗಾಯಗೊಂಡಿದ್ದು, ಅವರನ್ನು ತಕ್ಷಣಕ್ಕೆ ಚಿಕಿತ್ಸೆಗಾಗಿ ದಕ್ಷಿಣ ಕಾಶ್ಮೀರದ ಅನಂತ್‌ನಾಗ್‌ ಜಿಲ್ಲೆಯ ಆಸ್ಪತ್ರೆಗೆ ಸಾಗಿಸಲಾಗಿದೆ. ಯಾವುದೇ ಪ್ರಾಣ ಹಾನಿಯಾಗಿಲ್ಲ ಎಂದು ವರದಿಯಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊರಗೆ ‘ರಾಮ’-ಒಳಗೆ ‘ನಾಥೂರಾಮ’: ಗಾಂಧೀಜಿಯವರ ತಾತ್ವಿಕತೆಯ ಮುಂದೆ ಬಲಪಂಥೀಯ...

ಗಾಂಧೀಜಿಯವರನ್ನು ವಿರೋಧಿಸುವ ರಾಜಕೀಯ ಪ್ರಯತ್ನಗಳು ಅವರ ವ್ಯಕ್ತಿತ್ವವನ್ನು ಕುಗ್ಗಿಸುವ ಬದಲು, ಅವರ ಆದರ್ಶಗಳ ಪ್ರಸ್ತುತತೆಯನ್ನು ಮತ್ತಷ್ಟು ಮುನ್ನೆಲೆಗೆ ತರುತ್ತಿವೆ. ಸತ್ಯ, ಅಹಿಂಸೆ, ಮಾನವೀಯತೆ, ಸಾಮಾಜಿಕ ಸಮಾನತೆ ಮತ್ತು ಗ್ರಾಮ ಸ್ವರಾಜ್ಯದ ಪರಿಕಲ್ಪನೆಗಳು ಇಂದಿಗೂ...

ಎಲ್ಲವನ್ನೂ ಕಣ್ಣುಮುಚ್ಚಿ ಪಾಲಿಸುವ ವಿಭೀಷಣನೆ ಈ ಸಮಾಜಕ್ಕೆ ಸೂಕ್ತ,...

ರಾಮಾಯಣವನ್ನು ಗೌರವಿಸುವ ನಾವು ರಾವಣನ ದೃಷ್ಟಿಕೋನದಿಂದಲೂ ಕಥೆಯನ್ನು ಓದಬೇಕು. ಈ ಕಾಲಕ್ಕೆ ರಿಟೆಲ್ಲಿಂಗ್ಸ್, ಕೌಂಟರ್ ನರೇಟಿವ್ಸ್ ಹಾಗೂ ಹ್ಯೂಮನೈಸಿಂಗ್ ಸ್ಟೋರಿಸ್ ಅಗತ್ಯತೆ ಬಹಳವಾಗಿದೆ. ಶಿವ ನಮ್ಮ ಅಚ್ಚುಮೆಚ್ಚಿನ ದೇವನಾಗಿದ್ದ. ಅವನನ್ನ ನಾವು ಅತಿಯಾಗಿ ಪ್ರೀತಿಸುತಿದ್ದೆವು....

ರಾಷ್ಟ್ರೀಯ ಶಿಕ್ಷಣ ದಿನ | ಶಿಕ್ಷಣ ಕ್ರಾಂತಿಯ ಹರಿಕಾರ-ಮೌಲಾನ...

ಮೌಲಾನಾ ಅಬುಲ್ ಕಲಾಂ ಆಜಾದ್ ಇದು ಅಪರೂಪದ ರಾಷ್ಟ್ರೀಯ ವ್ಯಕ್ತಿತ್ವ. ಅವರ ಹೆಸರು ಆಜಾದ್. ಅವರ ಕನಸು ಸ್ವತಂತ್ರ ಭಾರತ. ಅವರ ಹೋರಾಟ ರಾಷ್ಟ್ರೀಯ ಏಕತೆ. ಅವರ ನಂಬಿಕೆ ಶಿಕ್ಷಣ. ಅವರ ವೈಚಾರಿಕ...


ಇತ್ತೀಚೆಗೆ ಜಮ್ಮು ಕಾಶ್ಮೀರದಲ್ಲಿ ಭಯೋತ್ಪಾದಕ ಚಟುವಟಿಕೆ ಅಥವಾ ಒಳನುಸುಳುವಿಕೆ ಕಡಿಮೆಯಾಗಿತ್ತು ಎಂದು ಹೇಳಲಾಗಿತ್ತು. ಈ ಘಟನೆಯ ನಂತರ ಕಾಶ್ಮೀರದಲ್ಲಿ ಮತ್ತೆ ಭಯೋತ್ಪಾದನೆ ಚಟುವಟಿಕೆ ಆರಂಭವಾಗಿರುವುದರ ಬಗ್ಗೆ ಅನುಮಾನ ವ್ಯಕ್ತವಾಗಿದೆ. ಇದೇ ವರ್ಷ ಜುಲೈ 31 ರಂದು ಕುಲ್ಗಾಮ್‌ನಲ್ಲಿ ಇಬ್ಬರು ವಲಸೆ ಕಾರ್ಮಿಕರನ್ನು ಮತ್ತು ಜುಲೈ 22 ರಂದು ನೆರೆಯ ಅನಂತನಾಗ್‌ ಜಿಲ್ಲೆಯಲ್ಲಿ ಪೊಲೀಸ್‌ ಸಿಬ್ಬಂದಿಯೊಬ್ಬರನ್ನು ಹತ್ಯೆ ಮಾಡಲಾಗಿತ್ತು. ಇವುಗಳ ನಂತರ ನಡೆದ ಮೊದಲ ಭಯೋತ್ಪಾದಕ ದಾಳಿ ಇದಾಗಿದೆ.


ಘಟನೆಯ ಬಗ್ಗೆ ತನಿಖೆಯು ನಡೆಯುತ್ತಿದ್ದು, ಉಗ್ರರಿಗಾಗಿ ತೀವ್ರ ತಪಾಸಣೆ ನಡೆಯುತ್ತಿದೆ. ಯಾವ ಭಯೋತ್ಪಾದಕ ಸಂಘಟನೆಯಿಂದ ಈ ಕೃತ್ಯ ನಡೆದಿದೆ ಎನ್ನುವುದು ಇನ್ನೂ ತಿಳಿದುಬಂದಿಲ್ಲ ಎಂದು ಉನ್ನತಾಧಿಕಾರಿಗಳು ತಿಳಿಸಿದ್ದಾರೆ.

+ posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ‘ನವೋನ್ಮೇಶ್ 2026’: ಕೆನರಾ ವಿಕಾಸ್ ಪಿಯು ಕಾಲೇಜಿಗೆ ಸಮಗ್ರ ಚಾಂಪಿಯನ್ ಪ್ರಶಸ್ತಿ

ಮೂಡ್ಲಕಟ್ಟೆಯ ಐಎಂಜೆ ಶಿಕ್ಷಣ ಸಂಸ್ಥೆಗಳ ಆವರಣದಲ್ಲಿ ಪಿಯುಸಿ ವಿದ್ಯಾರ್ಥಿಗಳಿಗಾಗಿ ಆಯೋಜಿಸಲಾದ ರಾಜ್ಯಮಟ್ಟದ...

ಕರ್ನಾಟಕದ ಅಂತಿಮ ಮತದಾರರ ಪಟ್ಟಿ ಪ್ರಕಟ; 99.32 ಲಕ್ಷ ಹೆಸರುಗಳು ಔಟ್‌!

ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಬಳಿಕ ಕರ್ನಾಟಕದ ಅಂತಿಮ ಮತದಾರರ...

ಶಿಕ್ಷಣ, ಸಮಾನತೆ ಮತ್ತು ಸಾಮಾಜಿಕ ನ್ಯಾಯಕ್ಕೆ ಸರ್ಕಾರ ಬದ್ಧ: ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ

ಶಿಕ್ಷಣ, ಸಮಾನತೆ ಮತ್ತು ಸಾಮಾಜಿಕ ನ್ಯಾಯದ ಮೂಲಕ ಪ್ರಗತಿಶೀಲ ಸಮಾಜ ನಿರ್ಮಾಣಕ್ಕೆ...