ದಾವಣಗೆರೆ | ಜಿಲ್ಲಾಢಳಿತದಿಂದ ಮತದಾನ ಜಾಗೃತಿ ಅಭಿಯಾನದಡಿ ರಂಗೋಲಿ ಸ್ಪರ್ಧೆ

Date:

ಚುನಾವಣಾ ಆಯೋಗ, ಜಿಲ್ಲಾ ಪಂಚಾಯತ್ ದಾವಣಗೆರೆ ಹಾಗೂ ಜಿಲ್ಲಾಡಳಿತದಿಂದ ಇಂದು ಉಪವಿಭಾಗಾಧಿಕಾರಿಗಳ ಕಛೇರಿ ಹಿಂಬದಿಯಲ್ಲಿ ದಾವಣಗೆರೆ ರೈಲ್ವೇ ನಿಲ್ದಾಣದ ಆವರಣದಲ್ಲಿ ಮತದಾನ ಜಾಗೃತಿ ಅಭಿಯಾನ ಅಂಗವಾಗಿ ರಂಗೋಲಿ ಸ್ಪರ್ಧೆ ಆಯೋಜಿಸಲಾಗಿತ್ತು.

- Advertisement -

ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಕರ್ನಾಟಕ ಚುನಾವಣಾ ಆಯೋಗದ ಚುನಾವಣಾಧಿಕಾರಿ ವಸ್ತ್ರದ್ ಮಾತನಾಡಿ, “ಚುನಾವಣೆ ತಯಾರಿ ಯಶಸ್ವಿಯಾಗಿ ನಡೆದಿದೆ. ಸಾರ್ವಜನಿಕರು ಮತದಾನದ ಮೂಲಕ ತಮ್ಮ ಹಕ್ಕನ್ನು ಚಲಾಯಿಸಬೇಕು. ಚುನಾವಣಾ ಆಯೋಗ ಕೇಳುವ ಹನ್ನೊಂದು ದಾಖಲೆಗಳ ಪೈಕಿ ಒಂದನ್ನು ಹೊಂದಿರಬೇಕು. ನಿಮ್ಮ ಮತಗಟ್ಟೆಗಳಲ್ಲಿ ಹೆಸರನ್ನು ಈಗಲೇ ಪರಿಶೀಲಿಸಿಕೊಳ್ಳಿ” ಎಂದು ಸಲಹೆ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...
1004023843

ಈ ವೇಳೆ ಮಾತನಾಡಿದ ಜಿಲ್ಲಾಧಿಕಾರಿ ಜಿಎಂ ಗಂಗಾಧರಸ್ವಾಮಿ “ಜಿಲ್ಲೆಯಲ್ಲಿ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಮತದಾನಕ್ಕೆ ಸೂಕ್ತ ವ್ಯವಸ್ಥೆ ಮಾಡಲಾಗಿದೆ. ಅತಿ ಸೂಕ್ಷ್ಮ ಮತಗಟ್ಟೆಗಳು ಸೇರಿದಂತೆ ಎಲ್ಲ ಮತಗಟ್ಟೆಗಳಿಗೆ ಪೊಲೀಸ್ ಇಲಾಖೆ ಸೂಕ್ತ ಬಂದೋಬಸ್ತ್ ಮಾಡಿದೆ. ಕೆಲವು ಅಕ್ರಮ ಹಣ ಸಾಗಣೆ, ಮದ್ಯ ಸಾಗಣೆ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಅಕ್ರಮ ಹಣ ಮತ್ತು ಮದ್ಯ ತಡೆಗಟ್ಟಲು ಕಠಿಣ ಕ್ರಮ ಕೈಗೊಳ್ಳಲಾಗಿದೆ. ಮತದಾರರು ತಮ್ಮ ಮತಗಟ್ಟೆಯನ್ನು ಈಗಲೇ ಪರಿಶೀಲಿಸಿಕೊಂಡು ಏಪ್ರಿಲ್ 9ರಂದು ಉಪಚುನಾವಣೆಯಲ್ಲಿ ತಪ್ಪದೆ ಮತದಾನ ಮಾಡಬೇಕು” ಎಂದು ಮನವಿ ಮಾಡಿದರು.

1004023842

ಕಾರ್ಯಕ್ರಮದಲ್ಲಿ ರಂಗೋಲಿ ಸ್ಪರ್ಧೆಯಲ್ಲಿ ಬಹುಮಾನ ಪಡೆದ ರೂಪರಾಣಿ, ಚೈತ್ರ, ಸುರೇಖಾ ಅವರಿಗೆ ಪ್ರಶಸ್ತಿ ವಿತರಣೆ ಮಾಡಲಾಯಿತು. ಮಹಿಳೆಯರಿಂದ ಆವರಣದಲ್ಲಿ ಮತದಾನ ಜಾಗೃತಿಯ ಉತ್ತಮ ರಂಗೋಲಿಗಳು ಮೂಡಿ ಬಂದಿದ್ದವು. “ಮತದಾನ ನಮ್ಮ ಹಕ್ಕು, ದೇಶಕ್ಕಾಗಿ ಮತ ಚಲಾಯಿಸೋಣ, ನನ್ನ ಮತ ನನ್ನ ಹಕ್ಕು” ಸೇರಿದಂತೆ “My Vote is not for Sale” “ನನ್ನ ಮತ ಮಾರಾಟಕ್ಕಿಲ್ಲ” ಎನ್ನುವ ಆಕರ್ಷಕ ಬರಹಗಳು ಕಂಡುಬಂದವು.

1004023845

ಈ ಸುದ್ದಿ ಓದಿದ್ದೀರಾ ? http://ದಾವಣಗೆರೆ | ಗ್ಯಾರೆಂಟಿಗಳು ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗೆ ಗೆಲುವು ತೆರೆದಿವೆ: ಸಿಎಂ ಸಿದ್ದರಾಮಯ್ಯ

ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಗಿತ್ತೆ ವಿಠ್ಠಲ ಮಾಧವರಾವ್, ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಮಮತಾ ಹೊಸಗೌಡರ್, ಹನುಮನಾಯ್ಕ, ಜಿಲ್ಲಾ ವಾರ್ತಾಧಿಕಾರಿ ಮಾರುತಿ ಸೇರಿದಂತೆ ನೂರಾರು ಮಹಿಳೆಯರು, ಅಧಿಕಾರಿಗಳು ಉಪಸ್ಥಿತರಿದ್ದರು.

IMG 20250205 WA0034
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಗಲಕೋಟೆ | ಸವಿತಾ ಸಮಾಜ ಅಭಿವೃದ್ಧಿ ನಿಗಮದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ

ಬಾಗಲಕೋಟೆಯ ಸವಿತಾ ಸಮಾಜ ಹಾಗೂ ಅದರ ಉಪಜಾತಿಗಳಿಗೆ ಸೇರಿದ ನಿರುದ್ಯೋಗಿಗಳು ಮತ್ತು...

ಕೊಲ್ಹಾರ | ಮೂರು ದಶಕವಾದರೂ ಮುಳುಗಡೆ ಸಂತ್ರಸ್ತರಿಗೆ ಸಿಗದ ಹಕ್ಕುಪತ್ರ

1996ರಲ್ಲಿ ಕೃಷ್ಣ ಮೇಲ್ದಂಡೆ ಯೋಜನೆಗಾಗಿ ಭೂಮಿ ಕಳೆದುಕೊಂಡ ವಿಜಯಪುರ ಜಿಲ್ಲೆಯ ಕೊಲ್ಹಾರದ...

ಚಿಕ್ಕಮಗಳೂರು | ಬಣಕಲ್; ಸ.ಮಾ.ಹಿ ಪ್ರಾ. ಶಾಲೆಯಲ್ಲಿ ಕಾನೂನು ಅರಿವು ಕಾರ್ಯಕ್ರಮ 

ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಬಣಕಲ್ ಹೋಬಳಿಯ ಸರ್ಕಾರಿ ಮಾದರಿ ಹಿರಿಯ...

ಬರಕ್ಕೆ ಮಾನದಂಡ ಮುಖ್ಯವೋ, ಬದುಕು ಮುಖ್ಯವೋ?: ಸಿ. ಬೈರೇಗೌಡರ ಪ್ರಶ್ನೆ ಇಂದಿಗೂ ಪ್ರಸ್ತುತ

ಬರ ಮೊದಲು ರೈತನ ಹೊಲದಲ್ಲಿ ಕಾಣಿಸುತ್ತದೆ. ನಂತರ ಅವನ ಸಾಲ, ಮನೆಯ...