ಮನೆಯಲ್ಲಿ ವಿದ್ಯುತ್ ಸ್ಪರ್ಶಿಸಿ ಕಾರ್ಮಿಕ ಮಹಿಳೆಯೊಬ್ಬರು ಮೃತಪಟ್ಟ ಘಟನೆ ಭಾಲ್ಕಿ ತಾಲೂಕಿನ ಮದಕಟ್ಟಿ ಗ್ರಾಮದಲ್ಲಿ ಸೋಮವಾರ ಸಂಜೆ ನಡೆದಿದೆ.
ಮೃತರನ್ನು ಸವಿತಾ ಅಂಬಾದಾಸ ಮಾನೆ (35) ಎಂದು ಗುರುತಿಸಲಾಗಿದೆ. ಮೃತರಿಗೆ ಪತಿ ಹಾಗೂ ಇಬ್ಬರು ಪುತ್ರಿ ಪುತ್ರರಿದ್ದಾರೆ.
ಮೃತ ಸವಿತಾ ಪತಿಯೊಂದಿಗೆ ಗ್ರಾಮದಲ್ಲಿ ವಿಬಿ-ಜಿ ರಾಮ್ ಜಿ ಯೋಜನೆಯಡಿ ನಡೆಯುತ್ತಿರುವ ಕೂಲಿ ಕೆಲಸಕ್ಕೆ ತೆರಳಿದ್ದರು. ಸಂಜೆ 4 ಗಂಟೆ ಸುಮಾರಿಗೆ ಮನೆಗೆ ವಾಪಸ್ ಬಂದಿದ್ದರು. ಈ ವೇಳೆ ಮಳೆ ಸುರಿಯುತ್ತಿದ್ದ ಹಿನ್ನೆಲೆಯಲ್ಲಿ ಮನೆಯ ಬಾಗಿಲಿನ ಕೀಲಿ ತೆಗೆಯಲು ಮುಂದಾದಾಗ ವಿದ್ಯುತ್ ಸ್ಪರ್ಶಿಸಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ಸ್ಥಳೀಯರು ತಿಳಿಸಿದ್ದಾರೆ.
ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಭಾಲ್ಕಿ ತಾಲೂಕು ಸಾರ್ವಜನಿಕ ಆಸ್ಪತ್ರೆಗೆ ಕೊಂಡೊಯ್ಯಲಾಗಿದೆ. ಈ ಘಟನೆ ಖಟಕ್ ಚಿಂಚೋಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
This video cannot be played in your browser. Open the video directly
ಇದನ್ನೂ ಓದಿ : ಬೀದರ್ | DHO, THO ಅಮಾನತು ರದ್ದತಿಗೆ ಆಗ್ರಹ





