ಬೆಳಗಾವಿ | ಅಂಬೇಡ್ಕ‌ರ್ ನಗರದ ಮೂಲಸೌಕರ್ಯ, ಶಾಲೆ ಅಭಿವೃದ್ಧಿಗೆ ಶಾಸಕ ವಿಶ್ವಾಸ ವೈದ್ಯರಿಗೆ ಮನವಿ

Date:

ಬೆಳಗಾವಿ ಜಿಲ್ಲೆಯ ಯರಗಟ್ಟಿ ಪಟ್ಟಣದ ಅಂಬೇಡ್ಕ‌ರ್ ನಗರದ ಮೂಲಸೌಕರ್ಯ ಹಾಗೂ ಸರ್ಕಾರಿ ಶಾಲೆಯ ಅಭಿವೃದ್ಧಿ ಕಾಮಗಾರಿಗಳನ್ನು ಶೀಘ್ರವಾಗಿ ಕೈಗೊಳ್ಳುವಂತೆ ಆಗ್ರಹಿಸಿ ಅಂಬೇಡ್ಕ‌ರ್ ನಗರದ ಸಮಸ್ತ ನಾಗರಿಕರು ಹಾಗೂ ಶಾಲಾ ಅಭಿವೃದ್ಧಿ ಮತ್ತು ಮೇಲ್ವಿಚಾರಣಾ ಸಮಿತಿ (SDMC) ವತಿಯಿಂದ ಶಾಸಕ ವಿಶ್ವಾಸ ವೈದ್ಯ ಅವರಿಗೆ ಮನವಿ ಸಲ್ಲಿಸಲಾಯಿತು.

- Advertisement -

ಕಟ್ಟಡ ಮತ್ತು ಕೂಲಿ ಕಾರ್ಮಿಕ ಸಂಘಟನೆಯ ಬಾಬು ಚೆನ್ನಮೇತ್ರಿ ಅವರ ಸಮ್ಮುಖದಲ್ಲಿ ನಾಗರಿಕರು ಮನವಿ ಸಲ್ಲಿಸಿ, ಬಡಾವಣೆಯ ಜನರು ಹಾಗೂ ಶಾಲಾ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಹಲವು ತುರ್ತು ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಅಸ್ಸಾಂ, ಬಿಹಾರ ಕತ್ತಲಲ್ಲಿ ಮುಳುಗಿದಾಗ ಮೋದಿಗೆ ‘ಆಶೀರ್ವಾದ್ ಕಾ...

ದೆಹಲಿಯಲ್ಲಿ ಕಟ್ಟಡ ಕುಸಿದು ವಿದ್ಯಾರ್ಥಿಗಳು ಹೆಣವಾದಾಗ, ಪ್ರಶ್ನೆ ಪತ್ರಿಕೆ ಸೋರಿಕೆಯಿಂದ ಆಘಾತಗೊಂಡು ಎಳೆ ಜೀವಗಳು ಸಾವಿನ ದಾರಿ ಹಿಡಿದಾಗ, ತಮ್ಮ ಹಕ್ಕುಗಳಿಗಾಗಿ ದೇಶದ ಯುವಜನ ಬೀದಿಗಿಳಿದಾಗ, ಕೊನೆಗೆ ನೈಸರ್ಗಿಕ ವಿಕೋಪದಿಂದ ದೇಶದ ಜನ...

ಚುನಾವಣಾ ಕಳ್ಳತನ: ಎದುರಾಳಿಗಳೇ ಮಾಯವಾದರೆ! ನಂದಿಗ್ರಾಮದ ಟ್ರೇಲರ್ –...

ಮತದಾನಕ್ಕೂ ಮುನ್ನ ಎದುರಾಳಿಯೇ ಕಣದಿಂದ ಮಾಯವಾದರೆ, ಅದನ್ನು ಚುನಾವಣೆ ಎನ್ನಬಹುದೇ? ನಂದಿಗ್ರಾಮದ ಬೆಳವಣಿಗೆಗಳು 2027ರ ಉತ್ತರ ಪ್ರದೇಶ ಚುನಾವಣೆಗೂ ಗಂಭೀರ ಸವಾಲು ಒಡ್ಡುವಂತಿವೆ ಪಶ್ಚಿಮ ಬಂಗಾಳದ ನಂದಿಗ್ರಾಮ ವಿಧಾನಸಭಾ ಕ್ಷೇತ್ರಕ್ಕೆ ಉಪಚುನಾವಣೆ ನಡೆಯುತ್ತಿದೆ. ನಂದಿಗ್ರಾಮದ...

ಡಿಜಿಟಲ್ ಇಂಡಿಯಾಕ್ಕೆ ಹಿನ್ನಡೆ; ಮೋದಿ ನೀತಿಯಿಂದ ಮತ್ತೆ ನಗದಿನತ್ತ...

ಸರ್ಕಾರದ ಈ ನಿರ್ಧಾರ ಜನಸಾಮಾನ್ಯರಿಗೆ ಎಷ್ಟು ಕಿರಿಕಿರಿ ಉಂಟುಮಾಡಿದೆ ಎಂಬುದನ್ನು 'ಲೋಕಲ್ ಸರ್ಕಲ್ಸ್' (Local Circles) ನಡೆಸಿದ 32,000ಕ್ಕೂ ಹೆಚ್ಚು ಜನರ ಸಮೀಕ್ಷೆ ಬಟಾಬಯಲು ಮಾಡಿದೆ. ಸಮೀಕ್ಷೆಯ ಪ್ರಕಾರ, ಕೇವಲ ಶೇ.17ರಷ್ಟು ವರ್ತಕರು...

ಸರ್ಕಾರಿ ಅಂಬೇಡ್ಕ‌ರ್ ಶಾಲೆಯ ಕಾಂಪೌಂಡ್ ಗೋಡೆ ನಿರ್ಮಾಣ ಕಾಮಗಾರಿ ಇನ್ನೂ ಪೂರ್ಣಗೊಂಡಿಲ್ಲ. ಮಕ್ಕಳ ಸುರಕ್ಷತೆ ಮತ್ತು ಭದ್ರತೆಯ ದೃಷ್ಟಿಯಿಂದ ಕಾಮಗಾರಿಯನ್ನು ಶೀಘ್ರ ಪೂರ್ಣಗೊಳಿಸಬೇಕು ಎಂದು ಮನವಿ ಮಾಡಿದರು.

ಅಂಬೇಡ್ಕ‌ರ್ ನಗರದ ದುರ್ಗಾದೇವಿ ದೇವಸ್ಥಾನದಿಂದ ತಳದಮ್ಮ ದೇವಸ್ಥಾನದ ಮುಂದಿನ ರಸ್ತೆಯವರೆಗೆ ಸಮರ್ಪಕ ಚರಂಡಿ ವ್ಯವಸ್ಥೆ ಇಲ್ಲದೆ ಸಾರ್ವಜನಿಕರಿಗೆ ತೊಂದರೆಯಾಗುತ್ತಿದೆ. ರಸ್ತೆಯ ನೀರು ಸರಿಯಾಗಿ ಹರಿದುಹೋಗದೆ, ಕುಡಿಯುವ ನೀರಿನ ಪೈಪ್‌ಲೈನ್‌ಗಳು ಹೊರಗೆ ಕಾಣಿಸಿಕೊಳ್ಳುತ್ತಿವೆ. ಈ ಹಿನ್ನೆಲೆಯಲ್ಲಿ ಸೂಕ್ತ ಚರಂಡಿ ನಿರ್ಮಾಣಕ್ಕೆ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಅಂಬೇಡ್ಕ‌ರ್ ನಗರದ ಗವನಕೆರೆಯಲ್ಲಿ ಮಳೆ ನೀರು ಹಾಗೂ ಇತರ ನೀರು ಸಂಗ್ರಹವಾಗುತ್ತಿರುವುದರಿಂದ ಕೆರೆಯ ಸುತ್ತಮುತ್ತಲಿನ ನಿವಾಸಿಗಳಿಗೆ ತೊಂದರೆಯಾಗುತ್ತಿದೆ. ನೀರು ಸುಗಮವಾಗಿ ಹರಿದುಹೋಗಲು ಸೂಕ್ತ ಕಾಲುವೆ ಅಥವಾ ಚರಂಡಿ ವ್ಯವಸ್ಥೆ ಕಲ್ಪಿಸಿ ಸಮಸ್ಯೆಗೆ ಶಾಶ್ವತ ಪರಿಹಾರ ಒದಗಿಸಬೇಕು ಎಂದು ಒತ್ತಾಯಿಸಿದರು.

ಅಂಬೇಡ್ಕ‌ರ್ ನಗರದ ಸರ್ಕಾರಿ ಶಾಲೆಯಲ್ಲಿ 260ಕ್ಕೂ ಹೆಚ್ಚು ಮಕ್ಕಳು ವ್ಯಾಸಂಗ ಮಾಡುತ್ತಿದ್ದು, ವಿದ್ಯಾರ್ಥಿಗಳ ಸಂಖ್ಯೆಗೆ ಅನುಗುಣವಾಗಿ ತರಗತಿ ಕೊಠಡಿಗಳ ಕೊರತೆ ಇದೆ. ಆದ್ದರಿಂದ ಹೆಚ್ಚುವರಿ ತರಗತಿ ಕೊಠಡಿಗಳನ್ನು ಮಂಜೂರು ಮಾಡುವುದರ ಜೊತೆಗೆ, ಮಕ್ಕಳ ಸಾಂಸ್ಕೃತಿಕ ಚಟುವಟಿಕೆಗಳಿಗೆ ಅನುಕೂಲವಾಗುವಂತೆ ಶಾಲಾ ಆವರಣದಲ್ಲಿ ಸುಸಜ್ಜಿತ ರಂಗಮಂದಿರ ನಿರ್ಮಿಸಿಕೊಡಬೇಕು ಎಂದು ಮನವಿಯಲ್ಲಿ ಕೋರಿದರು.

ಬಡಾವಣೆಯ ಮೂಲಸೌಕರ್ಯ ಹಾಗೂ ಶಾಲೆಯ ಅಭಿವೃದ್ಧಿಗೆ ಸಂಬಂಧಿಸಿದ ಎಲ್ಲ ಬೇಡಿಕೆಗಳನ್ನು ಗಂಭೀರವಾಗಿ ಪರಿಗಣಿಸಿ ಶೀಘ್ರ ಪರಿಹಾರ ಕಲ್ಪಿಸಬೇಕು ಎಂದು ನಾಗರಿಕರು ಹಾಗೂ SDMC ಸದಸ್ಯರು ಶಾಸಕ ವಿಶ್ವಾಸ ವೈದ್ಯ ಅವರಿಗೆ ಮನವಿ ಮಾಡಿದರು.

IMG 20251111 WA0000
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಜರಾತ್‌ | ಕಲಬೆರಕೆ ಪಶು ಆಹಾರ ಮಾರಿದರೆ ಜೈಲು; ಕೋಳಿ, ಜಾನುವಾರು ಆಹಾರ ಉತ್ಪಾದನೆಗೆ ಲೈಸೆನ್ಸ್‌ ಕಡ್ಡಾಯ

ಜಾನುವಾರು ಮತ್ತು ಕೋಳಿಗಳಿಗೆ ನೀಡುವ ಆಹಾರದ ಉತ್ಪಾದನೆ, ಸಂಗ್ರಹಣೆ, ವಿತರಣೆ, ಮಾರಾಟ...

ಚಿಂತಾಮಣಿ | ರೇಷ್ಮೆ ಕೃಷಿ ಕಾಲೇಜು ವಿದ್ಯಾರ್ಥಿಗಳಿಂದ ಉಚಿತ ಜಾನುವಾರು ತಪಾಸಣಾ ಶಿಬಿರ ಆಯೋಜನೆ

ಶ್ರೀನಿವಾಸಪುರ ತಾಲ್ಲೂಕಿನ ಕಶೆಟ್ಟಿಪಲ್ಲಿ ಗ್ರಾಮದಲ್ಲಿ ಚಿಂತಾಮಣಿ ರೇಷ್ಮೆ ಕೃಷಿ ಮಹಾವಿದ್ಯಾಲಯದ ವಿದ್ಯಾರ್ಥಿಗಳಿಂದ...

ಚಿಕ್ಕಮಗಳೂರು | ಮೂಗ್ತಿಹಳ್ಳಿ-ಮೂಡಿಗೆರೆ ರಾಷ್ಟ್ರೀಯ ಹೆದ್ದಾರಿ ಶೀಘ್ರದಲ್ಲಿ ಆರಂಭ; ಕೋಟ ಶ್ರೀನಿವಾಸ್ ಪೂಜಾರಿ 

ಮೂಗ್ತಿಹಳ್ಳಿ-ಮೂಡಿಗೆರೆ ರಾಷ್ಟ್ರೀಯ ಹೆದ್ದಾರಿ ಸಂಪರ್ಕ ರಸ್ತೆಯ ಮೊದಲ ಹಂತದ ಕಾಮಗಾರಿ ಇನ್ನೊಂದು...

ಉತ್ತರ ಕನ್ನಡ | ಸೆ. 5ರಂದು ಪ್ರಜಾಸೇವೆ ಆಂದೋಲನ: ಜನರ ಬಳಿಗೆ ಆಡಳಿತ, ಸ್ಥಳದಲ್ಲೇ ಸಮಸ್ಯೆಗಳಿಗೆ ಪರಿಹಾರ

ಉತ್ತರ ಕನ್ನಡ: ರಾಜ್ಯದ ಜನತೆಯ ಅಹವಾಲುಗಳನ್ನು ಆಲಿಸಿ, ಸ್ಥಳದಲ್ಲಿಯೇ ಸಮಸ್ಯೆಗಳಿಗೆ ಪರಿಹಾರ...