ಬೆಳಗಾವಿ | ಆಸ್ತಿ ನೋಂದಣಿ ಹಾಗೂ ದೃಢೀಕರಣ ಆಧಾರ್ ಸಂಖ್ಯೆ ಕಡ್ಡಾಯ

Date:

ಬೆಳಗಾವಿ ಜಿಲ್ಲೆಯಲ್ಲಿ ನಡೆಯುವ ಎಲ್ಲಾ ಆಸ್ತಿ ನೋಂದಣಿ, ವ್ಯವಹಾರ ಹಾಗೂ ದೃಢೀಕರಣ ಪ್ರಕ್ರಿಯೆಗಳಲ್ಲಿ ಆಧಾ‌ರ್ ಸಂಖ್ಯೆ ಅಳವಡಿಕೆ ಹಾಗೂ ಆಧಾ‌ರ್ ದೃಢೀಕರಣವನ್ನು ಕಡ್ಡಾಯಗೊಳಿಸಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್‌ ಆದೇಶ ಹೊರಡಿಸಿದ್ದಾರೆ.

- Advertisement -

ಜಿಲ್ಲೆಯ ಕೆಲವು ಭಾಗಗಳಲ್ಲಿ ಸತ್ತ ವ್ಯಕ್ತಿಗಳ ಹೆಸರಿನಲ್ಲಿ ಆಸ್ತಿ ನೋಂದಣಿ, ಸತ್ತವರ ವಾರಸುದಾರರ ಹೆಸರಿನಲ್ಲಿ ನಕಲಿ ದಾಖಲೆ ಸೃಷ್ಟಿಸಿ ಆಸ್ತಿ ಕಬಳಿಕೆ, ನಕಲಿ ವ್ಯಕ್ತಿಗಳ ಹೆಸರಲ್ಲಿ ದಾಖಲೆ ರಚಿಸಿ ಆಸ್ತಿ ನೋಂದಣಿ ಮಾಡಿಸುವ ಪ್ರಕರಣಗಳು ವರದಿಯಾಗಿರುವ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಮಂಗಳೂರಿನಲ್ಲಿ ವಿಶೇಷ ಸಚಿವ ಸಂಪುಟ: ಕರಾವಳಿಗರ ನಿರೀಕ್ಷೆಗಳೇನು?

ಮಂಗಳೂರಿನಲ್ಲಿ ನಡೆಯಲಿರುವ ಈ ಐತಿಹಾಸಿಕ ಸಚಿವ ಸಂಪುಟ ಸಭೆಯು ಕೇವಲ ಆಡಳಿತಾತ್ಮಕ ಪ್ರಕ್ರಿಯೆಯಾಗುಳಿಯದೆ, ಕರಾವಳಿ ಭಾಗದ ದಶಕಗಳ ಬೇಡಿಕೆಗಳಿಗೆ ಜೀವ ನೀಡುವ ಪ್ರಮುಖ ವೇದಿಕೆಯಾಗುವ ನಿರೀಕ್ಷೆಯಿದೆ. ರಸ್ತೆ ಮತ್ತು ಹೆದ್ದಾರಿಗಳ ದುರಸ್ತಿ, ಮಂಗಳೂರು...

“ಪವಿತ್ರ ಸ್ಥಳಗಳ ಮೇಲೆ ದಾಳಿ” ಹೆಸರಿನಲ್ಲಿ ಸೌದಿ ಅರೇಬಿಯಾ...

ಇತ್ತೀಚಿನ ದಿನಗಳಲ್ಲಿ ಮಧ್ಯಪ್ರಾಚ್ಯದ ಭೌಗೋಳಿಕ ರಾಜಕೀಯವು ಅತ್ಯಂತ ಸಂಕೀರ್ಣ ತಿರುವುಗಳನ್ನು ಪಡೆದುಕೊಳ್ಳುತ್ತಿದೆ. ಇಸ್ರೇಲ್ ಮೇಲೆ ದಾಳಿ ನಡೆಸುವ ಉದ್ದೇಶದಿಂದ ಯೆಮೆನ್‌ನ ಹೌತಿ ಪಡೆಗಳು (ಅನ್ಸಾರ್ ಅಲ್ಲಾ) ಉಡಾವಣೆ ಮಾಡುತ್ತಿರುವ ಕ್ಷಿಪಣಿಗಳು ಹಾಗೂ ಡ್ರೋನ್‌ಗಳು...

ಹೂಥಿಗಳು ಯಾರು? ಅವರು ಮೆಕ್ಕಾವನ್ನೇ ಗುರಿಯಾಗಿಸಿದ್ದರೇ?

ಇರಾನ್‌ನ ‘ಪ್ರತಿರೋಧ ಅಕ್ಷ’ದ ಪ್ರಮುಖ ಭಾಗವಾಗಿರುವ ಹೂಥಿಗಳು ಈಗ ಇಸ್ರೇಲ್, ಸೌದಿ ಅರೇಬಿಯಾ ಮತ್ತು ಕೆಂಪು ಸಮುದ್ರದ ಭದ್ರತಾ ಸಮೀಕರಣಗಳ ಕೇಂದ್ರದಲ್ಲಿ ನಿಂತಿದ್ದಾರೆ. ಮೆಕ್ಕಾವನ್ನೇ ಗುರಿಯಾಗಿಸಿ ಡ್ರೋನ್ ಕಳುಹಿಸಲಾಗಿದೆ ಎಂಬ ಸೌದಿ ಆರೋಪದ...

ಈ ರೀತಿಯ ವಂಚನೆಗಳಿಂದ ಭೂ ವಿವಾದಗಳು, ಅಪರಾಧ ಪ್ರಕರಣಗಳು, ಸಾರ್ವಜನಿಕ ಅಶಾಂತಿ ಹಾಗೂ ಕಾನೂನು ಮತ್ತು ಸುವ್ಯವಸ್ಥೆಗೆ ಧಕ್ಕೆ ಉಂಟಾಗುತ್ತಿರುವುದು ಕಂಡುಬಂದಿದೆ. ಇವುಗಳನ್ನು ಪ್ರಾಥಮಿಕ ಹಂತದಲ್ಲೇ ತಡೆಯುವ ಉದ್ದೇಶದಿಂದ ಆಧಾ‌ರ್ ದೃಢೀಕರಣವನ್ನು ಕಡ್ಡಾಯಗೊಳಿಸಲಾಗಿದೆ. ಆಧಾರ್ ದೃಢೀಕರಣದಿಂದ ನಕಲಿ ವ್ಯಕ್ತಿಗಳ ಪತ್ತೆ ಹಾಗೂ ವಂಚನೆ ತಡೆಗೆ ಸಹಕಾರಿಯಾಗಲಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.

ನೋಂದಣಿಗೆ ಸಂಬಂಧಿಸಿದಂತೆ ಖರೀದಿದಾರರು, ಮಾರಾಟಗಾರರು, ದಾನಿಗಳು, ಸ್ವೀಕರಿಸುವವರು ಹಾಗೂ ಸರ್ಕಾರದಿಂದ ನೇಮಿಸಲಾದ ಅಧಿಕಾರಿಗಳು ಸೇರಿದಂತೆ ವ್ಯವಹಾರಕ್ಕೆ ಸಂಬಂಧಿಸಿದ ಎಲ್ಲಾ ವ್ಯಕ್ತಿಗಳ ಆಧಾ‌ರ್ ದೃಢೀಕರಣ ಕಡ್ಡಾಯವಾಗಿದೆ ಎಂದು ಆದೇಶದಲ್ಲಿ ಸ್ಪಷ್ಟಪಡಿಸಲಾಗಿದೆ.

ನೋಂದಣಿ ಮತ್ತು ಮುದ್ರಾಂಕ ಇಲಾಖೆಯ ಎಲ್ಲಾ ಉಪ ನೋಂದಣಾಧಿಕಾರಿಗಳು, ಸಿಬ್ಬಂದಿ ಹಾಗೂ ಸಂಬಂಧಿತ ಅಧಿಕಾರಿಗಳು ಈ ಆದೇಶವನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ಆದೇಶದ ಪರಿಣಾಮಕಾರಿ ಅನುಷ್ಠಾನಕ್ಕೆ ನಗರ ಪೊಲೀಸ್‌ ಆಯುಕ್ತರು ಹಾಗೂ ಜಿಲ್ಲೆಯ ಪೊಲೀಸ್ ವರಿಷ್ಠಾಧಿಕಾರಿಗಳು ಸಹಕಾರ ನೀಡಬೇಕೆಂದು ಸೂಚಿಸಲಾಗಿದೆ.

ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು | ಮೂಗ್ತಿಹಳ್ಳಿ-ಮೂಡಿಗೆರೆ ರಾಷ್ಟ್ರೀಯ ಹೆದ್ದಾರಿ ಶೀಘ್ರದಲ್ಲಿ ಆರಂಭ; ಕೋಟ ಶ್ರೀನಿವಾಸ್ ಪೂಜಾರಿ 

ಮೂಗ್ತಿಹಳ್ಳಿ-ಮೂಡಿಗೆರೆ ರಾಷ್ಟ್ರೀಯ ಹೆದ್ದಾರಿ ಸಂಪರ್ಕ ರಸ್ತೆಯ ಮೊದಲ ಹಂತದ ಕಾಮಗಾರಿ ಇನ್ನೊಂದು...

ಉತ್ತರ ಕನ್ನಡ | ಸೆ. 5ರಂದು ಪ್ರಜಾಸೇವೆ ಆಂದೋಲನ: ಜನರ ಬಳಿಗೆ ಆಡಳಿತ, ಸ್ಥಳದಲ್ಲೇ ಸಮಸ್ಯೆಗಳಿಗೆ ಪರಿಹಾರ

ಉತ್ತರ ಕನ್ನಡ: ರಾಜ್ಯದ ಜನತೆಯ ಅಹವಾಲುಗಳನ್ನು ಆಲಿಸಿ, ಸ್ಥಳದಲ್ಲಿಯೇ ಸಮಸ್ಯೆಗಳಿಗೆ ಪರಿಹಾರ...

ಹಾಸನ | ಫುಟ್‌ಪಾತ್ ಒತ್ತುವರಿಯನ್ನು ತೆರವುಗೊಳಿಸಿದ ಅಧಿಕಾರಿಗಳು 

ಹಾಸನ ಜಿಲ್ಲೆ ಸಕಲೇಶಪುರ ತಾಲೂಕಿನ ತೇಜಸ್ವಿ ವೃತ್ತದಲ್ಲಿ ಸುಗಮ ಸಂಚಾರಕ್ಕೆ ಅಡಚಣೆಯಾಗಿದ್ದ...

ಚಿಕ್ಕಮಗಳೂರು | ಕೆಎಸ್‌ಆರ್‌ಟಿಸಿ ಬಸ್‌ ಸೌಲಭ್ಯವಿಲ್ಲದೆ ವಿದ್ಯಾರ್ಥಿಗಳ ಪರದಾಟ

ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನ ಕಬ್ಬಳ್ಳಿ ಗೇಟ್‌ ಬಳಿ ಸಖರಾಯಪಟ್ಟಣ-ಬಾಣಾವರ ಸಂಪರ್ಕ...