ಶಿವಮೊಗ್ಗ, ನಗರದಲ್ಲಿ ನಡೆದ ಘಟನೆಗೆ ಸಂಬಂಧಿಸಿದಂತೆ ಆಟೋ ಚಾಲಕನೊಬ್ಬನಿಗೆ ಟ್ರಾಫಿಕ್ ಪೊಲೀಸರು ದಂಡ ವಿಧಿಸಿರುವ ಘಟನೆ ಬೆಳಕಿಗೆ ಬಂದಿದೆ.
ಪ್ರಯಾಣಿಕರು ಆಟೋ ಮೀಟರ್ ಹಾಕಿಕೊಳ್ಳುವಂತೆ ಕೇಳಿದಾಗ, ಚಾಲಕನು ಅವಾಚ್ಯ ಶಬ್ಧಗಳಿಂದ ನಿಂದನೆ ಮಾಡಿದ್ದಾನೆ. ಈ ಕುರಿತು ಪ್ರಯಾಣಿಕರಿಂದ ಟ್ರಾಫಿಕ್ ಪೊಲೀಸರಿಗೆ ದೂರು ಸಲ್ಲಿಸಲಾಗಿತ್ತು.
ದೂರು ಪರಿಶೀಲಿಸಿದ ನಂತರ, ಪೊಲೀಸರು ಚಾಲಕನಿಗೆ ₹500 ದಂಡ ವಿಧಿಸಿದರು.ಅಷ್ಟೇ ಅಲ್ಲದೆ, ಮುಂದಿನ ದಿನಗಳಲ್ಲಿ ಈ ರೀತಿಯ ವರ್ತನೆ ಪುನರಾವರ್ತನೆ ಆಗದಂತೆ ಆಟೋ ಚಾಲಕನಿಗೆ ಎಚ್ಚರಿಕೆ ನೀಡಲಾಗಿದೆ.
ಜೊತೆಗೆ ಎಲ್ಲಾ ಆಟೋ ಚಾಲಕರು ಪ್ರಯಾಣಿಕರನ್ನು ಗೌರವದಿಂದ ವರ್ತಿಸಬೇಕು ಮತ್ತು ಕಡ್ಡಾಯವಾಗಿ ಮೀಟರ್ ಬಳಸಬೇಕು ಎಂಬ ಸೂಚನೆ ನೀಡಲಾಗಿದೆ.
ಟ್ರಾಫಿಕ್ ಪೊಲೀಸರು ಪ್ರಯಾಣಿಕರ ಸುರಕ್ಷತೆ ಮತ್ತು ಹಕ್ಕುಗಳನ್ನು ಕಾಯ್ದುಕೊಳ್ಳುವುದು ತಮ್ಮ ಕರ್ತವ್ಯ ಎಂದು ತಿಳಿಸಿ, ಭವಿಷ್ಯದಲ್ಲೂ ಇದೇ ರೀತಿಯ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಸಿದ್ದಾರೆ.