ರಾಜ್ಯದ ಎಲ್ಲ ಕಾರ್ಮಿಕರಿಗೆ ಮಾಸಿಕ ಸರಾಸರಿ 36 ಸಾವಿರ ಕನಿಷ್ಠ ವೇತನ ನಿಗದಿಪಡಿಸಬೇಕು, ಕೇಂದ್ರದ ನಾಲ್ಕು ಕಾರ್ಮಿಕ ಸಂಹಿ ತೆಗಳಿಗೆ ಕಾರ್ಮಿಕರ ಪರವಾಗಿ ರಾಜ್ಯ ಸರ್ಕಾರ ತಿದ್ದುಪಡಿ ತರಬೇಕು ಹಾಗೂ ಖಾಯಂಯೇತರ ಕಾರ್ಮಿಕರನ್ನು ಖಾಯಂಗೊಳಿಸಲು ಪ್ರತ್ಯೇಕ ಕಾನೂನು ರೂಪಿಸಬೇಕು ಎಂದು ಸಿಐಟಿಯು ಆಗ್ರಹಿಸಿದೆ.

ನಗರದಲ್ಲಿ ಪ್ರತಿಭಟನಾ ಮೆರವಣಿಗೆ ಬಳಿಕ ಮಾತನಾಡಿದ ಸಿಐಟಿಯು ಜಿಲ್ಲಾ ಅಧ್ಯಕ್ಷ ಧರ್ಮೇಶ್, ರಾಜ್ಯ ಸರ್ಕಾರ ಪ್ರಕಟಿಸಿರುವ ಪರಿಷ್ಕೃತ ಕನಿಷ್ಠ ವೇತನ ಅಧಿಸೂಚನೆ ಸ್ವಾಗತಾ ರ್ಹವಾದರೂ, ಅದು ಸುಪ್ರೀಂ ಕೋರ್ಟ್ ನಿಗದಿಪಡಿಸಿರುವ ಮಾನದಂಡಗಳಿಗೆ ಅನುಗುಣವಾಗಿಲ್ಲ. ಆದ್ದರಿಂದ ಇಂದಿನ ಜೀವನ ವೆಚ್ಚಕ್ಕೆ ತಕ್ಕಂತೆ ಸರಾಸರಿ 36 ಸಾವಿರ ಕನಿಷ್ಠವೇತನ ನಿಗದಿಪಡಿಸಬೇಕು ಎಂದು ಒತ್ತಾಯಿಸಿದರು.
2025ರ ಏಪ್ರಿಲ್ನಿಂದಲೇ ಪರಿಷ್ಕೃತ ವೇತನವನ್ನು ಪೂರ್ವಾ ಸ್ವಯವಾಗಿ ಜಾರಿಗೊಳಿಸಿ ಕಾರ್ಮಿಕರಿಗೆ ಬಾಕಿ ವೇತನ ನೀಡ ಬೇಕು. ಗಾರ್ಮೆಂಟ್ಸ್, ತೋಟ ಗಾರಿಕೆ, ಬೀಡಿ, ಅಗರಬತ್ತಿ, ಕೈಮಗ್ಗ ಸೇರಿದಂತೆ 19 ವಲಯ ಗಳ ಕಾರ್ಮಿಕರಿಗೂ ಪರಿಷ್ಕೃತ ವೇತನ ಅನ್ವಯಿಸಬೇಕು ಹಾಗೂ ಸ್ಟೀಮ್ ನೌಕರರನ್ನು ಕನಿಷ್ಠ ವೇತನ ವ್ಯಾಪ್ತಿಗೆ ತರಬೇಕು ಎಂದು ಆಗ್ರಹಿಸಿದರು.
ಕೇಂದ್ರದ ನಾಲ್ಕು ಕಾರ್ಮಿಕ ಸಂಹಿತೆಗಳು ಕಾರ್ಮಿಕರ ಹಕ್ಕುಗಳಿಗೆ ಧಕ್ಕೆಯಾಗಲಿದ್ದು, ಅವುಗಳಿಗೆ ಕರ್ನಾಟಕದ ಮಟ್ಟದಲ್ಲಿ ಕಾರ್ಮಿಕಪರ ತಿದ್ದುಪಡಿಗಳನ್ನು ತರಬೇಕು ಎಂದು ಮನವಿ ಮಾಡಿದರು. ಗುತ್ತಿಗೆ, ಹಂಗಾಮಿ ಹಾಗೂ ಇತರೆ ಖಾಯಂಯೇತರ ಕಾರ್ಮಿಕರಿಗೆ ಉದ್ಯೋಗ ಭದ್ರತೆ ಒದಗಿಸುವ ಉದ್ದೇಶದಿಂದ ಖಾಯಂಗೊಳಿಸುವ ಕುರಿತ ಪ್ರತ್ಯೇಕ ಶಾಸನ ರೂಪಿಸಬೇಕು ಎಂದು ಒತ್ತಾಯಿಸಿದರು.
ಇದನ್ನೂ ಓದಿದ್ದೀರಾ?ಹಾಸನ | ಶಿಶು ಅಭಿವೃದ್ಧಿ ಯೋಜನೆ: ಹುದ್ದೆಗೆ ಅರ್ಜಿ ಆಹ್ವಾನ
ಈ ಸಂದರ್ಭದಲ್ಲಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎಂ.ಬಿ. ಪುಷ್ಪ ಖಜಾಂಚಿ ಅರವಿಂದ್, ಮಂಜುಳ, ಕೆ.ಟಿ. ಹೊನ್ನೇಗೌಡ ಸೇರಿದಂತೆ ವಿವಿಧ ಕಾರ್ಮಿಕ ಸಂಘಟನೆಗಳ ಮುಖಂಡರು ಉಪಸ್ಥಿತರಿದ್ದರು.




