ಈ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ 17 ಕ್ಕಿಂತ ಹೆಚ್ಚು ದೇಶಗಳ ಪ್ರತಿನಿಧಿಗಳು ಪಾಲ್ಗೊಂಡಿದ್ದರು. ಭಾರತ ಸೇರಿ ವಿವಿಧ ದೇಶಗಳ 24 ಮಂದಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು.
ನಂತರ ಇಂಡಿಯನ್ ಟಿವಿ ಸುದ್ದಿವಾಹಿನಿ ಜತೆಗೆ ಮಾತನಾಡಿ “ಹಿಂದೂ-ಮುಸ್ಲಿಮ್-ಕ್ರಿಸ್ಚಿಯನ್ ರ ನಡುವೆ ಉತ್ತಮ ಸೌಹಾರ್ದತೆಯನ್ನು ಬಲಗೊಳಿಸಲು 2010ರಲ್ಲಿ ಉಡುಪಿ ಜಿಲ್ಲೆಯ ಬ್ರಹ್ಮಾವರದಲ್ಲಿ ನಾವು ಹಿಂದೂ ಮುಸ್ಲಿಂ ಕ್ರಿಸ್ಚಿಯನ್ ಯುನೈಟೆಡ್ ಎಂಬ ಸಂಸ್ಥೆಯನ್ನು ಪ್ರಾರಂಭಿಸಿ ಎಲ್ಲರ ನಡುವೆ ಉತ್ತಮ ಬಾಂಧವ್ಯ ವೃದ್ದಿಗೊಳಿಸುವ ನಿಟ್ಟಿನಲ್ಲಿ ದೇಶದ ಉದ್ದಗಲಕ್ಕೂ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದೇವೆ.
ಇಂದು ನಮ್ಮ ಸಂಸ್ಥೆಯ 16 ನೇ ಅಂತರರಾಷ್ಟ್ರೀಯ ಶಾಂತಿ ಪ್ರಶಸ್ತಿ ಮತ್ತು ಯುನೈಟೆಡ್ ಸ್ಟೇಟ್ಸ್ ಗ್ಲೋಬಲ್ ಎಕ್ಸಲೆನ್ಸ್ ಪ್ರಶಸ್ತಿ ಪ್ರದಾನ ಸಮಾರಂಭವು ಅದ್ದೂರಿಯಾಗಿ ಜರುಗಿತು.ಕಾರ್ಯಕ್ರಮದಲ್ಲಿ ವಿವಿಧ ದೇಶಗಳ 24 ಮಂದಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು.ಈ ಪ್ರಶಸ್ತಿಗೆ ಭಾರತದಿಂದ ಕೇವಲ ಒಬ್ಬರೆ ಆದ ಎಂ ಕೆ ಯಾದವಾಡ ಅವರು ಆಯ್ಕೆಯಾಗಿದ್ದಾರೆ.ಪ್ರಶಸ್ತಿ ಪಡೆದ ಎಲ್ಲರಿಗೂ ಅಭಿನಂದನೆಗಳು” ಎಂದು ಹೇಳಿದರು.
ಕೆ ಯಾದವಾಡ ಅವರಿಗೆ ಅಭಿನಂದಿಸಿದರು.