ಗುಜರಾತ್‌ | ಗರ್ಬಾ ನೃತ್ಯ: 24 ಗಂಟೆಗಳಲ್ಲಿ 10 ಮಂದಿ ಹೃದಯಾಘಾತದಿಂದ ಸಾವು; ಹದಿಹರೆಯದವರೇ ಹೆಚ್ಚು!

Date:

ಗುಜರಾತ್‌ನಲ್ಲಿ ಕಳೆದ 24 ಗಂಟೆಗಳಲ್ಲಿ ನವರಾತ್ರಿ ಸಂಭ್ರಮಾಚರಣೆ ಸಂದರ್ಭದಲ್ಲಿ ಪ್ರದರ್ಶಿಸಲಾಗುವ ಗರ್ಬಾ ನೃತ್ಯದ ವೇಳೆ ಕನಿಷ್ಠ 10 ಮಂದಿ ಹೃದಯಾಘಾತದಿಂದ ಮೃತಪಟ್ಟಿದ್ದು, ಮೃತಪಟ್ಟವರ ಪೈಕಿ ತರುಣರಿಂದ ಹಿಡಿದು ಮಧ್ಯ ವಯಸ್ಸಿನವರೇ ಇದರಲ್ಲಿ ಹೆಚ್ಚಿನವರು ಎಂದು ವರದಿಯಾಗಿದೆ.

- Advertisement -

ಬರೋಡಾದ ದಭೋಯಿಯಲ್ಲಿ 13 ವರ್ಷದ ಬಾಲಕ ಅಸುನೀಗಿದ್ದರೆ, ಅಹಮದಾಬಾದ್‌ನಲ್ಲಿ ಶುಕ್ರವಾರ 24 ವರ್ಷದ ಯುವಕ ಗರ್ಬಾ ಪ್ರದರ್ಶಿಸುವಾಗ ಹಠಾತ್ತನೆ ಕುಸಿದು ಬಿದ್ದಿದ್ದಾನೆ. ಅದೇ ರೀತಿ ಕಪಾಡ್ವಂಜ್‌ನಲ್ಲಿ 17 ವರ್ಷದ ಬಾಲಕ ಕೂಡ ಗರ್ಬಾ ನರ್ತನದ ವೇಳೆ ಕುಸಿದುಬಿದ್ದು ಸಾವಿಗೀಡಾಗಿದ್ದಾನೆ. ಹಿಂದಿನ ದಿನ ಕೂಡ ರಾಜ್ಯದ ವಿವಿಧೆಡೆ ಇದೇ ರೀತಿಯ ಘಟನೆಗಳು ವರದಿಯಾಗಿರುವುದಾಗಿ ಗುಜರಾತ್‌ನ ಸ್ಥಳೀಯ ಮಾಧ್ಯಮಗಳು ವರದಿ ಮಾಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

heart attack

ನವರಾತ್ರಿಯ ಮೊದಲ ಆರು ದಿನಗಳಲ್ಲಿ 108 ತುರ್ತು ಆಂಬುಲೆನ್ಸ್ ಸೇವೆಗೆ ಹೃದಯ ಸಂಬಂಧಿ ಸಮಸ್ಯೆಗಳಿಗಾಗಿ 521 ಕರೆಗಳು ಬಂದಿದ್ದವು. ಅಲ್ಲದೆ, ಉಸಿರಾಟ ಸಮಸ್ಯೆ ಕುರಿತು 609 ಕರೆಗಳು ಬಂದಿದ್ದವು. ಈ ಕರೆಗಳು ಗರ್ಬಾ ನೃತ್ಯ ನಡೆಯುವ ಸಮಯವಾಗಿರುವ ಸಂಜೆ 6 ರಿಂದ ನಸುಕಿನ 2 ಗಂಟೆ ನಡುವೆ ದಾಖಲಾಗಿದ್ದವು ಎಂದು ತಿಳಿದುಬಂದಿದೆ.

ಈ ಆಘಾತಕಾರಿ ಬೆಳವಣಿಗೆಯು ಗುಜರಾತ್ ಸರ್ಕಾರಕ್ಕೆ ತಲೆನೋವಾಗಿ ಪರಿಣಮಿಸಿದ್ದು, ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಗರ್ಬಾ ನೃತ್ಯ ಆಯೋಜಕರಿಗೆ ಸೂಚನೆ ನೀಡಿದೆ.

ಗರ್ಬಾ ನಡೆಯುವ ಸ್ಥಳಗಳ ಸಮೀಪದಲ್ಲಿನ ಎಲ್ಲ ಸರ್ಕಾರಿ ಆಸ್ಪತ್ರೆಗಳು ಮತ್ತು ಸಮುದಾಯ ಆರೋಗ್ಯ ಕೇಂದ್ರಗಳಿಗೆ (ಸಿಜಿಎಚ್) ರಾಜ್ಯ ಸರ್ಕಾರ ಸೂಚನೆ ಹೊರಡಿಸಿದ್ದು, ಹೈ ಅಲರ್ಟ್‌ನಿಂದ ಇರುವಂತೆ ಮನವಿ ಮಾಡಿದೆ.

ಯಾವುದೇ ತುರ್ತು ಸನ್ನಿವೇಶ ಎದುರಾದರೂ, ರೋಗಿಗಳನ್ನು ಕಾರ್ಯಕ್ರಮ ಸ್ಥಳದಿಂದ ತ್ವರಿತವಾಗಿ ಕರೆದುಕೊಂಡು ಹೋಗಲು ಆಂಬುಲೆನ್ಸ್‌ಗಳು ಸುಗಮವಾಗಿ ಬರಲು ಅನುಕೂಲವಾಗುವಂತೆ ಕಾರಿಡಾರ್‌ಗಳನ್ನು ನಿರ್ಮಿಸಲು ಗರ್ಬಾ ಆಯೋಜಕರಿಗೆ ಹಾಗೂ ಪೊಲೀಸ್ ಇಲಾಖೆಗೂ ಸೂಚಿಸಿದೆ.

ಈ ನಡುವೆ ಗರ್ಬಾ ಆಯೋಜಕರು ನೃತ್ಯ ಪ್ರದರ್ಶನಗಳಲ್ಲಿ ಭಾಗಿಯಾಗುವ ಎಲ್ಲರ ಸುರಕ್ಷತೆಗಾಗಿ ವೈದ್ಯರು ಹಾಗೂ ಆಂಬುಲೆನ್ಸ್‌ಗಳನ್ನು ಸ್ಥಳದಲ್ಲಿ ನಿಯೋಜಿಸುತ್ತಿದ್ದಾರೆ. ತಮ್ಮ ಸಿಬ್ಬಂದಿಗೆ ಸಿಪಿಆರ್ ನೀಡುವ ತರಬೇತಿ ಕೊಡಿಸುವಂತೆ ಹಾಗೂ ಭಾಗಿಯಾಗುವವರಿಗೆ ಸಾಕಷ್ಟು ನೀರು ಲಭ್ಯವಾಗುವಂತೆ ನೋಡಿಕೊಳ್ಳಲು ಆಯೋಜಕರಿಗೆ ಸೂಚನೆ ನೀಡಲಾಗಿದೆ. ಈ ವರ್ಷದ ನವರಾತ್ರಿ ಹಬ್ಬ ಆರಂಭಕ್ಕೂ ಮುನ್ನ, ಗರ್ಬಾ ಅಭ್ಯಾಸದ ವೇಳೆ ಗುಜರಾತ್‌ನಲ್ಲಿ ಮೂವರು ಹೃದಯಾಘಾತದಿಂದ ಮತಪಟ್ಟಿದ್ದ ಬಗ್ಗೆಯೂ ವರದಿಯಾಗಿತ್ತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಗಲಕೋಟೆ | ಸವಿತಾ ಸಮಾಜ ಅಭಿವೃದ್ಧಿ ನಿಗಮದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ

ಬಾಗಲಕೋಟೆಯ ಸವಿತಾ ಸಮಾಜ ಹಾಗೂ ಅದರ ಉಪಜಾತಿಗಳಿಗೆ ಸೇರಿದ ನಿರುದ್ಯೋಗಿಗಳು ಮತ್ತು...

ಕೊಲ್ಹಾರ | ಮೂರು ದಶಕವಾದರೂ ಮುಳುಗಡೆ ಸಂತ್ರಸ್ತರಿಗೆ ಸಿಗದ ಹಕ್ಕುಪತ್ರ

1996ರಲ್ಲಿ ಕೃಷ್ಣ ಮೇಲ್ದಂಡೆ ಯೋಜನೆಗಾಗಿ ಭೂಮಿ ಕಳೆದುಕೊಂಡ ವಿಜಯಪುರ ಜಿಲ್ಲೆಯ ಕೊಲ್ಹಾರದ...

ಚಿಕ್ಕಮಗಳೂರು | ಬಣಕಲ್; ಸ.ಮಾ.ಹಿ ಪ್ರಾ. ಶಾಲೆಯಲ್ಲಿ ಕಾನೂನು ಅರಿವು ಕಾರ್ಯಕ್ರಮ 

ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಬಣಕಲ್ ಹೋಬಳಿಯ ಸರ್ಕಾರಿ ಮಾದರಿ ಹಿರಿಯ...

ಬರಕ್ಕೆ ಮಾನದಂಡ ಮುಖ್ಯವೋ, ಬದುಕು ಮುಖ್ಯವೋ?: ಸಿ. ಬೈರೇಗೌಡರ ಪ್ರಶ್ನೆ ಇಂದಿಗೂ ಪ್ರಸ್ತುತ

ಬರ ಮೊದಲು ರೈತನ ಹೊಲದಲ್ಲಿ ಕಾಣಿಸುತ್ತದೆ. ನಂತರ ಅವನ ಸಾಲ, ಮನೆಯ...