ಬೀದರ್ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರ ಪಾಲಿಕೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಸಮಾಜ ಕಲ್ಯಾಣ ಇಲಾಖೆ ಇವರ ಸಹಯೋಗದಲ್ಲಿ ನಾಳೆ (ಏ.14)ರಂದು ಸಾಯಂಕಾಲ 5 ಗಂಟೆಗೆ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದಲ್ಲಿ ಭಾರತ ರತ್ನ, ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ 135ನೇ ಜಯಂತೋತ್ಸವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.
ಕಾರ್ಯಕ್ರಮದಲ್ಲಿ ಮುಂಡರಗಿ ಹಾಗೂ ನಿಷ್ಕಲ ಮಂಟಲ ಬೈಲೂರಿನ ತೋಂಟದಾರ್ಯ ಮಠದ ಪೂಜ್ಯ ನಿಜಗುಣಪ್ರಭು ತೋಂಟದಾರ್ಯ ಮಹಾಸ್ವಾಮಿಗಳು ಹಾಗೂ ಆಣದೂರ ವೈಶಾಲಿ ನಗರ ಬುದ್ಧ ವಿಹಾರದ ಪೂಜ್ಯ ಭಂತೆ ಜ್ಞಾನಸಾಗರ ಅವರು ದಿವ್ಯ ಸಾನಿಧ್ಯ ವಹಿಸಲಿದ್ದಾರೆ.
ಅರಣ್ಯ, ಪರಿಸರ ಮತ್ತು ಜೀವಿಶಾಸ್ತ್ರ ಹಾಗೂ ಬೀದರ್ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಬಿ.ಖಂಡ್ರೆ ಅವರು ಕಾರ್ಯಕ್ರಮ ಉದ್ಘಾಟನೆ ನೆರೆವೇರಿಸಲಿದ್ದಾರೆ. ಪೌರಾಡಳಿತ ಹಾಗೂ ಹಜ್ ಸಚಿವ ರಹೀಂ ಖಾನ್ ಅವರು ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಜಿಲ್ಲಾಡಳಿತ ಸೋಮವಾರ ಪ್ರಕಟಣೆಯಲ್ಲಿ ತಿಳಿಸಿದೆ.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಬೀದರ ಲೋಕಸಭಾ ಸದಸ್ಯ ಸಾಗರ ಈಶ್ವರ ಖಂಡ್ರೆ, ಔರಾದ (ಬಿ) ಶಾಸಕ ಪ್ರಭು ಬಿ.ಚವ್ಹಾಣ್, ಬಸವಕಲ್ಯಾಣ ಶಾಸಕ ಶರಣು ಸಲಗರ, ಬೀದರ ದಕ್ಷಿಣ ಶಾಸಕ ಡಾ.ಶೈಲೇಂದ್ರ ಕೆ.ಬೆಲ್ದಾಳೆ, ಹುಮನಾಬಾದ ಶಾಸಕ ಡಾ.ಸಿದ್ಧಲಿಂಗಪ್ಪ ಎನ್.ಪಾಟೀಲ್ ಹಾಗೂ ವಿಧಾನ ಪರಿಷತ್ ಸದಸ್ಯರಾದ ಡಾ.ಚಂದ್ರಶೇಖರ ಬಿ.ಪಾಟೀಲ, ಶಶೀಲ ಜಿ.ನಮೋಶಿ, ಭೀಮರಾವ ಬಿ.ಪಾಟೀಲ್, ಡಾ.ಎಂ.ಜಿ.ಮೂಳೆ ಹಾಗೂ ಕರ್ನಾಟಕ ಮೀನುಗಾರಿಕೆ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಮಾಲಾ ಬಿ.ನಾರಾಯಣರಾವ, ಕಾಡಾ ಅಧ್ಯಕ್ಷರಾದ ಬಾಬು ಹೊನ್ನನಾಯ್ಕ್, ಬೀದರ ನಗರಸಭೆ ಅಧ್ಯಕ್ಷ ಮಹಮ್ಮದ ಗೌಸ್, ಬೀದರ ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಬಸವರಾಜ ಜಾಬಶೆಟ್ಟಿ ಅವರು ಭಾಗವಹಿಸಲಿದ್ದಾರೆ.
ರಾಷ್ಟ್ರೀಯ ಬುಡಕಟ್ಟು ಸ್ವಾಯತ್ತ ಮಂಡಳಿ ಆಫ್ ಇಂಡಿಯಾ ರಾಷ್ಟ್ರೀಯ ಕಾರ್ಯಕಾರಿ ಅಧ್ಯಕ್ಷ ಪ್ರೇಮಕುಮಾರ ಗೆದ್ದಂ ಹಾಗೂ ಕರ್ನಾಟಕ ಉಚ್ಚ ನ್ಯಾಯಾಲಯದ ನ್ಯಾಯವಾದಿ ಪ್ರೊ.ಹರಿರಾಮ್ ಎ. ಅವರು ವಿಶೇಷ ಉಪನ್ಯಾಸ ನೀಡಲಿದ್ದಾರೆ.
ಮದ್ಯ ಮಾರಾಟ ನಿಷೇಧ :
ಜಿಲ್ಲೆಯಲ್ಲಿ ಏ.14ರಂದು ಡಾ.ಬಿ.ಆರ್.ಅಂಬೇಡ್ಕರ್ ಜಯಂತಿ ಆಚರಣೆ ಮಾಡಲಾಗುತ್ತಿದ್ದು, ಸದರಿ ಜಯಂತಿ ಆಚರಣೆ ಕಾಲಕ್ಕೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಶಾಂತಿಯುತವಾಗಿ ಆಚರಿಸಲು ಕರ್ನಾಟಕ ಅಬಕಾರಿ ಕಾಯ್ದೆ 1965ರ ಕಲಂ-21 ರಲ್ಲಿ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ಬೀದರ ಜಿಲ್ಲೆಯಾದ್ಯಂತ ಏ.13ರ ಮಧ್ಯರಾತ್ರಿ 12 ರಿಂದ ಏ.15ರ ಬೆಳಿಗ್ಗೆ 6 ಗಂಟೆಯವರೆಗೆ ಎಲ್ಲಾ ವಿಧದ ಮಧ್ಯದಂಗಡಿಗಳನ್ನು ಮುಚ್ಚಲು ಹಾಗೂ ಮದ್ಯ ಮಾರಾಟ ಮಾಡುವುದನ್ನು ನಿಷೇಧಿಸಿ ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಆದೇಶಿಸಿದ್ದಾರೆ.
ಇದನ್ನೂ ಓದಿ : ರಾಯಚೂರು | ರಾಜ್ಯದ 20 ಜಿಲ್ಲೆಗಳಲ್ಲಿ ಗುಣಾತ್ಮಕ ಶಿಕ್ಷಣಕ್ಕೆ ಒತ್ತಾಯಿಸಿ ಅಹೋರಾತ್ರಿ ಧರಣಿ




