ಮಿಝೋರಾಂನಲ್ಲಿ ನಿರ್ಮಾಣ ಹಂತದ ರೈಲ್ವೆ ಸೇತುವೆ ಕುಸಿದು, ಕನಿಷ್ಠ 17 ಜನರು ಸಾವನ್ನಪ್ಪಿರುವ ಘಟನೆ ನಡೆದಿದೆ.
ಘಟನೆಯಲ್ಲಿ ಇನ್ನೂ ಹಲವರು ಸೇತುವೆಯಡಿ ಸಿಲುಕಿರುವ ಶಂಕೆ ವ್ಯಕ್ತವಾಗಿದ್ದು, ಅವರನ್ನು ರಕ್ಷಿಸುವ ಪ್ರಯತ್ನ ನಡೆಯುತ್ತಿದೆ ಎಂದು ಸ್ಥಳೀಯ ಅಧಿಕಾರಿಗಳು ತಿಳಿಸಿದ್ದಾರೆ.
ಸೇತುವೆ ಕುಸಿದಾಗ ಸುಮಾರು 35 ರಿಂದ 40 ಕಟ್ಟಡ ಕಾರ್ಮಿಕರು ಇದ್ದರು ಎಂದು ವರದಿಯಾಗಿದೆ.
ಐಝ್ವಾಲ್‌ನಿಂದ ಸುಮಾರು 21 ಕಿಮೀ ದೂರದಲ್ಲಿರುವ ಸಾಯಿರಾಂಗ್ ಪ್ರದೇಶದಲ್ಲಿ ಈ ಘಟನೆ ನಡೆದಿರುವುದಾಗಿ ವರದಿಯಾಗಿದೆ.