ಸಿಕ್ಕಿಂನಲ್ಲಿ ಮೇಘಸ್ಫೋಟ : 23 ಸೇನಾ ಸಿಬ್ಬಂದಿ ನಾಪತ್ತೆ

Date:

ಸಿಕ್ಕಿಂನಲ್ಲಿ ಮೇಘಸ್ಫೋಟದಿಂದಾಗಿ ತೀಸ್ತಾ ನದಿಯಲ್ಲಿ ಹಠಾತ್ ಪ್ರವಾಹ ಉಂಟಾಗಿದ್ದು, ಇದರ ಪರಿಣಾಮ 23 ಸೇನಾ ಸಿಬ್ಬಂದಿ ನಾಪತ್ತೆಯಾಗಿದ್ದಾರೆ ಎಂದು ವರದಿಯಾಗಿದೆ.

- Advertisement -

ನಾಪತ್ತೆಯಾಗಿರುವ ಯೋಧರ ಪತ್ತೆಗೆ ವ್ಯಾಪಕ ಶೋಧ ನಡೆಸಲಾಗುತ್ತಿದೆ ಎಂದು ಭಾರತೀಯ ಸೇನೆ ತಿಳಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹಮ್ ಔರತೇನ್ ಆಜಾದ್ ಹೈ: ಸುರಕ್ಷತೆಯ ಹೆಸರಲ್ಲಿ ಕಡಿವಾಣ...

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಹಿಳೆಯರು ಮತ್ತು ಅಪ್ರಾಪ್ತೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳಿಗೆ ಕಡಿವಾಣ ಇಲ್ಲದಂತಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಅಭದ್ರತೆಯ ವಾತಾವರಣವಿರುವಾಗ ಈ ಲೋಪಗಳನ್ನು ಸರಿಪಡಿಸದೆಯೇ ದೌರ್ಜನ್ಯಕ್ಕೆ ಒಳಗಾಗುತ್ತಿರುವ ಸ್ರೀ ಸಮುದಾಯದ ಉಡುವ,...

ತಮ್ಮ ವಿರುದ್ಧ ತಾವೇ’ಆರೋಪಪಟ್ಟಿ’ ಸಿದ್ಧಪಡಿಸಿಕೊಂಡ ಗ್ಯಾನೇಶ್ ಕುಮಾರ್: ಪ್ರೆಸ್...

ಚುನಾವಣಾ ಆಯೋಗದ ಇತ್ತೀಚಿನ ನಡೆಗಳು ಮತ್ತು ಸಾಂವಿಧಾನಿಕ ವೈಫಲ್ಯದ ಅಸಲಿಯತ್ತನ್ನು ಸ್ವರಾಜ್ ಇಂಡಿಯಾ ಸದಸ್ಯ ಹಾಗೂ ‘ಭಾರತ್ ಜೋಡೊ ಅಭಿಯಾನ’ದ ರಾಷ್ಟ್ರೀಯ ಸಂಚಾಲಕ ಯೋಗೇಂದ್ರ ಯಾದವ್ ಅವರು 'ದಿ ಇಂಡಿಯನ್ ಎಕ್ಸ್‌ಪ್ರೆಸ್' ಪತ್ರಿಕೆಯಲ್ಲಿ...

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

ಸೇನೆಯ ಪೂರ್ವ ಕಮಾಂಡ್‌ ಹೇಳಿಕೆ ನೀಡಿದ್ದು, ಮೇಘಸ್ಫೋಟದಿಂದಾಗಿ ತೀಸ್ತಾ ನದಿಯಲ್ಲಿ ಹಠಾತ್ ಪ್ರವಾಹ ಉಂಟಾಗಿದೆ. ಇದರಿಂದಾಗಿ ಲಾಚೆನ್ ಕಣಿವೆಯ ಉದ್ದಕ್ಕೂ ಕೆಲವು ಸಂಸ್ಥೆಗಳಿಗೆ ಹಾನಿಯಾಗಿದೆ ಎಂದು ಹೇಳಿದೆ.

“ಚುಂಗ್ತಾಂಗ್ ಅಣೆಕಟ್ಟಿನಿಂದ ನೀರನ್ನು ಬಿಡುಗಡೆ ಮಾಡಿದ ಹಿನ್ನೆಲೆಯಲ್ಲಿ ನೀರಿನ ಮಟ್ಟವು 15-20 ಅಡಿ ಎತ್ತರದವರೆಗೆ ಹಠಾತ್ ಹೆಚ್ಚಳಕ್ಕೆ ಕಾರಣವಾಯಿತು. ಇದು ಸಿಂಗ್ಟಾಮ್ ಬಳಿಯ ಬರ್ದಂಗ್‌ನಲ್ಲಿ ನಿಲುಗಡೆ ಮಾಡಲಾಗಿದ್ದ ಸೇನಾ ವಾಹನಗಳಿಗೆ ಹಾನಿಯುಂಟು ಮಾಡಿದೆ. ಘಟನೆಯಿಂದಾಗಿ 23 ಸಿಬ್ಬಂದಿ ಕಾಣೆಯಾಗಿದ್ದಾರೆ ಮತ್ತು ಕೆಲವು ವಾಹನಗಳು ಮುಳುಗಿವೆ. ಕೆಸರಿನ ಅಡಿಯಲ್ಲಿ ಸಿಲುಕಿರುವವರಿಗೆ ಶೋಧ ಕಾರ್ಯಾಚರಣೆಗಳು ನಡೆಯುತ್ತಿವೆ” ಎಂದು ಹೇಳಿಕೆಯಲ್ಲಿ ಭಾರತೀಯ ಸೇನೆ ತಿಳಿಸಿದೆ.

ಸಿಕ್ಕಿಂನಲ್ಲಿ ಮಂಗಳವಾರ ರಾತ್ರಿಯಿಡೀ ಭಾರೀ ಮಳೆಯಾದ ಪರಿಣಾಮ ಉತ್ತರ ಸಿಕ್ಕಿಂನ ಲೊನಾಕ್ ಸರೋವರದ ಬಳಿ ಮೇಘಸ್ಫೋಟ ಉಂಟಾದ ಪರಿಣಾಮ, ಸರೋವರವು ಉಕ್ಕಿ ಹರಿದಿದೆ. ಅಲ್ಲದೇ, ಇದರಿಂದಾಗಿ ತೀಸ್ತಾ ನದಿಯಲ್ಲಿ ನೀರಿನ ಮಟ್ಟವೀ ದಿಢೀರಾಗಿ ಹೆಚ್ಚಳಕ್ಕೆ ಕಾರಣವಾಯಿತು ಎಂದು ವರದಿಯಾಗಿದೆ.

ಬಾಂಗ್ಲಾದೇಶವನ್ನು ಪ್ರವೇಶಿಸುವ ಮೊದಲು ತೀಸ್ತಾ ನದಿಯು ಸಿಕ್ಕಿಂ ಮತ್ತು ಪಶ್ಚಿಮ ಬಂಗಾಳದ ಮೂಲಕ ಹರಿದು ಹೋಗುತ್ತದೆ.

ಮೇಘಸ್ಫೋಟದ ಬಳಿಕ ಸಿಕ್ಕಿಂನ ಅಧಿಕಾರಿಗಳು ಹೈ ಅಲರ್ಟ್ ಘೋಷಿಸಿದ್ದಾರೆ. ನದಿಯು ಉಕ್ಕಿ ಹರಿಯುತ್ತಿರುವ ಹಾಗೂ ರಸ್ತೆಗಳು ಕೊಚ್ಚಿಕೊಂಡು ಹೋಗುತ್ತಿರುವ ಭಯಾನಕ ದೃಶ್ಯಗಳನ್ನು ಸ್ಥಳೀಯ ನಿವಾಸಿಗಳು ತಮ್ಮ ಮೊಬೈಲ್‌ಗಳಲ್ಲಿ ಸೆರೆ ಹಿಡಿದಿದ್ದಾರೆ.

“ಮೇಘಸ್ಫೋಟದಿಂದ ಸಾರ್ವಜನಿಕ ಆಸ್ತಿಪಾಸ್ತಿಗಳಿಗೆ ತುಂಬಾ ಹಾನಿಯಾಗಿದೆ. ಸಿಂಗ್ಟಮ್ನಲ್ಲಿ ಕೆಲವರು ನಾಪತ್ತೆಯಾಗಿದ್ದಾರೆ ಎಂದು ವರದಿಯಾಗಿದೆ. ಪರಿಹಾರ ಕಾರ್ಯಾಚರಣೆಗಳು ನಡೆಯುತ್ತಿವೆ” ಎಂದು ಘಟನೆ ನಡೆದ ಪ್ರದೇಶಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಮುಖ್ಯಮಂತ್ರಿ ಪ್ರೇಮ್ ಸಿಂಗ್ ತಮಾಂಗ್ ತಿಳಿಸಿದ್ದಾರೆ.

ಈ ನಡುವೆ ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದ್ದು, ‘ಗಜೋಲ್ಡೋಬಾ, ಡೊಮೊಹಾನಿ, ಮೆಖಲಿಗಂಜ್ ಮತ್ತು ಘಿಶ್‌ನಂತಹ ತಗ್ಗು ಪ್ರದೇಶಗಳಲ್ಲಿರುವ ಜನರು ಜಾಗರೂಕರಾಗಿರಿ” ಎಂದು ಎಚ್ಚರಿಕೆ ನೀಡಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು | ಬಣಕಲ್; ಸ.ಮಾ.ಹಿ ಪ್ರಾ. ಶಾಲೆಯಲ್ಲಿ ಕಾನೂನು ಅರಿವು ಕಾರ್ಯಕ್ರಮ 

ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಬಣಕಲ್ ಹೋಬಳಿಯ ಸರ್ಕಾರಿ ಮಾದರಿ ಹಿರಿಯ...

ಬರಕ್ಕೆ ಮಾನದಂಡ ಮುಖ್ಯವೋ, ಬದುಕು ಮುಖ್ಯವೋ?: ಸಿ. ಬೈರೇಗೌಡರ ಪ್ರಶ್ನೆ ಇಂದಿಗೂ ಪ್ರಸ್ತುತ

ಬರ ಮೊದಲು ರೈತನ ಹೊಲದಲ್ಲಿ ಕಾಣಿಸುತ್ತದೆ. ನಂತರ ಅವನ ಸಾಲ, ಮನೆಯ...

ಚಿಕ್ಕಮಗಳೂರು | ಕಸ್ತೂರಿ ರಂಗನ್ ವಿರೋಧಿಸಿ ನಾಳೆ ಬಾಳೆಹೊನ್ನೂರು ಬಂದ್ 

ಕಸ್ತೂರಿ ರಂಗನ್ ವರದಿ ಜಾರಿಯಿಂದ ಮಲೆನಾಡು ಭಾಗದಲ್ಲಿ ಸಮಸ್ಯೆ ಹಿನ್ನಲೆಯಲ್ಲಿ ಮಲೆನಾಡು...

ಗುಜರಾತ್‌ | ಕಲಬೆರಕೆ ಪಶು ಆಹಾರ ಮಾರಿದರೆ ಜೈಲು; ಕೋಳಿ, ಜಾನುವಾರು ಆಹಾರ ಉತ್ಪಾದನೆಗೆ ಲೈಸೆನ್ಸ್‌ ಕಡ್ಡಾಯ

ಜಾನುವಾರು ಮತ್ತು ಕೋಳಿಗಳಿಗೆ ನೀಡುವ ಆಹಾರದ ಉತ್ಪಾದನೆ, ಸಂಗ್ರಹಣೆ, ವಿತರಣೆ, ಮಾರಾಟ...