ದೇಶಾದ್ಯಂತ ಸುದ್ದಿಯಾಗಿದ್ದ ಬನಾರಸ್ ಹಿಂದೂ ವಿವಿ ಅವರಣದಲ್ಲಿ ಐಐಟಿ ವಿದ್ಯಾರ್ಥಿನಿ ಮೇಲೆ ನಡೆದಿದ್ದ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಐಟಿ ಸೆಲ್ನಲ್ಲಿ ಗುರುತಿಸಿಕೊಂಡಿದ್ದ ಮೂವರು ಆರೋಪಿಗಳನ್ನು ಎರಡು ತಿಂಗಳ ಬಳಿಕ ಬಂಧಿಸಲಾಗಿದೆ.
ಬಿಎಚ್ಯು ಕ್ಯಾಂಪಸ್ನಲ್ಲಿ ಐಐಟಿಯ ವಿದ್ಯಾರ್ಥಿನಿಯ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ವಾರಣಾಸಿಯ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ಭಾನುವಾರ ತಿಳಿಸಿದ್ದಾರೆ.

ಬಂಧಿತರನ್ನು ಕುನಾಲ್ ಪಾಂಡೆ, ಆನಂದ್ ಅಲಿಯಾಸ್ ಅಭಿಷೇಕ್ ಚೌಹಾಣ್ ಹಾಗೂ ಸಕ್ಷಮ್ ಪಟೇಲ್ ಎಂದು ಗುರುತಿಸಲಾಗಿದೆ ಎಂದು ಲಂಕಾ ಪೊಲೀಸ್ ಠಾಣೆಯ ಎಸ್ಎಚ್ಒ ಶಿವಕಾಂತ್ ಮಿಶ್ರಾ ತಿಳಿಸಿದ್ದಾರೆ.
ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದ ಪೊಲೀಸರು, ಆರೋಪಿಗಳನ್ನು ಎರಡು ತಿಂಗಳು ನಂತರ ಪತ್ತೆ ಹಚ್ಚುವಲ್ಲಿ ಸಫಲರಾಗಿದ್ದಾರೆ. ಬಿಎಚ್ಯು ಕ್ಯಾಂಪಸ್ನ ಸುತ್ತಮುತ್ತಲಿನಲ್ಲಿ ಅಳವಡಿಸಲಾಗಿದ್ದ ಸುಮಾರು 170ರಷ್ಟು ಸಿಸಿಟಿವಿಯನ್ನು ಪರಿಶೀಲನೆ ನಡೆಸಿದ ಬಳಿಕ ಆರೋಪಿಗಳನ್ನು ಬಂಧಿಸಿದ್ದಾರೆ ಎಂದು ವರದಿಯಾಗಿದೆ.
ಬಿಜೆಪಿ ಐಟಿ ಸೆಲ್ನಲ್ಲಿ ಗುರುತಿಸಿಕೊಂಡಿದ್ದರುಪ್ರಕರಣ ನಡೆದು ಸುಮಾರು ಎರಡು ತಿಂಗಳ ಬಳಿಕ ಆರೋಪಿಗಳನ್ನು ಬಂಧಿಸಲಾಗಿದೆ. ಬಂಧಿತ ಮೂವರು ಕೂಡ ವಾರಣಾಸಿಯ ಬಿಜೆಪಿ ಐಟಿ ಸೆಲ್ನಲ್ಲಿ ಗುರುತಿಸಿಕೊಂಡಿದ್ದರು ಎಂದು ವರದಿಯಾಗಿದೆ.
ये हैं भाजपा के दिग्गज नेताओं की छत्रछाया में सरेआम पनपते और घूमते भाजपाइयों की वो नयी फसल, जिनकी ‘तथाकथित ज़ीरो टॉलरेंस सरकार’ में दिखावटी तलाश जारी है।
सूचनार्थ : ये भाजपा के सर्वोच्च नेताओं से अभयदान प्राप्त वो भाजपाई हैं जिन पर बनारस हिंदू यूनिवर्सिटी (बीएचयू) में एक छात्रा… pic.twitter.com/2wV7EtnsPr
— Akhilesh Yadav (@yadavakhilesh) December 31, 2023
ಈ ಬಗ್ಗೆ ‘ದೈನಿಕ್ ಭಾಸ್ಕರ್’ ವರದಿ ಮಾಡಿದ್ದು, ವರದಿಯ ಪ್ರತಿಯನ್ನು ಆಲ್ಟ್ ನ್ಯೂಸ್ನ ಪತ್ರಕರ್ತ ಮೊಹಮ್ಮದ್ ಝುಬೇರ್ ಟ್ವೀಟ್ ಮಾಡಿದ್ದಾರೆ. ಅಲ್ಲದೇ, ಬಿಜೆಪಿ ಐಟಿ ಸೆಲ್ನ ಮುಖ್ಯಸ್ಥ ಅಮಿತ್ ಮಾಳವೀಯ ಸೇರಿದಂತೆ ಹಲವರಿಗೆ ಟ್ಯಾಗ್ ಮಾಡಿದ್ದಾರೆ.
ಈ ನಡುವೆ ಆರೋಪಿಗಳು ಪ್ರಧಾನಿ ನರೇಂದ್ರ ಮೋದಿ, ಉತ್ತರ ಪ್ರದೇಶ ಮುಖ್ಯಮಂತ್ರಿ, ಕೇಂದ್ರ ಸಚಿವೆ ಸ್ಮೃತಿ ಇರಾನಿ, ಬಿಜೆಪಿ ಐಟಿ ಸೆಲ್ನ ಮುಖ್ಯಸ್ಥ ಅಮಿತ್ ಮಾಳವೀಯ ಸೇರಿದಂತೆ ಹಲವು ಬಿಜೆಪಿ ಮುಖಂಡರ ಜೊತೆಗಿರುವ ಫೋಟೋಗಳು ಸೋಷಿಯಲ್ ಮೀಡಿಯಾಗಳಲ್ಲಿ ವೈರಲ್ ಆಗಿದೆ.
Nearly two months after a female student was allegedly sexually assaulted and video recorded her after taking her clothes off inside the IIT-BHU campus, 3 were arrested.
Officers identified the accused as Kunal Pandey, Anand Chauhan and Saksham Patel. Kunal Pandey and Saksham… pic.twitter.com/95AQYHSb76— Mohammed Zubair (@zoo_bear) December 31, 2023
ಏನಿದು ಘಟನೆ?
ಕಳೆದ ನವೆಂಬರ್ 1ರ ರಾತ್ರಿ ಅತ್ಯಾಚಾರ ಘಟನೆ ನಡೆದಿತ್ತು. ಸಂತ್ರಸ್ತೆ ತನ್ನ ಸ್ನೇಹಿತನೊಂದಿಗೆ ಹಾಸ್ಟೆಲ್ನಿಂದ ಹೊರಗೆ ಹೋಗಿದ್ದಳು. ಆಗ ಬೈಕ್ನಲ್ಲಿ ಬಂದಿದ್ದ ಮೂವರು ವ್ಯಕ್ತಿಗಳು, ಸ್ನೇಹಿತನಿಗೆ ಬಂದೂಕು ತೋರಿಸಿ ಆತನನ್ನು ಬೇರ್ಪಡಿಸಿ, ಅವಳನ್ನು ಬಲವಂತವಾಗಿ ಕರೆದೊಯ್ದು ಅತ್ಯಾಚಾರವೆಸಗಿದ್ದರು. ಬಳಿಕ ಆರೋಪಿಗಳು ಆಕೆಯನ್ನು ವಿವಸ್ತ್ರಗೊಳಿಸಿ, ವಿಡಿಯೋ ಮಾಡಿ ಫೋಟೋ ತೆಗೆದಿದ್ದರು. ಸುಮಾರು 15 ನಿಮಿಷಗಳ ನಂತರ ಆಕೆಯ ಫೋನ್ ನಂಬರ್ ತೆಗೆದುಕೊಂಡು ಹೋಗಲು ಬಿಟ್ಟರು ಎಂದು ದೂರಿನಲ್ಲಿ ತಿಳಿಸಿದ್ದರು.
ಘಟನೆಯ ಸುದ್ದಿ ತಿಳಿಯುತ್ತಿದ್ದಂತೆಯೇ, ಹಿಂದೂ ಬನಾರಸ್ ವಿಶ್ವವಿದ್ಯಾಲಯದ ಐಐಟಿಯ ನೂರಾರು ವಿದ್ಯಾರ್ಥಿಗಳು ಬೀದಿಗಿಳಿದು ಪ್ರತಿಭಟನೆ ನಡೆಸಿದ್ದರು.
ಸಂತ್ರಸ್ತೆಯ ದೂರಿನ ಆಧಾರದ ಮೇಲೆ, ಐಪಿಸಿಯ ಸೆಕ್ಷನ್ 354 (ಮಹಿಳೆ ಮೇಲೆ ದೌರ್ಜನ್ಯ), ಸಾಮೂಹಿಕ ಅತ್ಯಾಚಾರ ಹಾಗೂ ಮಾಹಿತಿ ತಂತ್ರಜ್ಞಾನ ಕಾಯ್ದೆಯ ನಿಬಂಧನೆಗಳ ಅಡಿಯಲ್ಲಿ ಲಂಕಾ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದರು.