ಪ್ರಾಧ್ಯಾಪಕರಿಂದ ಲೈಂಗಿಕ ಕಿರುಕುಳ: 500 ವಿದ್ಯಾರ್ಥಿನಿಯರಿಂದ ಪ್ರಧಾನಿಗೆ ಪತ್ರ

Date:

Advertisements

ವಿವಿಯ ಪ್ರಾಧ್ಯಾಪಕರೊಬ್ಬರು ಲೈಂಗಿಕ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿ ಸುಮಾರು 500 ಕಾಲೇಜು ವಿದ್ಯಾರ್ಥಿನಿಯರು ಪ್ರಧಾನಿ ನರೇಂದ್ರ ಮೋದಿ ಹಾಗೂ ಹರಿಯಾಣ ಮುಖ್ಯಮಂತ್ರಿ ಮನೋಹರ್‌ ಲಾಲ್ ಕಟ್ಟರ್ ಸೇರಿದಂತೆ ಹಲವರಿಗೆ ಪತ್ರ ಬರೆದಿರುವ ಘಟನೆ ಹರಿಯಾಣದ ಸಿರ್ಸಾ ನಗರದಲ್ಲಿ ನಡೆದಿದೆ.

ಲೈಂಗಿಕ ದೌರ್ಜನ್ಯ ನೀಡುತ್ತಿರುವ ಸಿರ್ಸಾ ನಗರದ ಚೌಧರಿ ದೇವಿ ವಿಶ್ವವಿದ್ಯಾಲಯದ ಪ್ರಾಧ್ಯಾಪಕರನ್ನು ಅಮಾನತುಗೊಳಿಸಬೇಕು ಹಾಗೂ ಹೈಕೋರ್ಟ್ ನ್ಯಾಯಾಧೀಶರ ನೇತೃತ್ವದಲ್ಲಿ ವಿಚಾರಣೆಗೊಳಪಡಿಸಬೇಕು ಎಂದು ಪತ್ರದಲ್ಲಿ ವಿದ್ಯಾರ್ಥಿನಿಯರು ಬೇಡಿಕೆಯಿಟ್ಟಿದ್ದಾರೆ.

ಚೌಧರಿ ದೇವಿ ವಿವಿಯ ಉಪಕುಲಪತಿ ಡಾ. ಅಜ್ಮಲ್ ಸಿಂಗ್ ಮಲಿಕ್, ಹರಿಯಾಣ ರಾಜ್ಯಪಾಲ ಬಂಡಾರು ದತ್ತಾತ್ರೇಯ, ಗೃಹ ಸಚಿವ ಅನಿಲ್ ವಿಜ್ ಹಾಗೂ ರಾಷ್ಟ್ರೀಯ ಮಹಿಳಾ ಆಯೋಗದ ಅಧ್ಯಕ್ಷೆ ರೇಖಾ ಶರ್ಮಾ, ಹಿರಿಯ ರಾಜ್ಯ ಸರ್ಕಾದ ಅಧಿಕಾರಿಗಳು ಹಾಗೂ ಮಾಧ್ಯಮ ಪ್ರತಿನಿಧಿಗಳಿಗೂ ಪತ್ರವನ್ನು ರವಾನಿಸಿದ್ದಾರೆ.

Advertisements

ಆರೋಪಿ ಪ್ರಾಧ್ಯಾಪಕರು ಕೊಳಕು ಹಾಗೂ ಅಶ್ಲೀಲ ಕೃತ್ಯಗಳನ್ನು ವೆಸಗಿದ್ದಾರೆ. ಅಲ್ಲದೆ ಈ ಪ್ರಾಧ್ಯಾಪಕರು ಸ್ನಾನದ ಕೊಠಡಿಗೆ ಕರೆದೋಯ್ದು ತಮ್ಮ ಖಾಸಗಿ ಭಾಗಗಳನ್ನು ಸ್ಪರ್ಶಿಸುವುದಲ್ಲದೆ ನಮ್ಮೊಂದಿಗೆ ಅಶ್ಲೀಲ ಪದ ಪ್ರಯೋಗ ಮಾಡುತ್ತಾರೆ. ನಾವು ಈ ಬಗ್ಗೆ ಪ್ರತಿಭಟಿಸಿದಾಗ, ಗಂಭೀರ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಬೆದರಿಸಿದ್ದಾರೆ ಎಂದು ಪತ್ರದಲ್ಲಿ ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಬಡವರ ಭೂಮಿ ಮತ್ತು ನೈಸ್‌ ರಾಜಕಾರಣ

ಈ ಅಮಾನುಷ ಕೃತ್ಯವು ಹಲವು ತಿಂಗಳುಗಳಿಂದ ನಡೆಯುತ್ತಿದ್ದು, ಸ್ವತಃ ಉಪಕುಲಪತಿಗಳು ಲೈಂಗಿಕ ಕಿರುಕುಳ ನೀಡುವ ಪ್ರಾಧ್ಯಾಪಕರನ್ನು ರಕ್ಷಿಸುತ್ತಿದ್ದಾರೆ. ಪ್ರಾಧ್ಯಾಪಕರಿಗೆ ರಾಜಕೀಯ ಪ್ರಭಾವವಿರುವ ಕಾರಣ ನಮ್ಮನ್ನು ಕಾಲೇಜಿನಿಂದ ಉಚ್ಚಾಟಿಸುವುದಾಗಿ ಬೆದರಿಸಲಾಗುತ್ತಿದೆ ಎಂದು ಆರೋಪಿಸಲಾಗಿದೆ.

ಇದಲ್ಲದೆ ಉಪಕುಲಪತಿಗಳು ವಿದ್ಯಾರ್ಥಿನಿಯರಿಗೆ ಉತ್ತಮ ಹಾಗೂ ಪ್ರಾಯೋಗಿಕ ಅಂಕಗಳನ್ನು ನೀಡುವ ಮೂಲಕ ಆರೋಪಗಳನ್ನು ಹತ್ತಿಕ್ಕಲು ಪ್ರಯತ್ನಿಸುತ್ತಿದ್ದಾರೆ ಎನ್ನಲಾಗಿದೆ.

ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ವಿಶ್ವವಿದ್ಯಾನಿಲಯವು ಆರೋಪಗಳ ಬಗ್ಗೆ ತನಿಖೆ ನಡೆಸುತ್ತಿರುವ ತನ್ನದೇ ಆದ ಸಮಿತಿಯನ್ನು ಹೊಂದಿದೆ. ಇದು ಗಂಭೀರ ಆರೋಪವಾಗಿದೆ. ಪತ್ರದಲ್ಲಿ ಯಾವುದೇ ಹೆಸರಿಲ್ಲ ಆದರೆ ನಾವು ಇದನ್ನು ತನಿಖೆ ಮಾಡುತ್ತೇವೆ. ನಂತರವಷ್ಟೇ ಕ್ರಮ ಕೈಗೊಳ್ಳಲಾಗುವುದು. ತಪ್ಪಿತಸ್ಥರು ಯಾರೇ ಆಗಿದ್ದರೂ ಅವರನ್ನು ಬಿಡಲಾಗುವುದಿಲ್ಲ. ಸಿಸಿ ಟಿವಿ ದೃಶ್ಯಾವಳಿಗಳನ್ನು ಪೊಲೀಸರಿಗೆ ನೀಡಲಾಗಿದೆ. ಪತ್ರದ ಸಾರಾಂಶದ ಪ್ರಕಾರ ಸಿಸಿ ಟಿವಿ ದೃಶ್ಯಗಳನ್ನು ಅಳಿಸಲಾಗಿದೆ ಎನ್ನಲಾಗಿದೆ” ಎಂದು ವಿಶ್ವವಿದ್ಯಾಲಯದ ರಿಜಿಸ್ಟ್ರಾರ್ ಡಾ ರಾಜೇಶ್ ಕುಮಾರ್ ಬನ್ಸಾಲ್ ತಿಳಿಸಿದ್ದಾರೆ

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

1 COMMENT

  1. ಎಲ್ಲಿ ನೋಡಿದರಲ್ಲಿ ಮಹಿಳೆಯರ ಮೇಲೆ ದೌರ್ಜನ್ಯ
    ಎಲ್ಲಿ ನೋಡಿದರಲ್ಲಿ ಅತ್ಯಾಚಾರ ಅನಾಚಾರ
    ಎಲ್ಲಿ ನೋಡಿದರಲ್ಲಿ ಹಿಂಸೆ ದರೋಡೆ ಕೊಲೆ
    ಎಲ್ಲಿ ನೋಡಿದರಲ್ಲಿ ದ್ವೇಷ ಅಸಹಿಷ್ಣುತೆ
    ಇದು ಇಂದಿನ ನಮ್ಮ ಭಾರತ !

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಬಣದಲ್ಲಿ ಅಸಮಾಧಾನ : ಎಂಎಲ್ ಸಿ ಕಾರು ತಡೆ ವಾಗ್ವಾದ

ಎಂಎಲ್ ಸಿ ಶರಣಗೌಡ ಪಾಟೀಲ್‌ ಅವರ ಕಾರಿಗೆ ಡಿ ಎಸ್ ಹುಲಗೇರಿ...

ಕಲಬುರಗಿ | ಮೂರು ತಿಂಗಳಿಂದ ಪಾವತಿಯಾಗದ ʼಗೃಹಲಕ್ಷ್ಮೀʼ ಹಣ : ವೆಲ್ಫೇರ್ ಪಾರ್ಟಿ ಆಕ್ರೋಶ

ಕರ್ನಾಟಕ ರಾಜ್ಯ ಸರ್ಕಾರ ಜಾರಿಗೊಳಿಸಿದ ಪಂಚ ಗ್ಯಾರಂಟಿಯ ಗೃಹಲಕ್ಷ್ಮೀ ಯೋಜನೆಯ ಹಣ...

ಬೆಳಗಾವಿ : ಮೂರು ವರ್ಷದ ಹೆಣ್ಣು ಮಗುವನ್ನು ಆಸ್ಪತ್ರೆಯಲ್ಲಿ ಬಿಟ್ಟು ಹೋದ ತಂದೆ ತಾಯಿ

ತಾಯಿಯ ಮಡಿಲಿಗೆ ತವಕಿಸುತ್ತಿರುವ ಮೂರು ವರ್ಷದ ಹೆಣ್ಣುಮಗುವನ್ನು ಆಸ್ಪತ್ರೆಯಲ್ಲಿ ತಂದೆ ತಾಯಿಗಳು...

Download Eedina App Android / iOS

X