ಯೂಟ್ಯೂಬ್‌ನ ನೇರಪ್ರಸಾರದಲ್ಲೂ ‘ಇಸ್ರೋ’ ಹೊಸ ಮೈಲುಗಲ್ಲು : 80 ಲಕ್ಷ ಜನರಿಂದ ವೀಕ್ಷಣೆ!

Date:

ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಚಂದ್ರಯಾನ-3 ಯಶಸ್ವಿಯಾಗಿ ಚಂದ್ರನ ದಕ್ಷಿಣ ಧ್ರುವದಲ್ಲಿ ಇಳಿಸುವ ಮೂಲಕ ಐತಿಹಾಸಿಕ ಸಾಧನೆ ಮಾಡುವುದರೊಂದಿಗೆ ಯೂಟ್ಯೂಬ್‌ನಲ್ಲೂ ‘ಇಸ್ರೋ’ ಹೊಸ ಮೈಲುಗಲ್ಲು ಸೃಷ್ಟಿಸಿದೆ.

ಸುಮಾರು 80 ಲಕ್ಷ ಜನರು ಇಸ್ರೋವಿನ ಅಧಿಕೃತ ಯೂಟ್ಯೂಬ್‌ ಚಾನೆಲ್‌ನ ನೇರಪ್ರಸಾರವನ್ನು ವೀಕ್ಷಿಸುವ ಮೂಲಕ ‘ಇಸ್ರೋ’ ಸಾಧನೆಗೆ ಸಾಕ್ಷಿಯಾಗಿದ್ದಾರೆ.

ಯೂಟ್ಯೂಬ್‌ನ ಇತಿಹಾಸದಲ್ಲಿ ನೇರಪ್ರಸಾರವನ್ನು 80 ಲಕ್ಷ ಜನ ವೀಕ್ಷಿಸಿದ್ದು, ಯುಟ್ಯೂಬ್‌ನ ಇತಿಹಾಸದಲ್ಲಿ ಇಷ್ಟೊಂದು ಸಂಖ್ಯೆಯ ಮಂದಿ ನೇರಪ್ರಸಾರವನ್ನು ವೀಕ್ಷಿಸಿದ್ದು ಇದೇ ಮೊದಲು ಎಂದು ವರದಿಯಾಗಿದೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಈ ಬಗ್ಗೆ ಮುಫದ್ದಲ್ ವೋಹ್ರಾ ಎಂಬವರು ಟ್ವೀಟ್ ಮಾಡಿದ್ದು, ‘ಇಸ್ರೋದ ಯೂಟ್ಯೂಬ್ ಚಾನೆಲ್‌ನಲ್ಲಿ 8M(80 ಲಕ್ಷ) ಚಂದ್ರನ ಮೇಲೆ ಇಳಿಯುತ್ತಿರುವ ದೃಶ್ಯವನ್ನು ನೇರಪ್ರಸಾರದಲ್ಲಿ ವೀಕ್ಷಿಸಿದ್ದಾರೆ. ಇದು ಯೂಟ್ಯೂಬ್‌ನ ‘ಲೈವ್ ಇತಿಹಾಸದಲ್ಲಿ ಅತ್ಯಧಿಕ ಗರಿಷ್ಠ ವೀಕ್ಷಕರ ದಾಖಲೆಯಾಗಿದೆ’ ಎಂದು ಮಾಹಿತಿ ಹಂಚಿಕೊಂಡಿದ್ದಾರೆ.

ಈ ಮೊದಲು ಸ್ಪ್ಯಾನಿಷ್ ಸ್ಟ್ರೀಮರ್ ಇಬಾಯ್ ಅವರ 34 ಲಕ್ಷ ವೀಕ್ಷಕರ ವಿಶ್ವ ದಾಖಲೆಯನ್ನು ಮುರಿದಿದೆ ಎಂದು ಇನ್ನೊಂದು ವರದಿ ತಿಳಿಸಿದೆ.

ಕಳೆದ ಜುಲೈ 14ರಂದು ಆಂಧ್ರದ ಶ್ರೀಹರಿ ಕೋಟಾದಿಂದ ಉಡಾವಣೆ ಮಾಡಿದ್ದ ಚಂದ್ರಯಾನ-3 ನೌಕೆಯ ‘ವಿಕ್ರಮ್ ಲ್ಯಾಂಡರ್’ ಯಶಸ್ವಿಯಾಗಿ ಚಂದ್ರನ ಮೇಲೆ ಇಳಿದಿದೆ. ಆ ಮೂಲಕ ಕೋಟ್ಯಂತರ ಭಾರತೀಯರ ಪ್ರಾರ್ಥನೆ ಫಲಿಸಿದೆ. ಈ ಐತಿಹಾಸಿಕ ಕ್ಷಣಕ್ಕೆ ಇಡೀ ವಿಶ್ವವೇ ಸಾಕ್ಷಿಯಾಯಿತು.

ಸಂಜೆ 6:03ಕ್ಕೆ ‘ವಿಕ್ರಮ್ ಲ್ಯಾಂಡರ್’ ಅನ್ನು ಯಶಸ್ವಿಯಾಗಿ ಚಂದ್ರನ ದಕ್ಷಿಣ ಧ್ರುವ ಮೇಲ್ಮೈನಲ್ಲಿ ಇಳಿದಿದೆ. ಈ ಮೂಲಕ ಭಾರತ ಐತಿಹಾಸಿಕ ಸಾಧನೆ ಮಾಡಿದೆ. ಚಂದ್ರನ ದಕ್ಷಿಣ ಧ್ರುವದಲ್ಲಿ ಲ್ಯಾಂಡ್ ಮಾಡಿದ ಮೊದಲ ದೇಶ ಎಂಬ ಹೆಗ್ಗಳಿಕೆ ಭಾರತದ ಪಾಲಾಗಿದೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಲೋಕಪಾಲ್‌ ಮುಖ್ಯಸ್ಥರಾಗಿ ಸುಪ್ರೀಂ ಕೋರ್ಟ್‌ನ ಮಾಜಿ ನ್ಯಾಯಮೂರ್ತಿ ಎ ಎಂ ಖಾನ್ವಿಲ್ಕರ್ ನೇಮಕ

ಸುಪ್ರೀಂ ಕೋರ್ಟ್‌ನ ಮಾಜಿ ನ್ಯಾಯಮೂರ್ತಿ ಅಜಯ್ ಮಾಣಿಕ್‌ ರಾವ್ ಖಾನ್ವಿಲ್ಕರ್ ಅವರನ್ನು...

ಉತ್ತರ ಪ್ರದೇಶ | ದೇಶದ ಹಿರಿಯ ಎಸ್‌ಪಿ ಸಂಸದ ಶಫೀಕುರ್ ರೆಹಮಾನ್ ಬರ್ಕ್ ನಿಧನ

ದೇಶದ ಹಿರಿಯ ಸಂಸದರಾಗಿದ್ದ ಉತ್ತರ ಪ್ರದೇಶದ ಸಮಾಜವಾದಿ ಪಕ್ಷದ ಸಂಸದ ಶಫೀಕುರ್...

ಬಾಬಾ ರಾಮ್‌ದೇವ್‌ ಮಾಲೀಕತ್ವದ ಪತಂಜಲಿಯ ಜಾಹೀರಾತಿಗೆ ನಿಷೇಧ ಹೇರಿದ ಸುಪ್ರೀಂ ಕೋರ್ಟ್

ಕೇಂದ್ರ ಸರ್ಕಾರ ಕಣ್ಮುಚ್ಚಿ ಕುಳಿತಿದೆಯೇ? ಸುಪ್ರೀಂ ಕೋರ್ಟ್‌ ಗರಂ ಸುಪ್ರೀಂ...

ಮಧ್ಯ ಪ್ರದೇಶ | ಕೆಲಸ ಕಳೆದುಕೊಳ್ಳುವ ಭಯ: ಪೇಟಿಎಂ ಪೇಮೆಂಟ್ಸ್ ಬ್ಯಾಂಕ್ ಉದ್ಯೋಗಿ ಆತ್ಮಹತ್ಯೆ

ಮಧ್ಯಪ್ರದೇಶದ ಇಂದೋರ್‌ನಲ್ಲಿ ಉದ್ಯೋಗ ಕಳೆದುಕೊಳ್ಳುವ ಭೀತಿಯಿಂದ ಪೇಟಿಎಂ ಪೇಮೆಂಟ್ಸ್ ಬ್ಯಾಂಕ್ ಲಿಮಿಟೆಡ್‌ನ...