ಹಿರಿಯ ಬಾಲಿವುಡ್‌ ನಟ ನಿತೇಶ್‌ ಪಾಂಡೆ ನಿಧನ

Date:

Advertisements

ನಿತೇಶ್‌ ಪಾಂಡೆಗೆ ಹೃದಯಾಘಾತವಾಗಿರಬಹುದು ಎಂದ ಪೊಲೀಸರು

ನಟನಿಗೆ ಹೃದಯ ಸಂಬಂಧಿ ಸಮಸ್ಯೆ ಇರಲಿಲ್ಲವೆಂದ ಸಂಬಂಧಿಗಳು

ಬಾಲಿವುಡ್‌ನ ಹಿರಿಯ ನಟ ನಿತೇಶ್‌ ಪಾಂಡೆ ಬುಧವಾರ ಖಾಸಗಿ ಹೋಟೆಲ್‌ವೊಂದರಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. 50 ವರ್ಷದ ನಿತೇಶ್‌ ಹೃದಯಾಘಾತದಿಂದ ಮೃತಪಟ್ಟಿರುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.

Advertisements

ನಿತೇಶ್‌ ಮಹಾರಾಷ್ಟ್ರದ ನಾಸಿಕ ಜಿಲ್ಲೆಯ ಇಗಟ್‌ಪುರಿಯಲ್ಲಿ ಸಿನಿಮಾ ಶೂಟಿಂಗ್‌ ಸಿನಿಮಾ ತೊಡಗಿಕೊಂಡಿದ್ದರು. ಶೂಟಿಂಗ್‌ಗಾಗಿ ಖಾಸಗಿ ಹೋಟೆಲ್‌ನಲ್ಲಿ ತಂಗಿದ್ದ ಅವರು ಬುಧವಾರ ಬೆಳಗ್ಗೆ ಅದೇ ಹೋಟೆಲ್‌ ರೂಮಿನಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿರುವ ಪೊಲೀಸರು ಹೃದಯಾಘಾತದಿಂದ ನಿತೇಶ್‌ ಸಾವನ್ನಪ್ಪಿರುವ ಸಾಧ್ಯತೆ ಇದೆ ಎಂದು ಅಭಿಪ್ರಾಯ ಪಟ್ಟಿದ್ದಾರೆ.

ಘಟನೆಗೆ ಸಂಬಂಧಿಸಿ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ನಿತೇಶ್‌ ವಾಸ್ತವ್ಯ ಹೂಡಿದ್ದ ಹೋಟೆಲ್‌ನ ಸಿಬ್ಬಂದಿ ಮತ್ತು ಚಿತ್ರತಂಡದವರ ವಿಚಾರಣೆ ನಡೆಸುತ್ತಿದ್ದಾರೆ. ಸದ್ಯ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದ್ದು, ಪರೀಕ್ಷೆಯ ವರದಿ ಬಂದ ನಂತರವೇ ನಟನ ಸಾವಿಗೆ ಕಾರಣ ಏನೆಂಬುದು ಬಹಿರಂಗವಾಗಲಿದೆ.

ನಿತೇಶ್‌ ಅವರ ಸಾವಿನ ಸುದ್ದಿಯನ್ನು ಖಚಿತಪಡಿಸಿರುವ ಅವರ ಸಂಬಂಧಿ ಸಿದ್ಧಾರ್ಥ್‌ ನಾಗರ್‌, “ನಿತೇಶ್‌ ನಿಧನದ ಸುದ್ದಿಯಿಂದ ನನ್ನ ಸಹೋದರಿ ಅರ್ಪಿತಾ (ನಿತೇಶ್‌ ಪತ್ನಿ) ಅಘಾತಕ್ಕೊಳಗಾಗಿದ್ದಾರೆ. ಅವರಿಗೆ ಹೃದಯ ಸಂಬಂಧಿ ಸಮಸ್ಯೆಗಳು ಇರಲಿಲ್ಲ” ಎಂದಿದ್ದಾರೆ. ಬಾಲಿವುಡ್‌ನ ಹಲವು ನಟ, ನಟಿಯರು ಕೂಡ ಹಿರಿಯ ನಟನ ಸಾವಿಗೆ ಕಂಬನಿ ಮಿಡಿದಿದ್ದಾರೆ.

ಈ ಸುದ್ದಿ ಓದಿದ್ದೀರಾ? ಮಹಿಳಾ ಕುಸ್ತಿಪಟುಗಳು ರಸ್ತೆಗಿಳಿಯಲು ಮೋದಿ ಕಾರಣ : ಕಿಶೋರ್‌ ಕುಮಾರ್‌

ರಂಗಭೂಮಿ ಹಿನ್ನೆಲೆಯ ನಿತೇಶ್‌, 1995ರಲ್ಲಿ ಹಿಂದಿ ಕಿರುತೆರೆಯಲ್ಲಿ ಪ್ರಸಾರವಾಗುತ್ತಿದ್ದ ಜನಪ್ರಿಯ ಧಾರಾವಾಹಿ ತೇಜಸ್‌ನಲ್ಲಿ ಗೂಢಾಚಾರಿಯ ಪಾತ್ರದಲ್ಲಿ ನಟಿಸುವ ಮೂಲಕ ಹಿಂದಿ ಚಿತ್ರರಂಗ ಪ್ರವೇಶಿಸಿದರು. ಆಮಿರ್‌ ಖಾನ್‌ ನಟನೆಯ ʼಬಾಜಿʼ, ʼಖೋಸ್ಲಾ ಕಾ ಗೋಸ್ಲಾʼ, ʼಓಂ ಶಾಂತಿ ಓಂʼ, ದಬಾಂಗ್‌-2, ʼಬದಾಯಿ ದೋʼ ಸೇರಿಂದತೆ ಹಲವು ಚಿತ್ರಗಳು ಮತ್ತು ಕಿರುತೆರೆ ಧಾರಾವಾಹಿಗಳಲ್ಲಿ ನಟಿಸುವ ಮೂಲಕ ಜನಪ್ರಿಯತೆ ಗಳಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಬಣದಲ್ಲಿ ಅಸಮಾಧಾನ : ಎಂಎಲ್ ಸಿ ಕಾರು ತಡೆ ವಾಗ್ವಾದ

ಎಂಎಲ್ ಸಿ ಶರಣಗೌಡ ಪಾಟೀಲ್‌ ಅವರ ಕಾರಿಗೆ ಡಿ ಎಸ್ ಹುಲಗೇರಿ...

ಕಲಬುರಗಿ | ಮೂರು ತಿಂಗಳಿಂದ ಪಾವತಿಯಾಗದ ʼಗೃಹಲಕ್ಷ್ಮೀʼ ಹಣ : ವೆಲ್ಫೇರ್ ಪಾರ್ಟಿ ಆಕ್ರೋಶ

ಕರ್ನಾಟಕ ರಾಜ್ಯ ಸರ್ಕಾರ ಜಾರಿಗೊಳಿಸಿದ ಪಂಚ ಗ್ಯಾರಂಟಿಯ ಗೃಹಲಕ್ಷ್ಮೀ ಯೋಜನೆಯ ಹಣ...

ಬೆಳಗಾವಿ : ಮೂರು ವರ್ಷದ ಹೆಣ್ಣು ಮಗುವನ್ನು ಆಸ್ಪತ್ರೆಯಲ್ಲಿ ಬಿಟ್ಟು ಹೋದ ತಂದೆ ತಾಯಿ

ತಾಯಿಯ ಮಡಿಲಿಗೆ ತವಕಿಸುತ್ತಿರುವ ಮೂರು ವರ್ಷದ ಹೆಣ್ಣುಮಗುವನ್ನು ಆಸ್ಪತ್ರೆಯಲ್ಲಿ ತಂದೆ ತಾಯಿಗಳು...

Download Eedina App Android / iOS

X