‘ಫುಲೆ’ ವಿವಾದ | ಬಿಜೆಪಿ-ಆರ್‌ಎಸ್‌ಎಸ್ ದಲಿತ-ಬಹುಜನ ಇತಿಹಾಸವನ್ನು ಅಳಿಸಿಹಾಕಲು ಬಯಸಿದೆ: ರಾಹುಲ್ ಗಾಂಧಿ

Date:

‘ಪುಲೆ’ ಚಿತ್ರದ ವಿವಾದದ ಬಗ್ಗೆ ಶುಕ್ರವಾರ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಬಿಜೆಪಿ-ಆರ್‌ಎಸ್‌ಎಸ್ ಅನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಜಾತಿ ತಾರತಮ್ಯ ಮತ್ತು ಅನ್ಯಾಯದ ನಿಜವಾದ ಸತ್ಯ ಮುನ್ನೆಲೆಗೆ ಬರದಂತೆ ಅವರು (ಬಿಜೆಪಿ, ಆರ್‌ಎಸ್‌ಎಸ್‌) ಪ್ರತಿ ಹಂತದಲ್ಲೂ ದಲಿತ-ಬಹುಜನ ಇತಿಹಾಸವನ್ನು ಅಳಿಸಿಹಾಕಲು ಬಯಸಿದ್ದಾರೆ ಎಂದು ರಾಹುಲ್ ಆರೋಪಿಸಿದ್ದಾರೆ.

- Advertisement -

‘ಫುಲೆ’ ಸಿನಿಮಾ ಸಮಾಜ ಸುಧಾರಕರಾದ ಜ್ಯೋತಿರಾವ್ ಗೋವಿಂದರಾವ್ ಫುಲೆ ಮತ್ತು ಅವರ ಪತ್ನಿ ಸಾವಿತ್ರಿಬಾಯಿ ಫುಲೆ ಅವರ ಜೀವನವನ್ನು ಆಧರಿಸಿದ ಸಿನಿಮಾವಾಗಿದೆ. ಈ ಸಿನಿಮಾದ ಕೆಲವು ದೃಶ್ಯಗಳಿಗೆ ಕತ್ತರಿ ಹಾಕಲು ಸೆನ್ಸಾರ್ ಮಂಡಳಿ ಸೂಚಿಸಿದೆ. ಆದರೆ ಚಿತ್ರದ ನಿರ್ದೇಶಕ ಅನಂತ್ ಮಹಾದೇವನ್, “ಬ್ರಾಹ್ಮಣ ಸಮುದಾಯದಿಂದ ಬಂದ ಆಕ್ಷೇಪಣೆಗಳಿಂದಾಗಿ ಇದು ವಿಳಂಬವಾಗಿದೆ ಮತ್ತು ಸೆನ್ಸಾರ್ ಮಂಡಳಿ ತಿದ್ದುಪಡಿಗಳನ್ನು ಸೂಚಿಸಿದ್ದರಿಂದ ಅಲ್ಲ” ಎಂದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಇದನ್ನು ಓದಿದ್ದೀರಾ? ಜ್ಯೋತಿಬಾ ಜನ್ಮದಿನ | ಬ್ರಾಹ್ಮಣಶಾಹಿ ವಿರುದ್ಧ ಹೋರಾಟ ನಡೆಸಿದವರು ಮಹಾತ್ಮ ಫುಲೆ

ಈ ಬಗ್ಗೆ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್ ಗಾಂಧಿ, “ಒಂದೆಡೆ, ಬಿಜೆಪಿ-ಆರ್‌ಎಸ್‌ಎಸ್ ನಾಯಕರು ಫುಲೆ ಅವರಿಗೆ ಮೇಲ್ನೋಟಕ್ಕೆ ಗೌರವ ಸಲ್ಲಿಸುತ್ತಾರೆ. ಮತ್ತೊಂದೆಡೆ, ಅವರು ಫುಲೆ ಅವರ ಜೀವನದ ಮೇಲೆ ನಿರ್ಮಿಸಲಾದ ಚಿತ್ರವನ್ನು ಸೆನ್ಸಾರ್ ಮಾಡುತ್ತಿದ್ದಾರೆ” ಎಂದು ಹೇಳಿದ್ದಾರೆ.

“ಮಹಾತ್ಮ ಫುಲೆ ಮತ್ತು ಸಾವಿತ್ರಿಬಾಯಿ ಫುಲೆ ತಮ್ಮ ಇಡೀ ಜೀವನವನ್ನು ಜಾತಿವಾದದ ವಿರುದ್ಧದ ಹೋರಾಟಕ್ಕೆ ಮುಡಿಪಾಗಿಟ್ಟರು. ಆದರೆ ಸರ್ಕಾರ ಆ ಹೋರಾಟ ಮತ್ತು ಅದರ ಐತಿಹಾಸಿಕ ಸಂಗತಿಗಳು ತೆರೆಯ ಮೇಲೆ ಬರುವುದನ್ನು ಬಯಸುವುದಿಲ್ಲ” ಎಂದು ಆರೋಪಿಸಿದ್ದಾರೆ.

ಪ್ರತೀಕ್ ಗಾಂಧಿ ಜ್ಯೋತಿಬಾ ಫುಲೆಯಾದರೆ, ಪತ್ರಲೇಖಾ ಸಾವಿತ್ರಿಬಾಯಿ ಜ್ಯೋತಿಬಾ ಫುಲೆಯಾಗಿ ನಟಿಸಿರುವ ‘ಫುಲೆ’ ಸಿನಿಮಾ ಶುಕ್ರವಾರ ಬಿಡುಗಡೆಯಾಗಬೇಕಿತ್ತು. ಆದರೆ ಏಪ್ರಿಲ್ 25 ರಂದು ಚಿತ್ರಮಂದಿರಗಳಿಗೆ ಬರಲಿದೆ.

ಕೇಂದ್ರ ಚಲನಚಿತ್ರ ಪ್ರಮಾಣೀಕರಣ ಮಂಡಳಿ (ಸಿಬಿಎಫ್‌ಸಿ) ಏಪ್ರಿಲ್ 7 ರಂದು ನಿರ್ಮಾಪಕರಿಗೆ ‘ಯು’ ಪ್ರಮಾಣಪತ್ರವನ್ನು ನೀಡಿದೆ. ಆದರೆ ಸಿನಿಮಾದಲ್ಲಿ ಹಲವು ದೃಶ್ಯಗಳಿಗೆ ಕತ್ತರಿ ಹಾಕುವಂತೆ ಸೂಚಿಸಿದ್ದಾರೆ. ಏಪ್ರಿಲ್ 10 ರಂದು ಟ್ರೇಲರ್ ಆನ್‌ಲೈನ್‌ನಲ್ಲಿ ಬಿಡುಗಡೆಯಾದ ನಂತರ, ಬ್ರಾಹ್ಮಣ ಸಮುದಾಯದ ಕೆಲವರು ತಮ್ಮನ್ನು ಕೆಟ್ಟದಾಗಿ ಚಿತ್ರಿಸಲಾಗಿದೆ ಎಂದು ಹೇಳಿ ಆಕ್ಷೇಪಣೆ ವ್ಯಕ್ತಪಡಿಸಿದರು.

ಮಹಾರಾಷ್ಟ್ರ ಮೂಲದ ಸಂಘಟನೆ ಹಿಂದೂ ಮಹಾಸಂಘದ ಅಧ್ಯಕ್ಷ ಆನಂದ್ ದಾವೆ ಟ್ರೇಲರ್ ವೀಕ್ಷಿಸಿದ ನಂತರ ತಮ್ಮ ಅಸಮಾಧಾನ ವ್ಯಕ್ತಪಡಿಸಿದರು. ಬ್ರಾಹ್ಮಣ ಸಮುದಾಯದ ಬಗ್ಗೆ ಅಷ್ಟು ಕೆಟ್ಟದಾಗಿ ತೋರಿಸಿರುವುದು ಅನ್ಯಾಯ ಎಂದು ಹೇಳಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಗಲಕೋಟೆ | ಸವಿತಾ ಸಮಾಜ ಅಭಿವೃದ್ಧಿ ನಿಗಮದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ

ಬಾಗಲಕೋಟೆಯ ಸವಿತಾ ಸಮಾಜ ಹಾಗೂ ಅದರ ಉಪಜಾತಿಗಳಿಗೆ ಸೇರಿದ ನಿರುದ್ಯೋಗಿಗಳು ಮತ್ತು...

ಕೊಲ್ಹಾರ | ಮೂರು ದಶಕವಾದರೂ ಮುಳುಗಡೆ ಸಂತ್ರಸ್ತರಿಗೆ ಸಿಗದ ಹಕ್ಕುಪತ್ರ

1996ರಲ್ಲಿ ಕೃಷ್ಣ ಮೇಲ್ದಂಡೆ ಯೋಜನೆಗಾಗಿ ಭೂಮಿ ಕಳೆದುಕೊಂಡ ವಿಜಯಪುರ ಜಿಲ್ಲೆಯ ಕೊಲ್ಹಾರದ...

ಚಿಕ್ಕಮಗಳೂರು | ಬಣಕಲ್; ಸ.ಮಾ.ಹಿ ಪ್ರಾ. ಶಾಲೆಯಲ್ಲಿ ಕಾನೂನು ಅರಿವು ಕಾರ್ಯಕ್ರಮ 

ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಬಣಕಲ್ ಹೋಬಳಿಯ ಸರ್ಕಾರಿ ಮಾದರಿ ಹಿರಿಯ...

ಬರಕ್ಕೆ ಮಾನದಂಡ ಮುಖ್ಯವೋ, ಬದುಕು ಮುಖ್ಯವೋ?: ಸಿ. ಬೈರೇಗೌಡರ ಪ್ರಶ್ನೆ ಇಂದಿಗೂ ಪ್ರಸ್ತುತ

ಬರ ಮೊದಲು ರೈತನ ಹೊಲದಲ್ಲಿ ಕಾಣಿಸುತ್ತದೆ. ನಂತರ ಅವನ ಸಾಲ, ಮನೆಯ...