ಮಾಲೆಗಾಂವ್‌ ಪ್ರಕರಣ | ವಿಚಾರಣೆಗೆ ಬಾರದಿದ್ದರೆ ಕ್ರಮ; ಪ್ರಮುಖ ಆರೋಪಿ ಪ್ರಜ್ಞಾ ಸಿಂಗ್‌ಗೆ ಕೋರ್ಟ್‌ ಎಚ್ಚರಿಕೆ

Date:

“ಒಂದೋ ವಿಚಾರಣೆಗೆ ಹಾಜರಾಗಿ, ಇಲ್ಲವೇ ಸೂಕ್ತ ಕ್ರಮ ಎದುರಿಸಲು ಸಿದ್ಧರಾಗಿ”…ಹೀಗಂತ ಹೇಳಿದ್ದು ರಾಷ್ಟ್ರೀಯ ತನಿಖಾ ದಳ ಎನ್‌ಐಎ ವಿಶೇಷ ನ್ಯಾಯಾಲಯ. 2008ರ ಮಾಲೆಗಾಂವ್ ಸ್ಫೋಟ ಪ್ರಕರಣದ ಪ್ರಮುಖ ಆರೋಪಿ ಹಾಗೂ ಬಿಜೆಪಿ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್ ಅವರಿಗೆ.

2008ರ ಮಾಲೆಗಾಂವ್ ಸ್ಫೋಟ ಪ್ರಕರಣದ ಆರೋಪಿಯಾಗಿರುವ ಬಿಜೆಪಿ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್ ಅವರಿಗೆ ಖುದ್ದಾಗಿ ನ್ಯಾಯಾಲಯಕ್ಕೆ ಹಾಜರಾಗಿ ಹೇಳಿಕೆ ನೀಡುವಂತೆ ಎನ್‌ಐಎ ವಿಶೇಷ ನ್ಯಾಯಾಲಯ ತಿಳಿಸಿತ್ತು. ಆದರೆ, ಫೆಬ್ರವರಿ 22ರಂದು ವೈದ್ಯಕೀಯ ಕಾರಣಗಳಿಗಾಗಿ ದಿನಕ್ಕೆ ವಿನಾಯಿತಿ ನೀಡುವಂತೆ ಪ್ರಜ್ಞಾ ಠಾಕೂರ್ ಅವರ ಮನವಿ ಮಾಡಿದ್ದರು.

ಈ ಮನವಿಯನ್ನು ಪುರಸ್ಕರಿಸಿದ್ದ ಎನ್‌ಐಎ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಎಕೆ ಲಹೋಟಿ ಅವರು, “ಮಂಗಳವಾರ(ಫೆ.27)ದಿಂದ ನ್ಯಾಯಾಲಯಕ್ಕೆ ಹಾಜರಾಗಿ ಹೇಳಿಕೆ ನೀಡಬೇಕು. ಒಂದು ವೇಳೆ ಇದಕ್ಕೆ ತಪ್ಪಿದಲ್ಲಿ ಅಗತ್ಯ ಕ್ರಮ ತೆಗೆದುಕೊಳ್ಳುತ್ತೇವೆ” ಎಂದು ಖಡಕ್ ಎಚ್ಚರಿಕೆ ನೀಡಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

2008ರ ಮಾಲೆಗಾಂವ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿ, ರಾಷ್ಟ್ರೀಯ ತನಿಖಾ ಸಂಸ್ಥೆ ನ್ಯಾಯಾಲಯವು ಆರೋಪಿಗಳ ಹೇಳಿಕೆಗಳನ್ನು ದಾಖಲಿಸಿಕೊಳ್ಳುತ್ತಿದೆ. ಆದರೆ, ಪ್ರಮುಖ ಆರೋಪಿಯಾಗಿರುವ ಬಿಜೆಪಿ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್ ನಿರಂತರವಾಗಿ ವೈದ್ಯಕೀಯ ಕಾರಣವೊಡ್ಡಿ, ನ್ಯಾಯಾಲಯಕ್ಕೆ ಹಾಜರಾಗುವುದರಿಂದ ತಪ್ಪಿಸಿಕೊಳ್ಳುತ್ತಿದ್ದಾರೆ. ಆದರೂ, ಸಾರ್ವಜನಿಕ ಕಾರ್ಯಕ್ರಮದಲ್ಲಿ ಭಾಗಿಯಾಗುತ್ತಲೇ ಇದ್ದಾರೆ.

ಈಗ ಇದೇ ಕಾರಣವನ್ನು ಉಲ್ಲೇಖಿಸಿ ಮತ್ತೆ ಅರ್ಜಿ ಸಲ್ಲಿಸಿದ್ದನ್ನು ವಿಚಾರಣೆ ನಡೆಸಿದ ವೇಳೆ ನ್ಯಾಯಾಧೀಶ ಎಕೆ ಲಹೋಟಿ, “ಫೆಬ್ರವರಿ 27ರಿಂದ ತಪ್ಪದೆ ನ್ಯಾಯಾಲಯಕ್ಕೆ ಬರಬೇಕು. ಒಂದು ವೇಳೆ ಬಾರದೇ ಇದ್ದಲ್ಲಿ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಲಾಗುವುದು” ಎಂದು ಸದ್ಯ ಭೋಪಾಲ್‌ನ ಸಂಸದೆಯೂ ಆಗಿರುವ ಪ್ರಜ್ಞಾ ಸಿಂಗ್ ಠಾಕೂರ್‌ಗೆ ಎಚ್ಚರಿಕೆ ನೀಡಿದ್ದಾರೆ.

“ಆರೋಪಿಗಳು ಮುಂಬೈನಲ್ಲಿಯೇ ಇರಬೇಕೆಂದು ಹೇಳುತ್ತಿಲ್ಲ. ಒಂದು ವೇಳೆ ಅನಾರೋಗ್ಯವಿದ್ದರೆ ಅವರು ಮುಂಬೈನಲ್ಲೂ ಔಷಧಿಗಳನ್ನು ಪಡೆಯಬಹುದು” ಎಂದು ನ್ಯಾಯಾಲಯವು ತಿಳಿಸಿದೆ.

ಏನಿದು ಪ್ರಕರಣ?

ಸೆಪ್ಟೆಂಬರ್ 29, 2008 ರಂದು ಉತ್ತರ ಮಹಾರಾಷ್ಟ್ರದ ಮುಂಬೈನಿಂದ ಸುಮಾರು 200 ಕಿಮೀ ದೂರದಲ್ಲಿರುವ ಮಾಲೆಗಾಂವ್ ಎಂಬ ಪಟ್ಟಣದ ಮಸೀದಿಯ ಬಳಿ ಮೋಟಾರ್ ಸೈಕಲ್‌ನಲ್ಲಿ ಸ್ಫೋಟಕ ಸಾಧನವನ್ನು ಇಡಲಾಗಿತ್ತು. ಇದು ಸ್ಫೋಟಗೊಂಡಾಗ ಆರು ಜನರು ಸಾವನ್ನಪ್ಪಿದ್ದರು ಮತ್ತು 100ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದರು.

2011ರಲ್ಲಿ ಈ ಪ್ರಕರಣವನ್ನು ಎನ್‌ಐಎಗೆ ವರ್ಗಾಯಿಸುವ ಮೊದಲು ಮಹಾರಾಷ್ಟ್ರ ಭಯೋತ್ಪಾದನಾ ನಿಗ್ರಹ ದಳವು ತನಿಖೆ ನಡೆಸುತ್ತಿತ್ತು.

ಡಿಸೆಂಬರ್ 2018ರಿಂದ ಮಾಲೆಗಾಂವ್ ಸ್ಫೋಟ ಪ್ರಕರಣದ ವಿಚಾರಣೆ ನಡೆಯುತ್ತಿದೆ. ಈವರೆಗೆ 323ಕ್ಕೂ ಹೆಚ್ಚು ಸಾಕ್ಷ್ಯಗಳನ್ನು ಸರ್ಕಾರದ ಪರ ವಕೀಲರು ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದು, ಎಲ್ಲರ ಸಾಕ್ಷ್ಯ ಸಂಗ್ರಹ ಮಾಡಲಾಗಿದೆ. ಸದ್ಯದ ಮಟ್ಟಿಗೆ ಸರ್ಕಾರಿ ಪರ ವಕೀಲರ ಸಾಕ್ಷ್ಯ ಸಂಗ್ರಹ ಮುಕ್ತಾಯಗೊಂಡಿದ್ದು, ಆರೋಪಿಗಳು ಈ ಸಾಕ್ಷ್ಯಗಳ ವಿರುದ್ಧವಾಗಿ ತಮ್ಮ ಅಭಿಪ್ರಾಯ ಮಂಡಿಸಲು ಅವಕಾಶ ನೀಡಲಾಗಿದೆ.

ಈ ಪ್ರಕರಣದಲ್ಲಿ ಬಿಜೆಪಿ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್, ಲೆಫ್ಟಿನೆಂಟ್ ಕರ್ನಲ್ ಪ್ರಸಾದ್ ಪುರೋಹಿತ್, ನಿವೃತ್ತ ಮೇಜರ್ ರಮೇಶ್ ಉಪಾಧ್ಯ, ಅಜಯ್ ರಹೀರ್‌ಕರ್, ಸುಧಾಕರ್ ಚತುರ್ವೇದಿ, ಸುಧಾಕರ್ ದ್ವಿವೇದಿ ಹಾಗೂ ಸಮೀರ್ ಕುಲಕರ್ಣಿ ಆರೋಪಿಗಳಾಗಿದ್ದು, ಎಲ್ಲರ ವಿರುದ್ಧ ಐಪಿಸಿ ಹಾಗೂ ಯುಎಪಿಎ ಕಾಯ್ದೆ ಅಡಿ ಪ್ರಕರಣ ದಾಖಲಾಗಿದೆ.

ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಲೋಕಪಾಲ್‌ ಮುಖ್ಯಸ್ಥರಾಗಿ ಸುಪ್ರೀಂ ಕೋರ್ಟ್‌ನ ಮಾಜಿ ನ್ಯಾಯಮೂರ್ತಿ ಎ ಎಂ ಖಾನ್ವಿಲ್ಕರ್ ನೇಮಕ

ಸುಪ್ರೀಂ ಕೋರ್ಟ್‌ನ ಮಾಜಿ ನ್ಯಾಯಮೂರ್ತಿ ಅಜಯ್ ಮಾಣಿಕ್‌ ರಾವ್ ಖಾನ್ವಿಲ್ಕರ್ ಅವರನ್ನು...

ಉತ್ತರ ಪ್ರದೇಶ | ದೇಶದ ಹಿರಿಯ ಎಸ್‌ಪಿ ಸಂಸದ ಶಫೀಕುರ್ ರೆಹಮಾನ್ ಬರ್ಕ್ ನಿಧನ

ದೇಶದ ಹಿರಿಯ ಸಂಸದರಾಗಿದ್ದ ಉತ್ತರ ಪ್ರದೇಶದ ಸಮಾಜವಾದಿ ಪಕ್ಷದ ಸಂಸದ ಶಫೀಕುರ್...

ಬಾಬಾ ರಾಮ್‌ದೇವ್‌ ಮಾಲೀಕತ್ವದ ಪತಂಜಲಿಯ ಜಾಹೀರಾತಿಗೆ ನಿಷೇಧ ಹೇರಿದ ಸುಪ್ರೀಂ ಕೋರ್ಟ್

ಕೇಂದ್ರ ಸರ್ಕಾರ ಕಣ್ಮುಚ್ಚಿ ಕುಳಿತಿದೆಯೇ? ಸುಪ್ರೀಂ ಕೋರ್ಟ್‌ ಗರಂ ಸುಪ್ರೀಂ...

ಮಧ್ಯ ಪ್ರದೇಶ | ಕೆಲಸ ಕಳೆದುಕೊಳ್ಳುವ ಭಯ: ಪೇಟಿಎಂ ಪೇಮೆಂಟ್ಸ್ ಬ್ಯಾಂಕ್ ಉದ್ಯೋಗಿ ಆತ್ಮಹತ್ಯೆ

ಮಧ್ಯಪ್ರದೇಶದ ಇಂದೋರ್‌ನಲ್ಲಿ ಉದ್ಯೋಗ ಕಳೆದುಕೊಳ್ಳುವ ಭೀತಿಯಿಂದ ಪೇಟಿಎಂ ಪೇಮೆಂಟ್ಸ್ ಬ್ಯಾಂಕ್ ಲಿಮಿಟೆಡ್‌ನ...