ಬೀದರ್‌ ಸಹಕಾರ ಸಕ್ಕರೆ ಕಾರ್ಖಾನೆ ಹರಾಜು ರದ್ದು, ಲೀಸ್‌ಗೆ ನೀಡಲು ಸಿಎಂ ಭರವಸೆ : ಶ್ರೀಮಂತ ಬಿರಾದರ್

Date:

ಬೀದರ್ ಜಿಲ್ಲೆಯ ರೈತರು‌, ಕಾರ್ಮಿಕರ ಜೀವನಾಡಿಯಾಗಿರುವ ಬೀದರ್‌ ಸಹಕಾರ ಸಕ್ಕರೆ ಕಾರ್ಖಾನೆ (ಬಿಎಸ್‌ಎಸ್‌ಕೆ) ಹರಾಜು ಪ್ರಕ್ರಿಯೆ ರದ್ದುಗೊಳಿಸಿ, ಕಾರ್ಖಾನೆಯನ್ನು ಲೀಸ್ ಆಧಾರದ ಮೇಲೆ ಪುನರಾರಂಭಿಸಲು ಸಿಎಂ ಡಿ.ಕೆ.ಶಿವಕುಮಾರ ಅವರು ಭರವಸೆ ನೀಡಿದ್ದಾರೆ ಎಂದು ಕರ್ನಾಟಕ ರಾಜ್ಯ ರೈತ ಸಂಘದ ಜಿಲ್ಲಾಧ್ಯಕ್ಷ ಶ್ರೀಮಂತ ಬಿರಾದಾರ ಹೇಳಿದರು.

- Advertisement -

ಬೀದರ್ ನಗರದ ಜಿಲ್ಲಾ ಪತ್ರಿಕಾ ಭವನದಲ್ಲಿ ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, “‌ಸಾಲ ಸುಳಿಯಲ್ಲಿ ಸಿಲುಕಿ ಕಳೆದ ಐದಾರು ವರ್ಷಗಳಿಂದ ಕೆಲಸ ನಿಲ್ಲಿಸಿದ ಸಕ್ಕರೆ ಕಾರ್ಖಾನೆಯ ಸಾಲ ವಸೂಲಾತಿಗಾಗಿ ಡಿಸಿಸಿ ಬ್ಯಾಂಕ್ 2026ರ ಫೆ.2ರಂದು ಹರಾಜು ಪ್ರಕ್ರಿಯೆಗೆ ಮುಂದಾಗಿತ್ತು. ಇದನ್ನು ವಿರೋಧಿಸಿ ರೈತರು, ಬಿಎಸ್‌ಎಸ್‌ಕೆ ಕಾರ್ಮಿಕರ ಸಂಘದ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಗಿತ್ತು” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

‘ಹಾಸ್ಟೆಲ್‌’ ಇಲ್ಲದ ಶಿಕ್ಷಣದ ಸ್ವರೂಪ ಹೇಗಿರಲಿದೆ?

ಸಾಮಾನ್ಯವಾಗಿ ʼಶಿಕ್ಷಣʼ ಎಂದರೆ ʼತರಗತಿ, ಪಠ್ಯಪುಸ್ತಕ ಮತ್ತು ಪರೀಕ್ಷೆಗಳʼ ಸುತ್ತ ಹೆಣೆದುಕೊಂಡಿರುವ ಕಲ್ಪನೆ. ಆದರೆ ಒಬ್ಬ ವಿದ್ಯಾರ್ಥಿ ದಿನದ ಬಹುಪಾಲು ಕಳೆಯುವ ಜಾಗ ʼಹಾಸ್ಟೆಲ್‌ʼ. ಹೆಚ್ಚಾಗಿ ಚರ್ಚೆಗೆ ಬಾರದ ಈ ʼಹಾಸ್ಟೆಲ್‌ʼ ಎಂಬ...

ಬರದ ಬೇಗೆಯಲ್ಲಿ ರಾಜ್ಯ ಬೆಂದರೂ ಅನುದಾನಕ್ಕ ದನಿ ಎತ್ತದ...

ಸದಾ ಕಾಲ 'ಮೋದಿ ಜಪ' ಮಾಡುತ್ತಾ, ಕೇವಲ ರಾಜಕೀಯಕ್ಕಾಗಿ ಮತ್ತು ಪಕ್ಷದ ಅಜೆಂಡಾಗಳಿಗಾಗಿ ರಾಜ್ಯಾದ್ಯಂತ ಸುತ್ತುವ ಈ ಸಂಸದರಿಗೆ, ನಾಡಿನ ಜನತೆ ಬರಗಾಲದ ತೀವ್ರ ಸಂಕಷ್ಟದಲ್ಲಿ ಬೆಂದು ಹೋಗುತ್ತಿರುವಾಗ ಅದೇ ಪ್ರಧಾನಿ ನರೇಂದ್ರ...

SIR ಅಕ್ರಮ | ಗ್ಯಾನೇಶ್‌ ಕುಮಾರ್ ‘ಅಪರಾಧಿ’ಯಾದ್ರೆ, ಮೋದಿ-ಅಮಿತ್...

ಭಾರತೀಯ ಪ್ರಜಾಪ್ರಭುತ್ವದ ಇತಿಹಾಸದಲ್ಲೇ ಅತ್ಯಂತ ಕರಾಳ ಅಧ್ಯಾಯವೊಂದು ಈಗ ಜಗಜ್ಜಾಹೀರಾಗಿದೆ. ಪ್ರತಿಯೊಬ್ಬ ನಾಗರಿಕನ ಅತಿ ದೊಡ್ಡ ರಾಜಕೀಯ ಶಕ್ತಿಯಾಗಿರುವ 'ಮತದಾನದ ಹಕ್ಕು' ಮತ್ತು ಅದನ್ನು ಕಾಯಬೇಕಾದ ಸಾಂವಿಧಾನಿಕ ಸಂಸ್ಥೆಯನ್ನೇ ಆಡಳಿತಾರೂಢ ಮೋದಿ-ಅಮಿತ್ ಶಾ...

ಬಿಎಸ್‌ಎಸ್‌ಕೆ ಪುನಾರಂಭಕ್ಕೆ ಉತ್ಸಾಹ ತೋರಿದ ಮಾಜಿ ಸಚಿವ ರಾಜಶೇಖರ ಪಾಟೀಲ್‌ ಅವರು ತಮ್ಮ ನೇತ್ರತ್ವದಲ್ಲಿ ನಿಯೋಗ ಸೆ.21 ರಂದು ಕರೆದೊಯ್ದು ಬೆಂಗಳೂರಿನಲ್ಲಿ ಸಿಎಂ ಡಿ.ಕೆ.ಶಿವಕುಮಾರ, ಸಕ್ಕರೆ ಸಚಿವ ರುದ್ರಪ್ಪ ಲಮಾಣಿ ಅವರನ್ನು ಭೇಟಿ ಮಾಡಿಸಿ ಕಾರ್ಖಾನೆ ಪುರಾರಂಭ ಕುರಿತು ಮನವರಿಕೆ ಮಾಡಿಸಿದರು. ನಂತರ ಎಂಎಲ್‌ಸಿಗಳಾದ ಡಾ.ಚಂದ್ರಶೇಖರ ಪಾಟೀಲ, ಭೀಮರಾವ್ ಪಾಟೀಲ ನೇತ್ರತ್ವದಲ್ಲಿ ಸಹಕಾರ ಸಚಿವ ಲಕ್ಷ್ಮಣ ಸವದಿ ಅವರನ್ನು ಭೇಟಿಯಾಗಿ ಕಾರ್ಖಾನೆ ಪುನಾರಂಭ ಹಾಗೂ ಡಿಸಿಸಿ ಬ್ಯಾಂಕ್‌ ಸಾಲದ ಕುರಿತು ಚರ್ಚಿಸಲಾಗಿದೆ” ಎಂದು ತಿಳಿಸಿದರು.

“ರೈತರ ನಿಯೋಗದ ಮನವಿಗೆ ಸ್ಪಂದಿಸಿದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಅವರು ಬಿಎಸ್‌ಎಸ್‌ಕೆ ಕಾರ್ಖಾನೆಯನ್ನು ಹರಾಜು ಮಾಡದಂತೆ ಅಪೆಕ್ಸ್ ಬ್ಯಾಂಕ್‌ಗೆ ಸೂಚಿಸಿದ್ದು, ಲೀಸ್ ಆಧಾರದ ಮೇಲೆ ನೀಡಲು ಲಿಖಿತ ಒಪ್ಪಿಗೆ ಸೂಚಿಸಿದ್ದಾರೆ. ಸರ್ಕಾರ ನೀಡಿರುವ ಭರವಸೆಯಂತೆ ಮುಂಬರುವ ಹಂಗಾಮಿನಲ್ಲಿ ಕಾರ್ಖಾನೆ ಪುನರಾರಂಭವಾಗಬೇಕು. ಭರವಸೆ ಈಡೇರದಿದ್ದರೆ ರೈತರು, ಕಾರ್ಮಿಕರು ಒಗ್ಗೂಡಿ ನ್ಯಾಯ ಸಿಗುವರೆಗೂ ಬೀದಿಗಿಳಿದು ಹೋರಾಟ ನಡೆಸಬೇಕಾಗುತ್ತದೆ” ಎಂದು ಎಚ್ಚರಿಸಿದರು.

108 ತಿಂಗಳ ವೇತನ ಬಾಕಿ

ಬಿಎಸ್‌ಎಸ್‌ಕೆ ಕಾರ್ಮಿಕ ಸಂಘದ ಅಧ್ಯಕ್ಷ ಅರ್ಜುನ್ ತಮಗಿಕರ್ ಮಾತನಾಡಿ, “2016ರಿಂದ ಕಾರ್ಖಾನೆಯ ನಿರ್ವಹಣೆ ಹದಗೆಟ್ಟಿದ್ದು, ಕಾರ್ಮಿಕರಿಗೆ 108 ತಿಂಗಳ ವೇತನ ಬಾಕಿ ಉಳಿದಿದೆ. ಒಟ್ಟು ₹106.07 ಕೋಟಿ ವೇತನ ಪಾವತಿಸಬೇಕಾಗಿದೆ ಎಂದು ಮಾಹಿತಿ ನೀಡಿದರು.

“ಕಾರ್ಖಾನೆ ಸ್ಥಗಿತಗೊಂಡಿರುವುದರಿಂದ ಅಲ್ಲಿನ ನೂರಾರು ಕಾರ್ಮಿಕರು ಯಾವುದೇ ಸೌಲಭ್ಯಗಳಿಲ್ಲದೆ ನಿವೃತ್ತಿಯಾಗಿದ್ದು, ಈವರೆಗೆ 103ಕ್ಕೂ ಹೆಚ್ಚು ಕಾರ್ಮಿಕರು ಮೃತಪಟ್ಟಿದ್ದಾರೆ. ಕಾರ್ಖಾನೆ ಬಂದ್‌ ಆಗಿರುವುದರಿಂದ ಕಾರ್ಮಿಕ ಆರ್ಥಿಕ ಸಂಕಷ್ಟಕ್ಕೆ ಸಿಲುಕಿ ಜೀವನ ನಿರ್ವಹಣೆಗೆ ತೊಂದರೆ ಅನುಭವಿಸುವಂತಾಗಿದೆ. 2022ರ ಸೆ.21ರಿಂದ ಯಂತ್ರೋಪಕರಣಗಳು ಬಳಕೆಯಾಗದೆ ಇರುವ ಕಾರಣ ಶೇ.60ರಷ್ಟು ಯಂತ್ರಗಳು ಹಾಳಾಗುವ ಹಂತ ತಲುಪಿವೆ” ಎಂದು ತಿಳಿಸಿದರು.

ರೈತ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ದಯಾನಂದ ಸ್ವಾಮಿ ಸಿರ್ಸಿ ಮಾತನಾಡಿ, “ಜಿಲ್ಲೆಯಲ್ಲಿ ರೈತರು ಬೆಳೆದಿರುವ ಸುಮಾರು 30 ಲಕ್ಷ ಟನ್ ಕಬ್ಬಿನ ಭವಿಷ್ಯವನ್ನು ಕಾಪಾಡಲು ಕಾರ್ಖಾನೆ ಪುನರಾರಂಭ ಅಗತ್ಯವಾಗಿದೆ. ಜಿಲ್ಲೆಯಲ್ಲಿ ಬರದ ಛಾಯೆ ಆವರಿಸಿದ್ದು, ಸರ್ಕಾರ ಬರ ಘೋಷಿಸಿದಂತೆ ಕೇಂದ್ರ-ರಾಜ್ಯ ಸರ್ಕಾರಗಳು ಬರ ಪರಿಹಾರದ ಮೊತ್ತವನ್ನು ಹೆಚ್ಚಿಸಿ ರೈತರಿಗೆ ಅಧಿಕ ಪರಿಹಾರ ಪಾವತಿಸಬೇಕು” ಎಂದರು.

ಇದನ್ನೂ ಓದಿ : ಬೀದರ್ | ಬರ ಪರಿಸ್ಥಿತಿ : ವಿಶೇಷ ಪ್ಯಾಕೇಜ್ ಘೋಷಿಸಲು ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಪತ್ರಿಕಾಗೋಷ್ಠಿಯಲ್ಲಿ ರೈತ ಸಂಘದ ರಾಜ್ಯ ಉಪಾಧ್ಯಕ್ಷ ಚಂದ್ರಶೇಖರ ಜಮಖಂಡಿ, ರಾಜ್ಯ ಮಹಿಳಾ ಘಟಕದ ಪ್ರಧಾನ ಕಾರ್ಯದರ್ಶಿ ಶೋಭಾವತಿ ಅಣ್ಣೆಪ್ಪನವರ್, ಔರಾದ್‌ ತಾಲೂಕು ರೈತ ಸಂಘದ ಅಧ್ಯಕ್ಷ ಪ್ರಕಾಶ ಬಾವಗೆ, ಭಾಲ್ಕಿ ತಾಲೂಕಾಧ್ಯಕ್ಷ ಬಾಬುರಾವ್‌ ಜೋಳದಾಬಕೆ, ಬಸವಕಲ್ಯಾಣ ತಾಲೂಕಾಧ್ಯಕ್ಷ ಸುಭಾಷ ರಗಟೆ ಸೇರಿದಂತೆ ರೈತ ಸಂಘದ ಪ್ರಮುಖರು, ಬಿಎಸ್‌ಎಸ್‌ಕೆ ಕಾರ್ಮಿಕ ಸಂಘದ ಮುಖಂಡರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತದಾರರ ಹೆಸರು ಡಿಲೀಟ್ ಮಾಡಲು ಬಿಜೆಪಿ ಶಾಸಕ ಅಭಯ್ ಪಾಟೀಲ್ ಪತ್ರ: ಬಿ.ಕೆ ಹರಿಪ್ರಸಾದ್ ಗಂಭೀರ ಆರೋಪ

“ಬಿಜೆಪಿ ಶಾಸಕ ಅಭಯ್ ಪಾಟೀಲ್ ಬೆಳಗಾವಿಯಲ್ಲಿ 2,500 ಮತದಾರರ ಹೆಸರು ಡಿಲೀಟ್...

ವಿಜಯಪುರ | ಕಬ್ಬಿಗೆ ರೂ. 5,500 ಘೋಷಣೆ ಆಗುವವರೆಗೂ ಸಕ್ಕರೆ ಕಾರ್ಖಾನೆ ಆರಂಭಿಸಬೇಡಿ: ರೈತ ಸಂಘ ಕರೆ

ಪ್ರಸಕ್ತ ಸಾಲಿನ ಕಬ್ಬಿಗೆ ಪ್ರತಿ ಟನ್‌ಗೆ ರೂ.5,500 ದರ ಘೋಷಿಸುವವರೆಗೆ ಹಾಗೂ...