ಔರಾದ್ | ಶೋಷಿತ ಸಮುದಾಯಗಳ ರಾಜಕೀಯ ಜಾಗೃತಿಗೆ ಶ್ರಮಿಸಿದ ಕಾನ್ಶಿರಾಂ

Date:

ದಲಿತರು, ಹಿಂದುಳಿದವರು ಹಾಗೂ ಅಲ್ಪಸಂಖ್ಯಾತರ ರಾಜಕೀಯ ಹಕ್ಕುಗಳಿಗಾಗಿ ಹೋರಾಟ ರೂಪಿಸಿ, ಬಹುಜನ ಸಮಾಜದ ಸಂಘಟನೆಗೆ ಶ್ರಮಿಸಿದ ಕಾನ್ಶಿರಾಂ ಅವರು ದೇಶದ ರಾಜಕೀಯದಲ್ಲಿ ಮಹತ್ವದ ಪಾತ್ರ ವಹಿಸಿದ್ದಾರೆ ಎಂದು ಸಾಮಾಜಿಕ ಹೋರಾಟಗಾರ ರಾಹುಲ್ ಖಂದಾರೆ ಹೇಳಿದರು.

- Advertisement -

ಔರಾದ್ ಪಟ್ಟಣದ ಬಹುಜನ ಸಂಪರ್ಕ ಕಚೇರಿಯಲ್ಲಿ ಶುಕ್ರವಾರ ಆಯೋಜಿಸಿದ್ದ ಕಾನ್ಶಿರಾಂ ಅವರ 20ನೇ ಪುಣ್ಯಸ್ಮರಣೆ ಕಾರ್ಯಕ್ರಮದಲ್ಲಿ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಅವರು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

ಗ್ಯಾನೇಶ್ ಕುಮಾರ್ ವಿರುದ್ಧದ 20 ವರ್ಷಗಳ ಪ್ರಕರಣಕ್ಕೆ ಮರುಜೀವ;...

ಭಾರತದ ಮುಖ್ಯ ಚುನಾವಣಾ ಆಯುಕ್ತ (CEC) ಗ್ಯಾನೇಶ್‌ ಕುಮಾರ್ ವಿರುದ್ಧ 2006ರಲ್ಲಿ ದಾಖಲಾಗಿದ್ದ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಪ್ರಕರಣಕ್ಕೆ ಕೇರಳ ಸರ್ಕಾರ ಈಗ ಮರುಜೀವ ನೀಡಿದೆ. ಪ್ರಕರಣವನ್ನು ವಿಜಿಲೆನ್ಸ್ ತನಿಖೆಗೆ ಆದೇಶ ಹೊರಡಿಸಿದೆ....

“ದೇಶದಲ್ಲಿ ಕಳೆದ ಹಲವು ದಶಕಗಳಿಂದ ಬಡವರಿಗಾಗಿ ಸಾವಿರಾರು ಯೋಜನೆಗಳು ಜಾರಿಯಾದರೂ ದಲಿತರು ಮತ್ತು ಅಲ್ಪಸಂಖ್ಯಾತರ ಬದುಕಿನಲ್ಲಿ ನಿರೀಕ್ಷಿತ ಬದಲಾವಣೆ ಆಗಿಲ್ಲ. ಈ ಹಿನ್ನೆಲೆಯಲ್ಲಿ ಶೋಷಿತ ಸಮುದಾಯಗಳನ್ನು ಸಂಘಟಿಸಿ, ಅವರ ರಾಜಕೀಯ ಹಕ್ಕುಗಳಿಗಾಗಿ ಹೋರಾಟ ನಡೆಸಲು ಕಾನ್ಶಿರಾಂ ಚಳವಳಿಯನ್ನು ರೂಪಿಸಿದರು. ಅಧಿಕಾರದಿಂದ ವಂಚಿತರಾದ ಸಮುದಾಯಗಳು ರಾಜಕೀಯವಾಗಿ ಪ್ರಬಲವಾಗಬೇಕು ಎಂಬ ಉದ್ದೇಶದಿಂದ ಪಕ್ಷ ಸಂಘಟಿಸಿದರು” ಎಂದು ತಿಳಿಸಿದರು.

1006544153

ಬರಹಗಾರ ಪರಮೇಶ ವಿಳಸಪೂರೆ ಮಾತನಾಡಿ, “ಕಾನ್ಶಿರಾಂ ಅವರು ತಮ್ಮ ಸರ್ಕಾರಿ ಉದ್ಯೋಗವನ್ನು ತ್ಯಜಿಸಿ, ಅಂಬೇಡ್ಕರವರ ವಿಚಾರಧಾರೆಗಳಿಂದ ಪ್ರೇರಣೆ ಪಡೆದು ದಲಿತರು, ಹಿಂದುಳಿದವರು ಹಾಗೂ ಅಲ್ಪಸಂಖ್ಯಾತರನ್ನು ರಾಜಕೀಯವಾಗಿ ಸಂಘಟಿಸಲು ತಮ್ಮ ಜೀವನವನ್ನು ಮುಡಿಪಾಗಿಟ್ಟರು. ವ್ಯವಸ್ಥಿತ ಚಿಂತನೆ ಮತ್ತು ಹಂತ ಹಂತದ ಕಾರ್ಯತಂತ್ರದ ಮೂಲಕ ಬಹುಜನ ಸಮಾಜ ಪಕ್ಷವನ್ನು ಕಟ್ಟಿ ಬೆಳೆಸಿದ ಅವರ ಪ್ರಯತ್ನ ಮಹತ್ವದ್ದಾಗಿದೆ” ಎಂದರು.

ಜಾತಿ ಮುಕ್ತಗೊಳಿಸಿ ಸಮಾಜದಲ್ಲಿ ಬದಲಾವಣೆ ತರಲು ಕಾನ್ಶಿರಾಂ ಅವರು ರಾಜಕೀಯ ಸಂಘಟನೆಯನ್ನು ಪ್ರಮುಖ ಸಾಧನವನ್ನಾಗಿ ಬಳಸಿದರು. ಪ್ರಬಲ ಜಾತಿಗಳ ಪ್ರಾಬಲ್ಯದಿಂದ ಹೊರಗುಳಿದ ವಿವಿಧ ಸಮುದಾಯಗಳನ್ನು ‘ಬಹುಜನ’ ಎಂಬ ಪರಿಕಲ್ಪನೆಯಡಿ ಒಗ್ಗೂಡಿಸಿ, ವಿಶಾಲವಾದ ಸಾಮಾಜಿಕ, ಸಾಂಸ್ಕೃತಿಕ ಹಾಗೂ ರಾಜಕೀಯ ವೇದಿಕೆ ನಿರ್ಮಿಸಲು ಪ್ರಯತ್ನಿಸಿದರು” ಎಂದು ಹೇಳಿದರು.

ದೇಶದಲ್ಲಿ ಅಲ್ಪಸಂಖ್ಯಾತರು, ಹಿಂದುಳಿದವರು ಹಾಗೂ ದುರ್ಬಲ ವರ್ಗಗಳ ಜನರು ಭಯದ ವಾತಾವರಣದಲ್ಲಿ ಬದುಕುವಂತಾಗಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಉದ್ಯಮಿಗಳಿಗೆ ಆದ್ಯತೆ ನೀಡಿ ಯೋಜನೆಗಳನ್ನು ರೂಪಿಸುತ್ತಿರುವುದರಿಂದ ಬಡವರ ಬದುಕಿನಲ್ಲಿ ನಿರೀಕ್ಷಿತ ಸುಧಾರಣೆ ಕಂಡುಬರುತ್ತಿಲ್ಲ. ಬಡವರು ಇಂದಿಗೂ ಬಡತನದಲ್ಲೇ ಬದುಕುವ ಪರಿಸ್ಥಿತಿ ಮುಂದುವರಿದಿದೆ ಎಂದರು.

ಕಾರ್ಯಕ್ರಮದಲ್ಲಿ ಕಲ್ಯಾಣ ಕರ್ನಾಟಕ ಕಟ್ಟಡ ಕಾರ್ಮಿಕರ ಮಹಾಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಂತೋಷ ಶಿಂಧೆ ಸೇರಿದಂತೆ ಪ್ರಮುಖರಾದ ಸಿದ್ದಾರ್ಥ ಭೋಸ್ಲೆ, ಕೃಷ್ಣ ದಾಂಡೇಕರ್, ಉತ್ತಮ ಗಾಯಕವಾಡ, ದೀಪಕ್ ಭೋಸ್ಲೆ ಸೇರಿದಂತೆ ಹಲವರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

CJP ಪ್ರೊಟೆಸ್ಟ್‌ ಎಫೆಕ್ಟ್ | ಅ.10ರಂದು ದೆಹಲಿಗೆ ತೆರಳುವ ಹಲವು ರೈಲುಗಳು ರದ್ದು

ದೆಹಲಿಯಲ್ಲಿ ಅಕ್ಟೋಬರ್‌ 10ರಂದು ನಡೆಯಲಿರುವ ಕಾಕ್ರೋಚ್‌ ಜನತಾ ಪಾರ್ಟಿ (CJP) ಪ್ರತಿಭಟನೆಯ...

ಸಿಜೆಪಿ ಪ್ರತಿಭಟನೆ ತಡೆಯಲು ಮೆಟ್ರೋ, ರೈಲು ಬಂದ್: ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ ಸಿಪಿಐಎಂ ನಾಯಕ ಎಂ ಎ ಬೇಬಿ

ಅಕ್ಟೋಬರ್ 10ರಂದು ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಮತ್ತು ವಿವಿಧ ಪ್ರತಿಪಕ್ಷಗಳು...

ಪರಪ್ಪನ ಅಗ್ರಹಾರದಿಂದ ಬೆಳಗಾವಿ ಹಿಂಡಲಗಾ ಜೈಲಿಗೆ ಪ್ರಜ್ವಲ್ ರೇವಣ್ಣ ಎತ್ತಂಗಡಿ

ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಅಕ್ರಮವಾಗಿ ಮೊಬೈಲ್ ಫೋನ್ ಬಳಸಿದ...

ಅ. 10ರ ಜಂತರ್ ಮಂತರ್ ಪ್ರತಿಭಟನೆಗೆ ಅನುಮತಿ ನಿರಾಕರಿಸಿದ ದೆಹಲಿ ಪೊಲೀಸ್; ಕಠಿಣ ಕ್ರಮದ ಎಚ್ಚರಿಕೆ

ಮುಖ್ಯ ಚುನಾವಣಾ ಆಯುಕ್ತರ (CEC) ಹೊಣೆಗಾರಿಕೆ ಪ್ರಶ್ನಿಸಿ 'ಕಾಕ್ರೋಚ್ ಜನತಾ ಪಾರ್ಟಿ'...