ಬಾಗಲಕೋಟ | ಮುಧೋಳ ನಗರದ ಸರ್ವಾಂಗೀಣ ಅಭಿವೃದ್ಧಿಗೆ ಸದಾ ಬದ್ಧನಾಗಿರುವೆ: ಸಚಿವ ತಿಮ್ಮಾಪುರ

Date:

ಮುಧೋಳ ನಗರದ ಸರ್ವಾಂಗೀಣ ಅಭಿವೃದ್ಧಿಗೆ ಸದಾ ಬದ್ಧನಾಗಿರುವೆ. ಬಾಗಲಕೋಟ ಜಿಲ್ಲೆಯ ಮುಧೋಳ ನಗರಕ್ಕೆ ಹೈಟೆಕ್ ಶೌಚಾಲಯ ನಿರ್ಮಿಸಲು ಸಚಿವ ಆರ್.ಬಿ. ತಿಮ್ಮಾಪುರ ಘೋಷಣೆ ಮಾಡಿದ್ದಾರೆ.

- Advertisement -

ನಗರದ ಡಾ. ಅಂಬೇಡ್ಕರ್ ಭವನದಲ್ಲಿ ಹಮ್ಮಿಕೊಂಡಿದ್ದ ಗಾಂಧೀಜಿ ಜಯಂತಿಯಲ್ಲಿ ಪಾಲ್ಗೊಂಡು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಧೋಳ ನಗರದ ವಿವಿಧ ವಾರ್ಡ್‌ಗಳಲ್ಲಿ 39 ಹೈಟೆಕ್ ಶೌಚಾಲಯಗಳನ್ನು ನಿರ್ಮಿಸುವ ಯೋಜನೆ ಮಾಡಲಾಗಿದೆ. ಸ್ಥಳ ಪರಿಶೀಲನೆ ಮಾಡಿ ಅಂದಾಜು 7 ಕೋಟಿ 31 ಲಕ್ಷ ವೆಚ್ಚದಲ್ಲಿ ನೈರ್ಮಲ್ಯ ಸೌಲಭ್ಯಗಳನ್ನು ಸುಧಾರಿಸಲು ಮತ್ತು ನಗರದ ನಿವಾಸಿಗಳಿಗೆ ಸ್ವಚ್ಛ, ಆರೋಗ್ಯಕರ ಪರಿಸರಕ್ಕೆ ಸದಾ ಬದ್ದನಾಗಿರುವೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಮಹಾತ್ಮಾ ಗಾಂಧೀಜಿಯವರ ಪರಂಪರೆ ಇಂದಿಗೂ ಭಾರತೀಯರಿಗೆ ಸ್ಫೂರ್ತಿ ನೀಡುತ್ತಿದೆ. 1924 ರಲ್ಲಿ ಬೆಳಗಾವಿಯಲ್ಲಿ ನಡೆದ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಅಧಿವೇಶನದ ಅಧ್ಯಕ್ಷತೆಯ ಶತಮಾನೋತ್ಸವದ ಆಚರಣೆಯು ಸಾಕ್ಷಿಯಾಗಿದೆ.  ಗಾಂಧಿಯವರ ಅಧ್ಯಕ್ಷತೆಯಲ್ಲಿ ನಡೆದ ಈ ಐತಿಹಾಸಿಕ ಅಧಿವೇಶನವು ಬೆಳಗಾವಿಯೊಂದಿಗಿನ ಅವರ ಸಂಪರ್ಕಕ್ಕೆ ನಾಂದಿ ಹಾಡಿತು. ಅವರ ಸ್ಮರಣೆಯನ್ನು ಗೌರವಿಸಲು, ಅಹಿಂಸಾತ್ಮಕ ಪ್ರತಿರೋಧದ ಶಕ್ತಿಯ ಬಗ್ಗೆ ಅಮೂಲ್ಯವಾದ ಪಾಠಗಳನ್ನು ಯುವ ಪೀಳಿಗೆ ಕಲಿಯಬೇಕಿದೆ.

ಇಂದಿನ ಪೀಳಿಗೆಗೆ ವಿಶೇಷವಾಗಿ ಯುವಕರ ನಡುವಿನ ಧರ್ಮ ಧರ್ಮಗಳ ಮಧ್ಯೆ, ಜಾತಿ ವಿಷಬೀಜ ಬಿತ್ತಿವ ಮೂಲಕ ದ್ವೇಷ ಮತ್ತು ಒಡಕಗಳ ನಿವಾರಣೆಗೆ ಗಾಂಧಿಯವರ ಮಾರ್ಗದರ್ಶನದ ಅವಶ್ಯಕತೆ ಇದೆ. ಗಾಂಧಿಯವರ ಮೌಲ್ಯಗಳನ್ನು ಉತ್ತೇಜಿಸುವಲ್ಲಿ ಕಾಂಗ್ರೆಸ್ ಪಕ್ಷ ಮತ್ತು ಸರ್ಕಾರ ಪ್ರಮುಖ ಪಾತ್ರ ವಹಿಸುತ್ತದೆ ಎಂದರು.

ನಗರದ ಅಭಿವೃದ್ಧಿಗಾಗಿ ಯಾವುದೇ ರಾಜಕೀಯ ಮಾಡದೆ ಸರ್ವಾಂಗೀಣ ಅಭಿವೃದ್ಧಿಗೆ ಬದ್ಧನಾಗಿದ್ದೇನೆ. ನಗರದ ನಿವಾಸಿಗಳಿಗೆ ಯಾವುದೇ ಅಡೆತಡೆ ಆಗದಂತೆ ವ್ಯಾಪಾರಕ್ಕೆ ಸರಳಿತವಾಗಿ ಅಲ್ಲಲ್ಲಿ ಪಾರ್ಕಿಂಗ್ ವ್ಯವಸ್ಥೆ, ನಾಲ್ಕು ದಿಕ್ಕುಗಳ ಕಡೆ ಸ್ಮಶಾನದ ವ್ಯವಸ್ಥೆಮಾಡಲು  ಸ್ಥಳ ಹುಡುಕಾಟದಲ್ಲಿ ಅಧಿಕಾರಗಳಿಗೆ ಸೂಚಿಸಿದ್ದೇನೆ. ಆದಷ್ಟು ಬೇಗ ಜನತೆಗೆ ಅನುಕೂಲವಾಗುವಂತೆ ಎಲ್ಲ ವ್ಯವಸ್ಥೆಯನ್ನು ಮಾಡುವುದಾಗಿ ಸಚಿವ ತಿಮ್ಮಾಪೂರ  ಭರವಸೆ ನೀಡಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿರಸಿ | ರಾಜೇಂದ್ರ ಸಿರ್ಸಿಕರ್‌ಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಗೌರವ

ಶಿರಸಿ: ಪ್ರಾಣಿ-ಪಕ್ಷಿಗಳ ರಕ್ಷಣೆ ಮತ್ತು ಪುನರ್ವಸತಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿರಸಿಯ ರಾಜೇಂದ್ರ...

ಧಾರವಾಡ | ಪೊಲೀಸ್ ಹೆಸರೇಳಿ ರೂ. 15,700 ವಂಚನೆ: ನಾಲ್ಕು ಬೈಕ್‍ಗಳು ನಗದು ವಶ

ಪೊಲೀಸ್ ಹೆಸರೇಳಿ ವ್ಯಕ್ತಿಯೊಬ್ಬರಿಂದ ₹15,700 ಹಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ...

ಗೋಕರ್ಣ | ಕುಡ್ಲೆ ಕಡಲತೀರದಲ್ಲಿ ಸಮುದ್ರ ಸುಳಿಗೆ ಸಿಲುಕಿದ್ದ ಬೆಂಗಳೂರಿನ ಇಬ್ಬರು ಪ್ರವಾಸಿಗರ ರಕ್ಷಣೆ

ಗೋಕರ್ಣ: ಸಮುದ್ರದಲ್ಲಿ ಈಜುತ್ತಿದ್ದ ವೇಳೆ ಅಪಾಯಕಾರಿ ಸುಳಿಗೆ ಸಿಲುಕಿದ ಬೆಂಗಳೂರಿನ ಇಬ್ಬರು...