ಬಾಗಲಕೋಟೆ | ಸವಿತಾ ಸಮಾಜ ಅಭಿವೃದ್ಧಿ ನಿಗಮದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ

Date:

ಬಾಗಲಕೋಟೆಯ ಸವಿತಾ ಸಮಾಜ ಹಾಗೂ ಅದರ ಉಪಜಾತಿಗಳಿಗೆ ಸೇರಿದ ನಿರುದ್ಯೋಗಿಗಳು ಮತ್ತು ವಿದ್ಯಾರ್ಥಿಗಳಿಗೆ ಸ್ವಯಂ ಉದ್ಯೋಗ, ಉನ್ನತ ಶಿಕ್ಷಣ ಹಾಗೂ ವಿದೇಶಿ ವ್ಯಾಸಂಗಕ್ಕೆ ಆರ್ಥಿಕ ನೆರವು ಪಡೆಯಲು ಅವಕಾಶ ಕಲ್ಪಿಸಲಾಗಿದೆ. ಕರ್ನಾಟಕ ಸವಿತಾ ಸಮಾಜ ಅಭಿವೃದ್ಧಿ ನಿಗಮದಿಂದ ವಿವಿಧ ಸಾಲ ಯೋಜನೆಗಳಡಿ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಹ ಅಭ್ಯರ್ಥಿಗಳು ಸೇವಾ ಸಿಂಧು ತಂತ್ರಾಂಶದ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

- Advertisement -

ಸ್ವಯಂ ಉದ್ಯೋಗ ಆರಂಭಿಸಲು ಬಯಸುವ ಸವಿತಾ ಸಮಾಜದ ನಿರುದ್ಯೋಗಿಗಳಿಗೆ ಗರಿಷ್ಠ ₹2 ಲಕ್ಷದವರೆಗೆ ಆರ್ಥಿಕ ನೆರವು ನೀಡಲಾಗುತ್ತದೆ. ₹1 ಲಕ್ಷದವರೆಗಿನ ಸಾಲಕ್ಕೆ ಶೇ.20ರಷ್ಟು ಹಾಗೂ ₹1 ಲಕ್ಷದಿಂದ ₹2 ಲಕ್ಷದವರೆಗಿನ ಸಾಲಕ್ಕೆ ಶೇ.15ರಷ್ಟು ಸಹಾಯಧನ ನೀಡುವ ವ್ಯವಸ್ಥೆ ಇದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಸಾಕ್ಷ್ಯ ಚಿತ್ರಗಳಿರದ ದೇಶವು ಚರಿತ್ರೆ ಇರದ ರಾಷ್ಟ್ರದಂತೆ ಎಂದಿದ್ದ...

ಚಿಲಿ ದೇಶದ ಜನರ ಸಾಮಾಜಿಕ ಬದುಕು ಹಾಗೂ ರಾಜಕೀಯ ಬೆಳವಣಿಗೆಗಳು ಹೆಣೆದುಕೊಂಡ ಘನವಾದ ಚರಿತ್ರೆಯ ಸಂಪುಟವಾಗಿ ಕಟ್ಟಿದ ಧೀಮಂತ ಸಿನೆಮಾ ಕಲಾವಿದ ಪ್ಯಾಟ್ರಿಷಿಯೊ ಗುಜ್ಮಾನ್, ಇತ್ತೀಚಿಗೆ ಇಲ್ಲವಾದರು. ಅವರ ಸೃಜನಶೀಲತೆ, ತುಡಿತ ಮತ್ತು...

ಸೂಕ್ತ ಸಮಯಕ್ಕಾಗಿ ಕಾಯುತ್ತಲೇ ಇರುವ ಕುಮಾರಸ್ವಾಮಿ!

“ರಾಜ್ಯದಲ್ಲಿ ನಡೆಯುತ್ತಿರುವ ಅಕ್ರಮ, ಅವ್ಯವಹಾರದ ಬಗ್ಗೆ ಜನರ ಮುಂದೆ ಇಡುವುದರಲ್ಲಿ ಯಾವುದೇ ರಾಜಿಯಿಲ್ಲ. ರಾಜ್ಯದಲ್ಲಿನ ಘಟನೆ ಬಗ್ಗೆ ಬಾಯಿ ಮುಚ್ಚಿಕೊಂಡಿರಲು ಆಗಲ್ಲ" ಎಂದಿದ್ದಾರೆ ಕುಮಾರಸ್ವಾಮಿ. ಈ ಬಾರಿಯಾದರೂ ಅಲ್ಲೋಲ ಕಲ್ಲೋಲ ಸೃಷ್ಟಿಸುತ್ತಾರೆಯೇ? ‘ಸ್ಪೋಟಕ ಹೇಳಿಕೆ’,...

ಹಬ್ಬ ಅಂದ್ರ ಕೂಡಿಸಬೇಕ್ರಿ, ರಾಜಕೀಯದ ವಿಷ ಬೀಜ ಬಿತ್ತೋದಲ್ಲ…

ಹಬ್ಬಗಳು ಬಾಲ್ಯದ ಆ ಎತ್ತಿನ ಬಂಡಿಯ ನೆನಪಿನಂತೆ ಎಲ್ಲರನ್ನೂ ಮುಗ್ಧವಾಗಿ ಕೂಡಿಸಬೇಕೇ ಹೊರತು, ಮತ್ತೊಬ್ಬರ ಧರ್ಮವನ್ನು ಕೆಣಕಿ, ರಾಜಕೀಯ ಲಾಭಕ್ಕಾಗಿ ಬೀದಿಯಲ್ಲಿ ಬೆಂಕಿ ಹಚ್ಚುವ ಪ್ರವೃತ್ತಿ ಧರ್ಮವೂ ಅಲ್ಲ, ಭಾರತೀಯ ಸಂಸ್ಕೃತಿಯೂ ಅಲ್ಲ....

ಅರ್ಜಿದಾರರ ವಯಸ್ಸು 18ರಿಂದ 55 ವರ್ಷದೊಳಗಿರಬೇಕು. ಕುಟುಂಬದ ವಾರ್ಷಿಕ ಆದಾಯ ಗ್ರಾಮೀಣ ಪ್ರದೇಶದಲ್ಲಿ ₹98 ಸಾವಿರ ಹಾಗೂ ಪಟ್ಟಣ ಪ್ರದೇಶದಲ್ಲಿ ₹1.20 ಲಕ್ಷದೊಳಗಿರಬೇಕು. ಅರಿವು ಶೈಕ್ಷಣಿಕ ಸಾಲ ಯೋಜನೆಯಡಿ ಸಿಇಟಿ ಮತ್ತು ನೀಟ್ ಮೂಲಕ ಪ್ರವೇಶ ಪಡೆದಿರುವ ವಿದ್ಯಾರ್ಥಿಗಳಿಗೆ ಎಂಜಿನಿಯರಿಂಗ್‌, ವೈದ್ಯಕೀಯ, ದಂತ ವೈದ್ಯಕೀಯ ಸೇರಿದಂತೆ ಒಟ್ಟು 28 ಕೋರ್ಸ್‌ಗಳ ವ್ಯಾಸಂಗಕ್ಕೆ ಸಾಲ ಸೌಲಭ್ಯ ದೊರೆಯಲಿದೆ.

ಕೋರ್ಸ್‌ನ ಅವಧಿಗೆ ಅನುಗುಣವಾಗಿ ವಾರ್ಷಿಕ ಗರಿಷ್ಠ ₹1 ಲಕ್ಷದವರೆಗೆ, ಒಟ್ಟು ₹4 ಲಕ್ಷದಿಂದ ₹5 ಲಕ್ಷದವರೆಗೆ ಸಾಲವನ್ನು ವಾರ್ಷಿಕ ಶೇ.2ರ ಬಡ್ಡಿ ದರದಲ್ಲಿ ನೀಡಲಾಗುತ್ತದೆ. ಈ ಯೋಜನೆಗೆ ಅರ್ಜಿ ಸಲ್ಲಿಸುವ ವಿದ್ಯಾರ್ಥಿಗಳ ಕುಟುಂಬದ ವಾರ್ಷಿಕ ಆದಾಯ ₹3.50 ಲಕ್ಷ ಮೀರಿರಬಾರದು.

ವಿದೇಶದ ವಿಶ್ವವಿದ್ಯಾಲಯಗಳಲ್ಲಿ ಉನ್ನತ ವ್ಯಾಸಂಗ ಮಾಡಲು ಬಯಸುವ ಅರ್ಹ ಅಭ್ಯರ್ಥಿಗಳಿಗೆ ಮತ್ತೊಂದು ಮಹತ್ವದ ಅವಕಾಶವಿದೆ. ಈ ಯೋಜನೆಯಡಿ ವಾರ್ಷಿಕ ₹25 ಲಕ್ಷದಿಂದ ₹50 ಲಕ್ಷದವರೆಗೆ ಬಡ್ಡಿ ರಹಿತ ಸಾಲ ನೀಡಲಾಗುತ್ತದೆ. ಈ ಯೋಜನೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಯ ಕುಟುಂಬದ ವಾರ್ಷಿಕ ಆದಾಯ ₹15 ಲಕ್ಷ ಮೀರಿರಬಾರದು ಎಂದು ಕರ್ನಾಟಕ ಸವಿತಾ ಸಮಾಜ ಅಭಿವೃದ್ಧಿ ನಿಗಮದ ಪ್ರಕಟಣೆ ತಿಳಿಸಿದೆ.

ಸ್ವಯಂ ಉದ್ಯೋಗ ಆರಂಭಿಸುವ ನಿರುದ್ಯೋಗಿಗಳು ಹಾಗೂ ಉನ್ನತ ಶಿಕ್ಷಣದ ಕನಸು ಹೊತ್ತಿರುವ ವಿದ್ಯಾರ್ಥಿಗಳು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳುವಂತೆ ನಿಗಮ ಮನವಿ ಮಾಡಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಸೆ. 5ರಂದು ಪ್ರಜಾಸೇವೆ ಆಂದೋಲನ: ಜನರ ಬಳಿಗೆ ಆಡಳಿತ, ಸ್ಥಳದಲ್ಲೇ ಸಮಸ್ಯೆಗಳಿಗೆ ಪರಿಹಾರ

ಉತ್ತರ ಕನ್ನಡ: ರಾಜ್ಯದ ಜನತೆಯ ಅಹವಾಲುಗಳನ್ನು ಆಲಿಸಿ, ಸ್ಥಳದಲ್ಲಿಯೇ ಸಮಸ್ಯೆಗಳಿಗೆ ಪರಿಹಾರ...

ಹಾಸನ | ಫುಟ್‌ಪಾತ್ ಒತ್ತುವರಿಯನ್ನು ತೆರವುಗೊಳಿಸಿದ ಅಧಿಕಾರಿಗಳು 

ಹಾಸನ ಜಿಲ್ಲೆ ಸಕಲೇಶಪುರ ತಾಲೂಕಿನ ತೇಜಸ್ವಿ ವೃತ್ತದಲ್ಲಿ ಸುಗಮ ಸಂಚಾರಕ್ಕೆ ಅಡಚಣೆಯಾಗಿದ್ದ...

ಚಿಕ್ಕಮಗಳೂರು | ಕೆಎಸ್‌ಆರ್‌ಟಿಸಿ ಬಸ್‌ ಸೌಲಭ್ಯವಿಲ್ಲದೆ ವಿದ್ಯಾರ್ಥಿಗಳ ಪರದಾಟ

ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನ ಕಬ್ಬಳ್ಳಿ ಗೇಟ್‌ ಬಳಿ ಸಖರಾಯಪಟ್ಟಣ-ಬಾಣಾವರ ಸಂಪರ್ಕ...

ಉಡುಪಿಯಲ್ಲಿ ಆನಂದ್ ಡೆಂಟಲ್‌ ಆ್ಯಂಡ್‌ ಆರ್ಥೋಅಲೈನರ್ಸ್‌ ನೂತನ ಮಲ್ಟಿಸ್ಪೆಷಾಲಿಟಿ ಕ್ಲಿನಿಕ್‌

ಕಳೆದ 18 ವರ್ಷಗಳಿಂದ ದಂತ ಆರೈಕೆ ಮತ್ತು ಚಿಕಿತ್ಸಾ ಕ್ಷೇತ್ರದಲ್ಲಿ ಗುಣಮಟ್ಟದ...