ಬಾಗಲಕೋಟೆ | ಶೈಕ್ಷಣಿಕ ಪ್ರಗತಿಗೆ ಹೆಚ್ಚಿನ ಆದ್ಯತೆ ನೀಡಿ; ಅಧಿಕಾರಿಗಳಿಗೆ ವಿ.ರಶ್ಮಿ ಮಹೇಶ ಸೂಚನೆ

Date:

ಬಾಗಲಕೋಟೆ ಜಿಲ್ಲೆಯಲ್ಲಿ ಶೈಕ್ಷಣಿಕ ಪ್ರಗತಿ ಹಾಗೂ ಶಾಲಾ ಅಭಿವೃದ್ಧಿ ಕಾಮಗಾರಿಗಳಿಗೆ ಹೆಚ್ಚಿನ ಆದ್ಯತೆ ನೀಡಿ, ನಿಗದಿತ ಅವಧಿಯೊಳಗೆ ಗುರಿ ಸಾಧಿಸುವಂತೆ ಶಾಲಾ ಶಿಕ್ಷಣ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ವಿ.ರಶ್ಮಿ ಮಹೇಶ ಅಧಿಕಾರಿಗಳಿಗೆ ಸೂಚಿಸಿದರು.

- Advertisement -

ಜಿಲ್ಲಾ ಪಂಚಾಯತ್ ಸಭಾಭವನದಲ್ಲಿ ಮಂಗಳವಾರ ಜರುಗಿದ ಸಭೆಯಲ್ಲಿ ಮಾತನಾಡಿದ ಅವರು, ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿ ಫಲಿತಾಂಶ ಸುಧಾರಣೆಗೆ ತಿಂಗಳಿಗೆ ಕನಿಷ್ಠ ಒಂದು ಬಾರಿ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಪರಿಶೀಲನಾ ಸಭೆ ನಡೆಸಬೇಕು ಎಂದರು. ಕಳೆದ ವರ್ಷದ ಫಲಿತಾಂಶ ಆಧಾರದ ಮೇಲೆ ಸುಧಾರಣಾ ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೇಡ್ತಿ ನದಿ ತಿರುವು ಯೋಜನೆಯೂ, ಬೊಮ್ಮಾಯಿ-ಕಾಗೇರಿ ಪೀಕಲಾಟವೂ

ಉತ್ತರ ಕನ್ನಡ ಜಿಲ್ಲೆಯ ಪಶ್ಚಿಮ ಘಟ್ಟದ ತಪ್ಪಲಿನಲ್ಲಿ ಇದ್ದಕ್ಕಿದ್ದಂತೆಯೇ ಬೇಡ್ತಿ-ವರದಾ ಮತ್ತು ಬೇಡ್ತಿ-ಧರ್ಮ-ವರದಾ ನದಿ ಜೋಡಣೆ ಎಂಬ ಅವಳಿ ಗುಮ್ಮಗಳು ಎದ್ದು ಕುಳಿತು ಬೆಚ್ಚಿ ಬೀಳಿಸಿವೆ. ಸ್ವರ್ಣವಲ್ಲೀ ಸ್ವಾಮಿ, ಎಂಪಿ ಕಾಗೇರಿ ಮತ್ತು...

ಗ್ರಾಮೀಣ ರಾಜಕಾರಣದಲ್ಲಿ ಮಹಿಳಾ ಮೀಸಲಾತಿ ಹೆಸರಿಗಷ್ಟೇ; ಇಂದಿಗೂ ಅಧಿಕಾರ...

ಗ್ರಾಮೀಣ ರಾಜಕಾರಣದಲ್ಲಿ ಮಹಿಳಾ ಮೀಸಲಾತಿಯ ಮೂಲಕ ಅನೇಕ ಮಹಿಳೆಯರು ಜನಪ್ರತಿನಿಧಿಗಳಾಗಿದ್ದಾರೆ. ಆದರೂ ಕೆಲವು ಕಡೆ ಮಹಿಳಾ ಪ್ರತಿನಿಧಿಗಳ ಬದಲಿಗೆ ಅವರ ಪತಿ, ತಂದೆ, ಸಹೋದರ ಅಥವಾ ಕುಟುಂಬದ ಇತರ ಪುರುಷರು ಆಡಳಿತದಲ್ಲಿ ಹಸ್ತಕ್ಷೇಪ...

ಪ್ರಜಾಪ್ರಭುತ್ವದ ಪ್ರತಿಭಟನೆ ಮತ್ತು ಪೊಲೀಸ್ ವ್ಯವಸ್ಥೆ

ಭಾರತದಲ್ಲಿ ಪ್ರತಿಭಟನೆಗಳಿಗೆ ಶತಮಾನಗಳ ಸಂಪ್ರದಾಯವಿದೆ. ಬ್ಯಾರಿಕೇಡ್‌ಗಳನ್ನು ಹಾರುವುದು, ಮಾನವ ಸರಪಳಿ ರಚಿಸುವುದು ಅಥವಾ ಬಂಧನವನ್ನು ವಿರೋಧಿಸಿ ನೆಲದ ಮೇಲೆ ಮಲಗುವುದು ಪ್ರಜಾಪ್ರಭುತ್ವದ ಸಹಜ ಆಂದೋಲನದ ಭಾಗವೇ ಹೊರತು ಖಂಡಿಸಬೇಕಾದ ಅಪರಾಧಗಳಲ್ಲ. ಅಕ್ಟೋಬರ್ 10ರಂದು ದೆಹಲಿಯಲ್ಲಿ...

ಸಿಎಸ್‌ಆರ್ ಅನುದಾನದಡಿ 60 ಶಾಲೆಗಳ ಅಭಿವೃದ್ಧಿಗೆ ನಿರ್ದಿಷ್ಟ ಯೋಜನೆ ರೂಪಿಸಿ, ವಾರ್ಷಿಕ ಗುರಿ ನಿಗದಿಪಡಿಸಿ ಅದೇ ವರ್ಷದಲ್ಲಿ ಕ್ರಮವಹಿಸಬೇಕು. 15 ದಿನಗಳೊಳಗೆ ಎಂಒಯು ಮಾಡಿಕೊಂಡು ಕಾಮಗಾರಿ ಪ್ರಗತಿಯನ್ನು ಪ್ರತಿದಿನ ಪರಿಶೀಲಿಸಬೇಕು ಎಂದು ಸೂಚಿಸಿದರು. ದಾನದ ಜಮೀನುಗಳನ್ನು ಇಲಾಖೆ ಹೆಸರಿಗೆ ಹಸ್ತಾಂತರಿಸುವ ಪ್ರಕ್ರಿಯೆ ಶೇ.100ರಷ್ಟು ಪೂರ್ಣಗೊಳಿಸಬೇಕು ಎಂದರು.

“20ಕ್ಕಿಂತ ಕಡಿಮೆ ವಿದ್ಯಾರ್ಥಿಗಳಿರುವ ಶಾಲೆಗಳ ಮಕ್ಕಳನ್ನು ಕೆಪಿಎಸ್ ಅಥವಾ ಪಿಎಂಶ್ರೀ ಶಾಲೆಗಳಿಗೆ ತಾತ್ಕಾಲಿಕವಾಗಿ ಸ್ಥಳಾಂತರಿಸಬೇಕು. ಅಡುಗೆ ಸಿಬ್ಬಂದಿಯನ್ನು ತೆಗೆದುಹಾಕಬಾರದು ಎಂದು ಸ್ಪಷ್ಟಪಡಿಸಿದರು. ದಾಖಲಾತಿ ಪ್ರಮಾಣ ಶೇ.35ರಷ್ಟು ಹೆಚ್ಚಿಸುವಂತೆ ಕ್ರಮ ಕೈಗೊಳ್ಳಬೇಕು ಹಾಗೂ ನಿರ್ಲಕ್ಷ್ಯಕ್ಕೆ ಶಿಸ್ತುಕ್ರಮ ಕೈಗೊಳ್ಳಲಾಗುವುದು” ಎಂದು ಎಚ್ಚರಿಸಿದರು.

ಸಭೆಯಲ್ಲಿ ಕೆ.ಎಸ್.ಇ.ಎ.ಬಿಯ ಅಧ್ಯಕ್ಷರು ಹಾಗೂ ಮಧ್ಯಾಹ್ನ ಬಿಸಿ ಊಟದ ನಿರ್ದೇಶಕ ಪ್ರಕಾಶ ಜಿ.ಟಿ., ಸಮಗ್ರ ಶಿಕ್ಷಣ ಕರ್ನಾಟಕದ ಯೋಜನಾ ನಿರ್ದೇಶಕಿ ವಿದ್ಯಾಕುಮಾರಿ, ದಾರವಾಢ ಶಾಲಾ ಶಿಕ್ಷಣ ಇಲಾಖೆಯ ಅಪರ ಆಯುಕ್ತರಾದ ಈಶ್ವರ ಉಳ್ಳಾಗಡ್ಡಿ, ಜಿಲ್ಲಾಧಿಕಾರಿ ಸಂಗಪ್ಪ, ಜಿ.ಪಂ. ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಗಜಾನನ ಬಾಲೆ, ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಸೀತಾರಾಮು ಸೇರಿದಂತೆ ಇತರರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಪ್ರತ್ಯೇಕ ರಸ್ತೆ ಅಪಘಾತ: ಇಬ್ಬರು ಸಾವು

ಕಲಬುರಗಿ ನಗರದ ಸಂಚಾರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸಂಭವಿಸಿದ ಎರಡು ಪ್ರತ್ಯೇಕ...

ಬೀದರ್‌ | ಐತಿಹಾಸಿಕ ಕರೇಜ್ ಅಭಿವೃದ್ಧಿಗೆ ಬುಡಾ ಕೈಜೋಡಿಸಲಿ

ಬೀದರ್‌ ನಗರದಲ್ಲಿರುವ ಐತಿಹಾಸಿಕ ಕರೇಜ್ ಜಲವ್ಯವಸ್ಥೆಯನ್ನು ಸಂರಕ್ಷಿಸಿ, ಅಂತರ್ಜಲ ಮರುಪೂರಣ ಹಾಗೂ...

ಅಮೆರಿಕದಲ್ಲಿ ಮೊಹಮ್ಮದ್ ಯೂನಸ್‌ಗೆ ‘ಉಗ್ರ’ ಎಂದ ಪ್ರತಿಭಟನಾಕಾರರು: ಕಠಿಣ ಕ್ರಮಕ್ಕೆ ಮುಂದಾದ ಬಾಂಗ್ಲಾ

ಬಾಂಗ್ಲಾದೇಶದ ಮಾಜಿ ಮುಖ್ಯ ಸಲಹೆಗಾರರಾದ ಮೊಹಮ್ಮದ್ ಯೂನಸ್ ಅವರಿಗೆ ಅಮೆರಿಕದ ...

ಬೇಡ್ತಿ ನದಿ ತಿರುವು ಯೋಜನೆಯೂ, ಬೊಮ್ಮಾಯಿ-ಕಾಗೇರಿ ಪೀಕಲಾಟವೂ

ಉತ್ತರ ಕನ್ನಡ ಜಿಲ್ಲೆಯ ಪಶ್ಚಿಮ ಘಟ್ಟದ ತಪ್ಪಲಿನಲ್ಲಿ ಇದ್ದಕ್ಕಿದ್ದಂತೆಯೇ ಬೇಡ್ತಿ-ವರದಾ ಮತ್ತು...