ಬೆಂಗಳೂರು | ಸರಣಿ ಅಪಘಾತ; ತಾಯಿ ಮಗ ಸಾವು, ಮೂವರಿಗೆ ಗಾಯ

Date:

ಬೆಂಗಳೂರಿನ ಹೊರವರ್ತುಲ ರಸ್ತೆಯ ಹೊರಮಾವು ಕೆಳಸೇತುವೆ ಬಳಿ ಸರಣಿ ಅಪಘಾತ ಸಂಭವಿಸಿದ್ದು, ದ್ವಿಚಕ್ರ ವಾಹನದಲ್ಲಿ ಹೊರಟಿದ್ದ ತಾಯಿ–ಮಗ ಮೃತಪಟ್ಟಿದ್ದಾರೆ. ಘಟನೆಯಲ್ಲಿ ಆಟೋ ಚಾಲಕ, ಇಬ್ಬರು ಪ್ರಯಾಣಿಕರು ಗಾಯಗೊಂಡಿದ್ದಾರೆ.

- Advertisement -

“ಅಶ್ವಿನಿ (29) ಹಾಗೂ ಅವರ ಮಗ ಎನ್‌ ಯಶ್ವಿನ್ (7) ಮೃತರು. ಅಪಘಾತದಲ್ಲಿ ಆಟೋ ಚಾಲಕ ಹಾಗೂ ಇಬ್ಬರು ಪ್ರಯಾಣಿಕರು ಗಾಯಗೊಂಡಿದ್ದಾರೆ” ಎಂದು ಬಾಣಸವಾಡಿ ಸಂಚಾರ ಠಾಣೆ ಪೊಲೀಸರು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

“ಸ್ಥಳೀಯ ನಿವಾಸಿ ನರೇಶ್ ಅವರು ‍ಪತ್ನಿ ಅಶ್ವಿನಿ ಹಾಗೂ ಮಗ ಯಶ್ವಿನ್ ಜೊತೆ ದ್ವಿಚಕ್ರ ವಾಹನದಲ್ಲಿ ಹೊರಟಿದ್ದಾಗ ಈ ಅಪಘಾತ ಸಂಭವಿಸಿದ್ದು, ನರೇಶ್ ಅವರೂ ಗಾಯಗೊಂಡಿದ್ದಾರೆ” ಎಂದು ತಿಳಿಸಿದರು.

“ಹೊರಮಾವು ಕೆಳಸೇತುವೆ ಬಳಿಯ ಬಸ್ ತಂಗುದಾಣದಲ್ಲಿ ಬಿಎಂಟಿಸಿ ಬಸ್ ನಿಂತಿತ್ತು. ಇದೇ ಮಾರ್ಗವಾಗಿ ಹೊರಟಿದ್ದ ಆಟೋ, ಬಸ್‌ಗೆ ಢಿಕ್ಕಿ ಹೊಡೆದಿತ್ತು. ಹಿಂದೆಯೇ ಅತೀ ವೇಗವಾಗಿ ಬರುತ್ತಿದ್ದ ಸರಕು ಸಾಗಣೆ ವಾಹನ, ಆಟೋಗೆ ಗುದ್ದಿತ್ತು. ಬಳಿಕ ದ್ವಿಚಕ್ರ ವಾಹನಕ್ಕೆ ಢಿಕ್ಕಿ ಹೊಡೆದಿತ್ತು” ಎಂದರು.

ಈ ಸುದ್ದಿ ಓದಿದ್ದೀರಾ? ಹುಬ್ಬಳ್ಳಿ | ರೈಲಿನಿಂದ ಬಿದ್ದ ಬಾಲಕನನ್ನು ರಕ್ಷಿಸಿದ ಆರ್‌ಪಿಎಫ್ ಸಿಬ್ಬಂದಿ

ದ್ವಿಚಕ್ರ ವಾಹನದಲ್ಲಿ ಹೊರಟಿದ್ದ ನರೇಶ್ ಹಾಗೂ ಪತ್ನಿ–ಮಗ, ರಸ್ತೆಗೆ ಬಿದ್ದಿದ್ದರು. ತೀವ್ರ ಗಾಯಗೊಂಡಿದ್ದ ಮಗ ಯಶ್ವಿನ್ ಸ್ಥಳದಲ್ಲೇ ಮೃತಪಟ್ಟರು. ತಾಯಿ ಅಶ್ವಿನಿ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಚಿಕಿತ್ಸೆ ಫಲಿಸದೆ ಅವರು ಅಲ್ಲಿಯೇ ಅಸುನೀಗಿದ್ದಾರೆ ಎಂದು ತಿಳಿಸಿದ್ದಾರೆ.

ಘಟನೆ ಸಂಬಂಧ ಬಾಣಸವಾಡಿ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ಎಲ್ಲ ವಾಹನಗಳನ್ನು ಜಪ್ತಿ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಪ್ರವಾಸಕ್ಕೆ ತೆರಳಿದ್ದ ಕಾರು ಅಪಘಾತ: ಇಬ್ಬರು ಸಾವು, ಇಬ್ಬರಿಗೆ ಗಂಭೀರ ಗಾಯ

ಪ್ರವಾಸಕ್ಕೆ ತೆರಳಿದ್ದ ಕಾರು ಅಪಘಾತಕ್ಕೀಡಾಗಿ ನಾಲ್ವರ ಪೈಕಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು,...

ಹಾವೇರಿ | ನಾಳೆ ಜಿಲ್ಲಾ ಮಟ್ಟದ ಕಾರ್ಯಾಗಾರ

ಸಾವಯವ ಹಾಗೂ ನೈಸರ್ಗಿಕ ಕೃಷಿ ಪದ್ಧತಿಯನ್ನು ಉತ್ತೇಜಿಸುವ ಜೊತೆಗೆ ರೈತರು ಬೆಳೆಯುವ...

ಶಿರಸಿ | ರಾಜೇಂದ್ರ ಸಿರ್ಸಿಕರ್‌ಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಗೌರವ

ಶಿರಸಿ: ಪ್ರಾಣಿ-ಪಕ್ಷಿಗಳ ರಕ್ಷಣೆ ಮತ್ತು ಪುನರ್ವಸತಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿರಸಿಯ ರಾಜೇಂದ್ರ...

ಧಾರವಾಡ | ಪೊಲೀಸ್ ಹೆಸರೇಳಿ ರೂ. 15,700 ವಂಚನೆ: ನಾಲ್ಕು ಬೈಕ್‍ಗಳು ನಗದು ವಶ

ಪೊಲೀಸ್ ಹೆಸರೇಳಿ ವ್ಯಕ್ತಿಯೊಬ್ಬರಿಂದ ₹15,700 ಹಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ...