ಬಿಬಿಎಂಪಿ | ಆಸ್ತಿ ತೆರಿಗೆ ಕಟ್ಟದೇ ಬಾಕಿ ಉಳಿಸಿಕೊಂಡ ಕಟ್ಟಡಗಳ ಸೀಜ್

Date:

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವ್ಯಾಪ್ತಿಯಲ್ಲಿರುವ ಮನೆ ಹಾಗೂ ಕಟ್ಟಡಗಳ ಮಾಲೀಕರು ಆಸ್ತಿ ತೆರಿಗೆ ಕಟ್ಟದೇ ಬಾಕಿ ಉಳಿಸಿಕೊಂಡವರಿಗೆ ಪಾಲಿಕೆ ಎಚ್ಚರಿಕೆ ನೀಡಿದ್ದು, ಆಸ್ತಿ ತೆರಿಗೆ ಕಟ್ಟದಿರುವ ಕಟ್ಟಡಗಳನ್ನು ಸೀಜ್​ ಮಾಡುವ ಕಾರ್ಯವನ್ನು ಪಾಲಿಕೆ ಅಧಿಕಾರಿಗಳು ಪ್ರಾರಂಭಿಸಿದ್ದಾರೆ.

ಪಾಲಿಕೆ ಇದೀಗ ಕಾರ್ಯಾಚರಣೆ ಆರಂಭಿಸಿದ್ದು, ಆಸ್ತಿ ತೆರಿಗೆ ಕಟ್ಟದ ಕಟ್ಟಡಗಳಿಗೆ ಬೀಗ ಜಡಿದು ಸೀಜ್ ಮಾಡುತ್ತಿದ್ದಾರೆ. ವರ್ತೂರು, ವೈಟ್ಫೀಲ್ಡ್ ಸೇರಿದಂತೆ ನಗರದ ಹಲವೆಡೆ ಗುರುವಾರ ಸಂಜೆಯಿಂದ ಬಿಬಿಎಂಪಿ ಅಧಿಕಾರಿಗಳು ಕಾರ್ಯಾಚರಣೆ ನಡೆಸಿದ್ದು, ಹಲವು ಕಟ್ಟಡಗಳನ್ನು ಸೀಜ್ ಮಾಡಿದ್ದಾರೆ.

ಆಸ್ತಿ ತೆರಿಗೆ ಕಟ್ಟದ ಕಟ್ಟಡ ಮಾಲೀಕರಿಗೆ ಈಗಾಗಲೇ ಬಿಬಿಎಂಪಿ ಅಧಿಕಾರಿಗಳು ಎಚ್ಚರಿಕೆ ನೀಡಿದ್ದರು. ತೆರಿಗೆ ಬಾಕಿ ಉಳಿಸಿಕೊಂಡವರ ವಿರುದ್ಧ ಕಾರ್ಯಾಚರಣೆ ನಡೆಸಲು ಬಿಬಿಎಂಪಿ ನವೆಂಬರ್‌ನಲ್ಲೇ ತಿಳಿಸಿತ್ತು. ಹಾಗೆಯೇ, ಅಧಿಕ ಮೊತ್ತ ಬಾಕಿ ಉಳಿಸಿಕೊಂಡ ಕಟ್ಟಡ ಮಾಲೀಕರ ಕಾರು ಮತ್ತು ಬೈಕ್ ಜಪ್ತಿ ಮಾಡಲು ಪಾಲಿಕೆ ಅಧಿಕಾರಿಗಳು ಆರಂಭಿಸಿದ್ದರು. ಈ ಬಗ್ಗೆ ಮೊದಲು ಮಾಲೀಕರಿಗೆ ಮೊದಲು ನೋಟಿಸ್ ನೀಡಲಾಗುತ್ತದೆ ಎಂದು ಹೇಳಿದ್ದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | 10 ಸರ್ಕಾರಿ ಆಸ್ಪತ್ರೆಗಳ ಮೇಲೆ ಲೋಕಾಯುಕ್ತ ದಾಳಿ

ಸದ್ಯ, ಮುನೀಶ್ ಮೌದ್ಗಿಲ್ಅವರು ಬಿಬಿಎಂಪಿ ಕಂದಾಯ ವಿಭಾಗದ ವಿಶೇಷ ಆಯುಕ್ತರಾಗಿದ್ದಾರೆ. ತೆರಿಗೆ ವಂಚಕರಿಗೆ ಬಿಸಿ ಮುಟ್ಟಿಸಲು ಬಿಬಿಎಂಪಿ ಕ್ರಮಗಳನ್ನು ಕೈಗೊಳ್ಳಲು ಆರಂಭಿಸಿದೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಬಾ ರಾಮ್‌ದೇವ್‌ ಮಾಲೀಕತ್ವದ ಪತಂಜಲಿಯ ಜಾಹೀರಾತಿಗೆ ನಿಷೇಧ ಹೇರಿದ ಸುಪ್ರೀಂ ಕೋರ್ಟ್

ಕೇಂದ್ರ ಸರ್ಕಾರ ಕಣ್ಮುಚ್ಚಿ ಕುಳಿತಿದೆಯೇ? ಸುಪ್ರೀಂ ಕೋರ್ಟ್‌ ಗರಂ ಸುಪ್ರೀಂ...

ಮಧ್ಯ ಪ್ರದೇಶ | ಕೆಲಸ ಕಳೆದುಕೊಳ್ಳುವ ಭಯ: ಪೇಟಿಎಂ ಪೇಮೆಂಟ್ಸ್ ಬ್ಯಾಂಕ್ ಉದ್ಯೋಗಿ ಆತ್ಮಹತ್ಯೆ

ಮಧ್ಯಪ್ರದೇಶದ ಇಂದೋರ್‌ನಲ್ಲಿ ಉದ್ಯೋಗ ಕಳೆದುಕೊಳ್ಳುವ ಭೀತಿಯಿಂದ ಪೇಟಿಎಂ ಪೇಮೆಂಟ್ಸ್ ಬ್ಯಾಂಕ್ ಲಿಮಿಟೆಡ್‌ನ...

ಮಾಲೆಗಾಂವ್‌ ಪ್ರಕರಣ | ವಿಚಾರಣೆಗೆ ಬಾರದಿದ್ದರೆ ಕ್ರಮ; ಪ್ರಮುಖ ಆರೋಪಿ ಪ್ರಜ್ಞಾ ಸಿಂಗ್‌ಗೆ ಕೋರ್ಟ್‌ ಎಚ್ಚರಿಕೆ

"ಒಂದೋ ವಿಚಾರಣೆಗೆ ಹಾಜರಾಗಿ, ಇಲ್ಲವೇ ಸೂಕ್ತ ಕ್ರಮ ಎದುರಿಸಲು ಸಿದ್ಧರಾಗಿ"...ಹೀಗಂತ ಹೇಳಿದ್ದು...

ಬದುಕಿನ ಹಾಡು ಮುಗಿಸಿದ ದೇಶದ ಖ್ಯಾತ ಗಝಲ್ ಗಾಯಕ ಪಂಕಜ್ ಉಧಾಸ್

ದೇಶದ ಹಿರಿಯ ಗಝಲ್ ಗಾಯಕ, ಪದ್ಮಶ್ರೀ ಪಂಕಜ್ ಉಧಾಸ್ ಅವರು ನಿಧನರಾಗಿದ್ದಾರೆ."ದೀರ್ಘಕಾಲದ...