ಬೆಳಗಾವಿ | ʼಕನ್ನಡ ಸಂಶೋಧನಾ ಲೋಕಕ್ಕೆ ಬಹುಶಿಸ್ತೀಯ ಅಧ್ಯಯನ ಮಾದರಿ ನೀಡಿದವರು ಡಾ.ಶಂಬಾ ಜೋಶಿʼ

Date:

Advertisements

ಕನ್ನಡ ಸಂಸ್ಕೃತಿ, ಭಾರತೀಯ ಸಂಸ್ಕೃತಿ ಹಾಗೂ ಜಾಗತಿಕ ಸಂಸ್ಕೃತಿಗಳ ಹಲವು ಜ್ಞಾನಶಿಸ್ತುಗಳನ್ನು ಆಧರಿಸಿ ಸಂಶೋಧನೆಗಿಳಿದ ಶಂಬಾ ಅವರು ಕನ್ನಡ ಸಂಶೋಧನಾ ಲೋಕಕ್ಕೆ ಬಹುಶಿಸ್ತೀಯ ಅಧ್ಯಯನ ಮಾದರಿಯನ್ನು ನೀಡಿದವರು ಎಂದು ಪ್ರೊ. ಬಸವರಾಜ ಕಲ್ಗುಡಿ ತಮ್ಮ ಅಭಿಪ್ರಾಯ ಹಂಚಿಕೊಂಡರು.

ಬೆಳಗಾವಿಯ ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯದ ಶಾಸ್ತ್ರೀಯ ಕನ್ನಡ ಭಾಷಾ ಅಧ್ಯಯನ ಸಂಸ್ಥೆ ಹಾಗೂ ಹಂಪಿಯ ಕನ್ನಡ ವಿಶ್ವವಿದ್ಯಾಲಯದ ಡಾ.ಶಂಬಾ ಜೋಶಿ ಅಧ್ಯಯನ ಪೀಠಗಳ ಸಹಯೋಗದೊಂದಿಗೆ, ಡಾ.ಶಂಬಾ ಜೋಶಿ, ಮರುಚಿಂತನೆ ಕುರಿತ ಒಂದು ದಿನದ ರಾಷ್ಟ್ರೀಯ ವಿಚಾರ ಸಂಕಿರಣದಲ್ಲಿ ಅವರು ಮುಖ್ಯ ಅತಿಥಿಯಾಗಿ ಮಾತನಾಡಿದರು.

ಶಂಬಾ ಅವರು ಕನ್ನಡ ಸಂಶೋಧನಾ ಲೋಕಕ್ಕೆ ಬಹುಶಿಸ್ತೀಯ ಮಾದರಿಯ ಅಧ್ಯಯನ ಕ್ರಮಕ್ಕೆ ಮೇಲ್ಪಂಕ್ತಿಯನ್ನು ಹಾಕಿದವರು. ಅವರ ಕುರಿತು ಅನೇಕ ನೆಲೆಗಳಲ್ಲಿ ಅಧ್ಯಯನಗಳು ನಡೆಯಬೇಕಿದೆ. ಪ್ರಸ್ತುತ ದಿನಗಳಲ್ಲಿ ಅವರ ಅಧ್ಯಯನಗಳ ಪ್ರಸ್ತುತತೆಯ ಅನಿವಾರ್ಯತೆಯ ಕುರಿತು ವಿವರಿಸಿದರು.

Advertisements

ಸಮಾರಂಭವನ್ನು ಉದ್ಘಾಟಿಸಿದ ಕನ್ನಡ ವಿಶ್ವವಿದ್ಯಾಲಯದ ಕುಲಪತಿಗಳಾದ ಪ್ರೊ. ಡಿ.ವಿ. ಪರಮಶಿವಮೂರ್ತಿ, ಮಾನವಿಕ ವಿಜ್ಞಾನಗಳ ಸಂಶೋಧನೆಗೆ ಮೂಲಗಾಮಿ ಚಿಂತನೆಯ ಪರಿಕಲ್ಪನೆಯನ್ನು ಬೆಳಗಾವಿ ಜಿಲ್ಲೆಯವರಾದ ಡಾ. ಶಂಬಾ ಅವರೇ ಮೊದಲು ನಾಡಿಗೆ ನೀಡಿದರು. ಅಂದಿನಿಂದ ಬಹುಶಿಸ್ತೀಯ ಹಾಗೂ ಅಂತರ್‌ಶಿಸ್ತೀಯ ಮಾನವಿಕ ಅಧ್ಯಯನಗಳು ಹೊಸದಾಗಿ ಕಟ್ಟಿಕೊಳ್ಳತೊಡಗಿದವು. ಆ ಕಾರಣಕ್ಕಾಗಿ ಬೆಳಗಾವಿ ಜಿಲ್ಲೆಯ ಸಂಶೋಧನಾ ಪರಂಪರೆಯನ್ನು ಅಭಿನಂದಿಸಬೇಕಾಗಿದೆ ಎಂದರು.

ಅಧ್ಯಕ್ಷತೆ ವಹಿಸಿದ್ದ ಪ್ರೊ. ಎಸ್.ಎಂ. ಗಂಗಾಧರಯ್ಯ ಅವರು ನಾಡಿನ ಶ್ರೇಷ್ಠ ಸಂಸ್ಕೃತಿ ಚಿಂತಕನ ಕುರಿತು ಹೊಸದಾಗಿ ಅಧ್ಯಯನಗಳು ಕಟ್ಟಿಕೊಳ್ಳಬೇಕಾಗಿದೆ. ಡಾ. ಶಂಬಾ ಅವರು ಬೆಳಗಾವಿ ಜಿಲ್ಲೆಯ ತವರಿನವರಾದರೂ ಬೆಳಗಾವಿ ಜಿಲ್ಲೆಯ ಜನತೆಗೆ ಡಾ. ಶಂಬಾ ಅವರ ವಿಚಾರಧಾರೆಗಳು ತಲುಪುವಲ್ಲಿ ಸಫಲವಾಗಿಲ್ಲ. ಈಗ ಆ ಕಾರ್ಯವನ್ನು ಕನ್ನಡ ಅಧ್ಯಯನ ಸಂಸ್ಥೆಯು ಕೈಗೆತ್ತಿಕೊಂಡಿದೆ ಎಂದರು.

ವಿಚಾರ ಸಂಕಿರಣದಲ್ಲಿ ಡಾ. ಶಂಬಾ: ಸ್ಥಳನಾಮಗಳ ಪರಿಕಲ್ಪನೆಯ ಅಧ್ಯಯನಗಳು ಹಾಗೂ ಕರ್ನಾಟಕ ಸಂಸ್ಕೃತಿಯ ಪೂರ್ವ ಪೀಠಿಕೆ ಮತ್ತು ಕನ್ನಡತ್ವದ ಪ್ರಾಚೀನ ಶೋಧಗಳು ಎನ್ನುವ ಪ್ರಬಂಧಗಳು ಮಂಡನೆಯಾದವು.

ಡಾ. ಎಸ್.ಎಸ್. ಅಂಗಡಿ, ಡಾ. ಜಿ.ವಿ. ರಾಜಣ್ಣ, ಡಾ. ಕೆ.ರಾಮರೆಡ್ಡಿ, ಡಾ. ವಿ.ಎಸ್. ಮಾಳಿ, ಡಾ. ವಾಯ್.ಎಂ. ಯಾಕೊಳ್ಳಿ, ದೀಪಕ ಕೃಷ್ಣ ಆಲೂರು ಅಧ್ಯಯನ ಪೀಠದ ಸಂಚಾಲಕರಾದ ಪ್ರೊ. ವಿರೂಪಾಕ್ಷಿ ಪೂಜಾರಹಳ್ಳಿ, ಡಾ. ಶೋಭಾ ನಾಯಕ ಈ ಗೋಷ್ಠಿಗಳಲ್ಲಿ ಪಾಲ್ಗೊಂಡಿದ್ದರು.

ಡಾ. ಚಲುವರಾಜು ಅವರು ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ್ದರು. ಪ್ರೊ. ಗುಂಡಣ್ಣ ಕಲಬುರ್ಗಿ ಅವರು ಉಪಸ್ಥಿತರಿದ್ದರು. ವಿವಿಧ ಗೋಷ್ಠಿಗಳನ್ನು ಡಾ. ಗಜಾನನ ನಾಯ್ಕ, ಡಾ. ಮಹೇಶ ಗಾಜಪ್ಪನವರ, ಡಾ. ಪಿ. ನಾಗರಾಜ, ಡಾ. ಹನುಮಂತಪ್ಪ ಸಂಜೀವಣ್ಣನವರ ನಡೆಸಿಕೊಟ್ಟರು. ವಿಶ್ವವಿದ್ಯಾಲಯದ ಸಂಯೋಜಿತ ಕಾಲೇಜುಗಳ ಅಧ್ಯಾಪಕರುಗಳು, ಸ್ನಾತಕೋತ್ತರ ವಿಭಾಗಗಗಳ ಅಧ್ಯಾಪಕರುಗಳು, ಸಂಶೋಧನಾ ವಿದ್ಯಾರ್ಥಿಗಳು, ಸ್ನಾತಕೋತ್ತರ ವಿದ್ಯಾರ್ಥಿಗಳು ಹಾಜರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಚಿವ ಕೆ ಎನ್ ರಾಜಣ್ಣ ರಾಜೀನಾಮೆ ನೀಡಿಲ್ಲ, ಬದಲಿಗೆ ಸಂಪುಟದಿಂದ ಉಚ್ಚಾಟನೆ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಹಕಾರ ಸಚಿವ ಕೆ ಎನ್ ರಾಜಣ್ಣ ಅವರಿಗೆ...

ರಾಯಚೂರು | ಬಣದಲ್ಲಿ ಅಸಮಾಧಾನ : ಎಂಎಲ್ ಸಿ ಕಾರು ತಡೆ ವಾಗ್ವಾದ

ಎಂಎಲ್ ಸಿ ಶರಣಗೌಡ ಪಾಟೀಲ್‌ ಅವರ ಕಾರಿಗೆ ಡಿ ಎಸ್ ಹುಲಗೇರಿ...

ಕಲಬುರಗಿ | ಮೂರು ತಿಂಗಳಿಂದ ಪಾವತಿಯಾಗದ ʼಗೃಹಲಕ್ಷ್ಮೀʼ ಹಣ : ವೆಲ್ಫೇರ್ ಪಾರ್ಟಿ ಆಕ್ರೋಶ

ಕರ್ನಾಟಕ ರಾಜ್ಯ ಸರ್ಕಾರ ಜಾರಿಗೊಳಿಸಿದ ಪಂಚ ಗ್ಯಾರಂಟಿಯ ಗೃಹಲಕ್ಷ್ಮೀ ಯೋಜನೆಯ ಹಣ...

ಬೆಳಗಾವಿ : ಮೂರು ವರ್ಷದ ಹೆಣ್ಣು ಮಗುವನ್ನು ಆಸ್ಪತ್ರೆಯಲ್ಲಿ ಬಿಟ್ಟು ಹೋದ ತಂದೆ ತಾಯಿ

ತಾಯಿಯ ಮಡಿಲಿಗೆ ತವಕಿಸುತ್ತಿರುವ ಮೂರು ವರ್ಷದ ಹೆಣ್ಣುಮಗುವನ್ನು ಆಸ್ಪತ್ರೆಯಲ್ಲಿ ತಂದೆ ತಾಯಿಗಳು...

Download Eedina App Android / iOS

X