ಗಣೇಶ ಉತ್ಸವದ ಹಿನ್ನಲೆಯಲ್ಲಿ ಬೆಳಗಾವಿ ಕಮೀಷನರೇಟ್ ವ್ಯಾಪ್ತಿಯಲ್ಲಿ ಸಾರ್ವಜನಿಕ ಶಾಂತಿ ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ಬೆಳಗಾವಿ ತಾಲೂಕಿನಾದ್ಯಂತ ಸಾರಾಯಿ ಮಾರಾಟ ನಿಷೇಧಿಸಲಾಗಿದೆ.
ಆಗಸ್ಟ್ 27 ರಿಂದ ಸೆಪ್ಟೆಂಬರ್ 6ರವರೆಗೆ ಒಟ್ಟು 11 ದಿನಗಳ ಕಾಲ ಗಣೇಶ ಉತ್ಸವ ನಡೆಯಲಿದ್ದು, ಯಾವುದೇ ಅಹಿತಕರ ಘಟನೆ ನಡೆಯದಂತೆ ಮುಂಜಾಗೃತಾ ಕ್ರಮವಾಗಿ ಈ ನಿರ್ಧಾರ ಕೈಗೊಳ್ಳಲಾಗಿದೆ.
ಈ ಹಿನ್ನೆಲೆಯಲ್ಲಿ ಆಗಸ್ಟ್ 26ರ ಮಧ್ಯರಾತ್ರಿಯಿಂದ ಆಗಸ್ಟ್ 28ರ ಬೆಳಿಗ್ಗೆ 6 ಗಂಟೆಯವರೆಗೆ ತಾಲೂಕಿನ ಎಲ್ಲಾ ಹೋಟೆಲ್, ಬಾರ್, ವೈನ್ ಶಾಪ್ಗಳಲ್ಲಿ ಸಾರಾಯಿ ಮಾರಾಟ ಸಂಪೂರ್ಣವಾಗಿ ನಿಷೇಧಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಪೊಲೀಸರು ಸಾರ್ವಜನಿಕರಿಂದ ಸಹಕಾರ ಕೋರಿ, ನಿಯಮ ಉಲ್ಲಂಘನೆ ಮಾಡಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದ್ದಾರೆ.