ಬೆಳಗಾವಿ | ಟ್ರ್ಯಾಕ್ಟರ್‌ ಕಳ್ಳತನ ಪ್ರಕರಣದಲ್ಲಿ ಮೂವರು ಬಂಧನ

Date:

ಮನೆಯ ಮುಂದೆ ನಿಲ್ಲಿಸಿದ್ದ ಮಹೀಂದ್ರಾ ಅರ್ಜುನ್ ಟ್ರ್ಯಾಕ್ಟ‌ರ್ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.

- Advertisement -

ಚಿಕ್ಕೋಡಿ ತಾಲೂಕಿನ ಕರೋಶಿ ಗ್ರಾಮದ ಬಸವರಾಜ ಶಿವರಾಯಿ ಗಾಡಿವಡ್ಡರ ಅವರು ಸೆ.22ರಂದು ಪೊಲೀಸರಿಗೆ ದೂರು ನೀಡಿದ್ದರು. ಸೆ.20ರ ರಾತ್ರಿ 10ರಿಂದ ಸೆ.21ರ ಬೆಳಗಿನ 5 ಗಂಟೆಯ ನಡುವಿನ ಅವಧಿಯಲ್ಲಿ ಮನೆಯ ಮುಂದೆ ನಿಲ್ಲಿಸಿದ್ದ ಟ್ರ್ಯಾಕ್ಟ‌ರ್ ಕಳ್ಳತನವಾಗಿರುವುದಾಗಿ ದೂರಿನಲ್ಲಿ ತಿಳಿಸಿದ್ದರು. ಈ ಕುರಿತು ಚಿಕ್ಕೋಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಪ್ರಕರಣದ ತನಿಖೆಗಾಗಿ ಬೆಳಗಾವಿ ಜಿಲ್ಲಾ ಎಸ್‌ಪಿ ಕೆ. ರಾಮರಾಜನ್ ಅವರ ಸೂಚನೆಯಂತೆ ಪಿಎಸ್‌ಐ ಶಿವಕುಮಾರ ಬಿರಾದಾರ ನೇತೃತ್ವದಲ್ಲಿ ತನಿಖಾ ತಂಡ ರಚಿಸಲಾಗಿತ್ತು. ಹೆಚ್ಚುವರಿ ಎಸ್‌ಪಿ ಆ‌ರ್.ಬಿ. ಬಸ್ಸರಗಿ, ಚಿಕ್ಕೋಡಿ ಡಿವೈಎಸ್‌ಪಿ ಗೋಪಾಲಕೃಷ್ಣ ಗೌಡರ ಹಾಗೂ ಸಿಪಿಐ ವಿಶ್ವನಾಥ ಚೌಗಲೆ ಅವರ ಮಾರ್ಗದರ್ಶನದಲ್ಲಿ ತನಿಖೆ ನಡೆಸಿದ ಪೊಲೀಸರು ಅ.2ರಂದು ಮೂವರು ಆರೋಪಿಗಳನ್ನು ಪತ್ತೆಹಚ್ಚಿ ಬಂಧಿಸಿದ್ದಾರೆ.

ಆರೋಪಿಗಳನ್ನು ಪತ್ತೆಹಚ್ಚುವಲ್ಲಿ ಸಿಪಿಐ ವಿಶ್ವನಾಥ ಚೌಗಲೆ, ಪಿಎಸ್‌ಐ ಶಿವಕುಮಾರ ಬಿರಾದಾರ, ಸಿಬ್ಬಂದಿಗಳಾದ ಎಸ್.ಆರ್. ಭಾಗಾಯಿ, ಗಜಾನನ ಎಸ್. ಕಾಂಬಳೆ, ಎಸ್.ಪಿ. ಗಲಗಲಿ, ರಾಮು ಜಿ. ಕುಳೊಳ್ಳಿ, ವಿಜಯಕುಮಾರ ಬಿ. ಪಾಟೀಲ, ರಮೇಶ ಎಸ್. ಹಾದಿಮನಿ ಹಾಗೂ ತಾಂತ್ರಿಕ ವಿಭಾಗದ ವಿನೋದ ಠಕ್ಕನ್ನವರ ಕಾರ್ಯವನ್ನು ಬೆಳಗಾವಿ ಜಿಲ್ಲಾ ಎಸ್‌ಪಿ ಕೆ. ರಾಮರಾಜನ್ ಶ್ಲಾಘಿಸಿದ್ದಾರೆ.

ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಹೆರಾಯಿನ್ ಮಾರಾಟ ಆರೋಪ: ಓರ್ವನ ಬಂಧನ

ಬೆಳಗಾವಿ ನಗರದಲ್ಲಿ ಅಕ್ರಮವಾಗಿ ಹೆರಾಯಿನ್ ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ಸಿಸಿಬಿ...

ಬೆಳಗಾವಿಯಲ್ಲಿ 15 ಸಾವಿರ ಮತದಾರರ ಹೆಸರು ಅಳಿಸುವ ಸಂಚು: ರಾಹುಲ್ ಗಾಂಧಿ

ಬೆಳಗಾವಿ ಜಿಲ್ಲೆಯಲ್ಲಿ ಸುಮಾರು 15 ಸಾವಿರ ಮತದಾರರ ಹೆಸರುಗಳನ್ನು ಒಂದೇ ಬಾರಿಗೆ...

ಬೆಳಗಾವಿ | ಹೋರಿಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಕಿಡಿಗೇಡಿಗಳು

ಯಾರ ತಂಟೆಗೂ ಹೋಗದೆ ತಿರುಗಾಡುತ್ತಿದ್ದ ಮೂಕ ಪ್ರಾಣಿಯೊಂದರ ಮೇಲೆ ಅಮಾನವೀಯ ಕೃತ್ಯ...