ಬೆಳಗಾವಿ | ಹೆದ್ದಾರಿಯಲ್ಲಿ ಸಂಚಾರ ಆರಂಭವಾದ ಬೆನ್ನಲ್ಲೇ ದುರಂತ ಬೈಕ್‌ಗೆ ಲಾರಿ ಡಿಕ್ಕಿ: ತಂದೆ-ಮಗಳು ಸ್ಥಳದಲ್ಲೇ ಸಾವು

Date:

ಕಬ್ಬು ಬೆಳೆಗಾರರ ಹೋರಾಟದ ಹಿನ್ನೆಲೆಯಲ್ಲಿ ಸ್ಥಗಿತಗೊಂಡಿದ್ದ ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನ ಸಂಚಾರ ಪುನರಾರಂಭಗೊಂಡ ಬೆನ್ನಲ್ಲೇ ಭೀಕರ ಅಪಘಾತ ಸಂಭವಿಸಿದೆ. ಬೆಳಗಾವಿ ಜಿಲ್ಲೆಯ ನಿಪ್ಪಾಣಿ ಸಮೀಪದ ಸ್ತವನಿಧಿ ಘಾಟ್‌ನ ಸ್ಪೀಡ್ ಬ್ರೇಕರ್ ಬಳಿ ಬೈಕ್‌ಗೆ ಹಿಂದಿನಿಂದ ಲಾರಿ ಡಿಕ್ಕಿ ಹೊಡೆದ ಪರಿಣಾಮ ಪೊಲೀಸ್‌ ಹೆಡ್‌ಕಾನ್ಸ್‌ಟೇಬಲ್ ಹಾಗೂ ಅವರ ಮಗಳು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

- Advertisement -

ನಿಪ್ಪಾಣಿ ನಗರ ಪೊಲೀಸ್‌ ಠಾಣೆಯ ಹೆಡ್‌ಕಾನ್ಸ್‌ಟೇಬಲ್‌ ಪುಂಡಲೀಕ ಹಟ್ಟಿ (50) ಹಾಗೂ ಅವರ ಮಗಳು ನಿಖಿತಾ (24) ಮೃತಪಟ್ಟ ದುರ್ದೈವಿಗಳು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಸುಪ್ತ ಆಯಾಸದ ಹಿಂದೆ ಅಡಗಿರುವ ರಕ್ತಹೀನತೆ: ಕರ್ನಾಟಕದ ಅರ್ಧದಷ್ಟು...

ದೈನಂದಿನ ಒತ್ತಡ, ನಿದ್ರೆಯ ಕೊರತೆ ಅಥವಾ ಬಿಡುವಿಲ್ಲದ ಜೀವನಶೈಲಿಯೆಂದು ನಿರ್ಲಕ್ಷಿಸುವ ಆಯಾಸದ ಹಿಂದೆ ರಕ್ತಹೀನತೆ ಅಡಗಿರಬಹುದು. ಕರ್ನಾಟಕದಲ್ಲಿ ಸಂತಾನೋತ್ಪತ್ತಿ ವಯಸ್ಸಿನ ಮಹಿಳೆಯರಲ್ಲಿ ಶೇ. 50ಕ್ಕಿಂತ ಹೆಚ್ಚು ಮಂದಿ ರಕ್ತಹೀನತೆಯಿಂದ ಬಳಲುತ್ತಿರುವುದು ಕಳವಳಕ್ಕೆ ಕಾರಣವಾಗಿದೆ. ದೈನಂದಿನ...

20 ಬಂಡುಕೋರ ಟಿಎಂಸಿ ಸಂಸದರು ಮತ ಚಲಾಯಿಸಬಹುದೇ; ಮುಂದೆ...

ಡಿಲಿಮಿಟೇಷನ್ ಹಾಗೂ ಮಹಿಳಾ ಮೀಸಲಾತಿ ಸಂವಿಧಾನ ತಿದ್ದುಪಡಿ ಮಸೂದೆಯನ್ನು ಮುಂದಿನ ವಾರ ಸಂಸತ್ತಿನಲ್ಲಿ ಮಂಡಿಸಲು ಕೇಂದ್ರ ಸರ್ಕಾರ ಸಜ್ಜಾಗಿರುವ ಹೊತ್ತಿನಲ್ಲಿ, ಲೋಕಸಭಾ ಸ್ಪೀಕರ್ ಮುಂದೆ ಅನರ್ಹತೆ ವಿಚಾರಣೆ ಎದುರಿಸುತ್ತಿರುವ 20 ಬಂಡುಕೋರ ಟಿಎಂಸಿ...

ಸಿನಿಮಾ ಪ್ರಶಸ್ತಿಗೆ ಅರ್ಜಿ ಸಲ್ಲಿಕೆ ಪ್ರಕ್ರಿಯೆಯ ಏಳು ಸುತ್ತಿನ...

ಪ್ರಶಸ್ತಿಗೆ ಮತ್ತು ಸಬ್ಸಿಡಿಗೆ ಅರ್ಜಿ ಸಲ್ಲಿಸಲು ನಿರ್ಮಾಪಕರು, ನಿರ್ದೇಶಕರು ಅನೇಕ ತೊಂದರೆಗಳನ್ನು ಎದುರಿಸುತ್ತಿದ್ದಾರೆ. ಅದಕ್ಕೆ ಮುಖ್ಯ ಕಾರಣ, ನಮ್ಮ ಚಿತ್ರರಂಗದಲ್ಲಿ ಪೂರ್ಣ ಪ್ರಮಾಣದ ನಿರ್ಮಾಣ ಸಂಸ್ಥೆಗಳಿರುವುದು ಕೇವಲ ಬೆರಳೆಣಿಕೆಯಷ್ಟು, ಉಳಿದಂತೆ ಬಹುತೇಕ ನಿರ್ಮಾಣ...

ಪುಂಡಲೀಕ ಹಟ್ಟಿ ಅವರು ಮಗಳೊಂದಿಗೆ ಬೈಕ್‌ನಲ್ಲಿ ಪ್ರಯಾಣಿಸುತ್ತಿದ್ದಾಗ ಸ್ತವನಿಧಿ ಘಾಟ್‌ನ ಸ್ಪೀಡ್ ಬ್ರೇಕರ್ ಬಳಿ ಬೈಕ್‌ಗೆ ಬ್ರೇಕ್‌ ಹಾಕಿದ್ದಾರೆ. ಈ ವೇಳೆ ಹಿಂದಿನಿಂದ ವೇಗವಾಗಿ ಬಂದ ಲಾರಿ ಬೈಕ್‌ಗೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಡಿಕ್ಕಿಯ ರಭಸಕ್ಕೆ ತಂದೆ-ಮಗಳು ರಸ್ತೆಗೆ ಬಿದ್ದಿದ್ದು, ಅವರ ಮೇಲೆ ಲಾರಿ ಹರಿದ ಪರಿಣಾಮ ಇಬ್ಬರೂ ಸ್ಥಳದಲ್ಲೇ ಪ್ರಾಣ ಕಳೆದುಕೊಂಡಿದ್ದಾರೆ.

ಕಬ್ಬು ಬೆಳೆಗಾರರ ಪ್ರತಿಭಟನೆಯಿಂದಾಗಿ ಸ್ಥಗಿತಗೊಂಡಿದ್ದ ಹೆದ್ದಾರಿಯಲ್ಲಿ ವಾಹನ ಸಂಚಾರ ಆರಂಭವಾದ ಬೆನ್ನಲ್ಲೇ ಈ ದುರಂತ ಸಂಭವಿಸಿರುವುದು ದುರದೃಷ್ಟಕರ. ತಂದೆ-ಮಗಳು ಇಬ್ಬರೂ ಮೃತಪಟ್ಟಿರುವುದರಿಂದ ಪೊಲೀಸ್‌ ಇಲಾಖೆ ಹಾಗೂ ಸ್ಥಳೀಯರಲ್ಲಿ ಶೋಕದ ಛಾಯೆ ಆವರಿಸಿದೆ.

ಘಟನೆಗೆ ಸಂಬಂಧಿಸಿದಂತೆ ನಿಪ್ಪಾಣಿ ನಗರ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ.

ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ಗ್ರಾಮವಾರು ಗ್ಯಾರಂಟಿ ಸಮಿತಿ ಸದಸ್ಯರು ಕೆಲಸ ನಿರ್ವಹಿಸಲು ಸಹಕರಿಸಿ: ಅಶೋಕ ಮಂದಾಲಿ

ವಾರ್ಡ್, ಗ್ರಾಮವಾರು ಗ್ಯಾರಂಟಿ ಯೋಜನೆ ಸಮಿತಿಗಳನ್ನು ರಚಿಸಲಾಗಿದ್ದು ಸಮಿತಿ ಸದಸ್ಯರುಗಳು ಪಂಚ...

ಮಂಡ್ಯ। ಒಳ್ಳೆಯ ರಾಜಕಾರಣ ತರಲು ಜಾಗೃತ ಕರ್ನಾಟಕದಲ್ಲಿ ಯುವಜನತೆ  

ರಾಜಕೀಯವು ಸರಿಯಿಲ್ಲ ಎಂದು ದೂರ ಸರಿಯುವ ಬದಲು ಯುವಜನರು ಹೊಸ...

ಸೋನಿಯಾ ಆತ್ಮಕಥೆಯಲ್ಲಿ ನಿತೀಶ್ ನಿರ್ಗಮನದ ಉಲ್ಲೇಖ; ಕಾಂಗ್ರೆಸ್-ಜೆಡಿಯು ನಡುವೆ ವಾಕ್ಸಮರ! 

ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರು ತಮ್ಮ ಆತ್ಮಕಥೆ ‘ಬಿಲಾಂಗಿಂಗ್: ಎ...

ಚಿಕ್ಕಮಗಳೂರು | ದೇವಿರಮ್ಮ ದರ್ಶನ: ಹೃದಯಘಾತದಿಂದ ವ್ಯಕ್ತಿ ಸಾವು 

ಚಂದ್ರದ್ರೋಣ ಪರ್ವತ ಶ್ರೇಣಿಯಲ್ಲಿರುವ ಪ್ರಸಿದ್ಧ ದೇವಿರಮ್ಮನ ಬೆಟ್ಟಕ್ಕೆ ಜನ ಸಾಗರ ಹರಿದು...